PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಾಜ್ಯದಲ್ಲಿ ಬದಲಾಗಲಿದೆ ವಾತಾವರಣ : ಹಗಲಿನಲ್ಲಿ ಹೆಚ್ಚಿನ ತಾಪಮಾನವಿದ್ದರೂ, ರಾತ್ರಿ ಮತ್ತು ಮುಂಜಾನೆಯ ವೇಳೆ ಚಳಿಯ ವಾತಾವರಣ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ರಾಜ್ಯದಲ್ಲಿ ಬದಲಾಗಲಿದೆ ವಾತಾವರಣ : ಹಗಲಿನಲ್ಲಿ ಹೆಚ್ಚಿನ ತಾಪಮಾನವಿದ್ದರೂ, ರಾತ್ರಿ ಮತ್ತು ಮುಂಜಾನೆಯ ವೇಳೆ ಚಳಿಯ ವಾತಾವರಣ
ಬೆಂಗಳೂರುಮುಖಪುಟ

ರಾಜ್ಯದಲ್ಲಿ ಬದಲಾಗಲಿದೆ ವಾತಾವರಣ : ಹಗಲಿನಲ್ಲಿ ಹೆಚ್ಚಿನ ತಾಪಮಾನವಿದ್ದರೂ, ರಾತ್ರಿ ಮತ್ತು ಮುಂಜಾನೆಯ ವೇಳೆ ಚಳಿಯ ವಾತಾವರಣ

Prathinidhi News
Last updated: January 1, 2026 3:58 pm
Prathinidhi News
Published January 1, 2026
Share
SHARE

ಬೆಂಗಳೂರು, ಜನವರಿ 1, 2026 :ರಾಜ್ಯದ ಹಲವು ಭಾಗದಲ್ಲಿ ವಾತಾವರಣ ಬದಲಾಗಿದೆ. ಇಂದು ರಾಜ್ಯದ (ಜನವರಿ 1), ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಕವಿದ ವಾತಾವರಣ ಇದ್ದು, ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕನಿಷ್ಠ ತಾಪಮಾನ 13°C ಮತ್ತು 19°C ನಡುವೆ ಇರುತ್ತದೆ. ಗರಿಷ್ಠ ತಾಪಮಾನ ಸುಮಾರು 27°C-28°C ಇರಲಿದೆ. ಬೀದರ್ , ವಿಜಯಪುರ ಮತ್ತು ಕಲಬುರಗಿ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಶೀತ ಅಲೆಯ ಪರಿಸ್ಥಿತಿ ಇರಲಿದ್ದು, ಈಗಾಗಲೇ ಎಲ್ಲೋ ಅಲರ್ಟ್​ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ ಗಮನಾರ್ಹವಾಗಿ ಕಡಿಮೆಯಾಗಿದೆ. ಬೀದರ್ 6.4°C, ವಿಜಯಪುರ 9.9°C, ಬೆಳಗಾವಿ 8.7°Cರಷ್ಟು ತಾಪಮಾನ ಇದೆ.

ಕರಾವಳಿ ಕರ್ನಾಟಕದಲ್ಲಿ ಬೆಚ್ಚಗಿನ ಮತ್ತು ಇಬ್ಬಣಿಯಿಂದ ಕೂಡಿದ್ದು, ಕನಿಷ್ಠ ತಾಪಮಾನವು 19°C-20°C ಇರುತ್ತದೆ. ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಬೆಳಿಗ್ಗೆ ತಂಪಾದ ವಾತಾವರಣ ಇರಲಿದೆ. ಮಂಗಳೂರು ಭಾಗದಲ್ಲಿ ಗರಿಷ್ಠ ತಾಪಮಾನ ಸುಮಾರು 28°C-30°C , ಕನಿಷ್ಠ ತಾಪಮಾನ ಸುಮಾರು 20°C-21°C ಇರಲಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ, ಒಣ ಹವಾಮಾನವಿರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಳೆಯಾಗುವ ಸಾಧ್ಯತೆ ಬಹಳ ಕಡಿಮೆ ಎಂದು ಹೇಳಿದೆ.

ಬೆಳಗಾವಿ (8.7°C), ಬಾಗಲಕೋಟೆ (9.9°C), ರಾಯಚೂರು (10.4°C), ಧಾರವಾಡ ಮತ್ತು ಗದಗ (ತಲಾ 10.7°C) ತೀವ್ರ ಚಳಿಗಾಲದ ಚಳಿಯನ್ನು ಅನುಭವಿಸಿವೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ, ಚಿಕ್ಕಮಗಳೂರು (11.1°C), ಹಾಸನ (13.1°C), ತುಮಕೂರು (13.1°C), ಕೋಲಾರ (13.3°C) ಮತ್ತು ಚಿತ್ರದುರ್ಗ (13°C) ಶೀತದ ವಾತಾವರಣವನ್ನು ಹೊಂದಿದೆ. ಇನ್ನು ಬೆಂಗಳೂರಿನ ಐಎಂಡಿ ಪ್ರಕಾರ, ಬೆಂಗಳೂರಿನಲ್ಲಿ ತಕ್ಷಣಕ್ಕೆ ಮಳೆಯಾಗುವ ಮುನ್ಸೂಚನೆ ಇಲ್ಲ, ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ. ಮೋಡ ಕವಿದ ವಾತಾವರಣ ಕೂಡ ಹೆಚ್ಚಾಗಲಿದೆ. ರಾತ್ರಿ ಹೊತ್ತು ಕೂಡ ತಂಪಾದ ಗಾಳಿ ಇರಲಿದೆ.

- ಜಾಹೀರಾತು -

ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಬೆಳಿಗ್ಗೆ ಮತ್ತು ಮಧ್ಯಾಹ್ನದ ವೇಳೆ ತಂಪಾದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ನಗರದಲ್ಲಿ ಹಗಲಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವಿದ್ದರೂ, ರಾತ್ರಿ ಮತ್ತು ಮುಂಜಾನೆಯ ವೇಳೆ ಚಳಿಯ ವಾತಾವರಣ ಇರಲಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಮುಖಪುಟ

ನಿಲ್ಲದ ಹುಲಿ ಹಾವಳಿ ; ಪಶುವೈದ್ಯರ ಕೊರತೆಯಿಂದಾಗಿ ಸ್ಥಗಿತಗೊಂಡ ಕಾರ್ಯಾಚರಣೆ – ಹುಲಿ ಸೆರೆಗೆ ನೂತನ ಪ್ಲಾನ್‌ !

December 22, 2025
ನಂಜನಗೂಡುಮುಖಪುಟಮೈಸೂರು ಗ್ರಾಮಾಂತರ

ನಂಜನಗೂಡು: ಯುವಕನ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ 17 ವರ್ಷದ ಅಪ್ರಾಪ್ತೆ; ಕಿರಾತಕ ಆದಿತ್ಯನ ವಿರುದ್ಧ ಪ್ರಕರಣ ದಾಖಲು

January 8, 2026
ಮುಖಪುಟಮೈಸೂರು ನಗರರಾಜಕೀಯ

ಸಿಎಂ ತವರಿನಲ್ಲಿ ಕೇಳಿಬಂತು ದಲಿತ ಮುಖ್ಯಮಂತ್ರಿ ಕೂಗು: ಡಾ. ಜಿ. ಪರಮೇಶ್ವರ್ ಪರ ಅಭಿಮಾನಿಗಳ ಬ್ಯಾಟಿಂಗ್

December 29, 2025
ಮುಖಪುಟಮೈಸೂರು ನಗರ

ಮೈಸೂರು: ಜಮೀನು ವಿವಾದಕ್ಕೆ ಬೆಳೆ ನಾಶ, ಹಲ್ಲೆ; ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

December 29, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?