ಚನ್ನರಾಯಪಟ್ಟಣ, ಜನವರಿ 6, 2025 : ತಾಲ್ಲೂಕಿನ ಗುಲಸಿಂದ ಗ್ರಾಮದ ಬಳಿಯ ಬೆಂಗಳೂರು-ಹಾಸನ ಬೈಪಾಸ್ ರಸ್ತೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸ್ಥಳದಲ್ಲೇ ಮೃತಪಟ್ಟಿದೆ.

ಮೃತಪಟ್ಟ ಚಿರತೆಯು ಸುಮಾರು 3 ರಿಂದ 4 ವರ್ಷದ ಗಂಡು ಚಿರತೆಯಾಗಿದೆ. ಮಂಗಳವಾರ ಬೆಳಗಿನ ಜಾವ ಆಹಾರದ ಹುಡುಕಾಟದಲ್ಲಿ ಅಥವಾ ಮಾರ್ಗ ಬದಲಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ 75 ಅನ್ನು ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಬೆಳಿಗ್ಗೆ 8 ಗಂಟೆ ಸುಮಾರಿಗೆ ಅಪಘಾತವನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸ್ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿ, ಚಿರತೆಯ ದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
