PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ಜಿಲ್ಲೆಯಲ್ಲಿ ಹುಲಿ ಹಾವಳಿ: ಹಸುವಿನ ಮೇಲೆ ದಾಳಿ, ಗ್ರಾಮಸ್ಥರಿಂದ ರಸ್ತೆ ತಡೆದು ತೀವ್ರ ಪ್ರತಿಭಟನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ಜಿಲ್ಲೆಯಲ್ಲಿ ಹುಲಿ ಹಾವಳಿ: ಹಸುವಿನ ಮೇಲೆ ದಾಳಿ, ಗ್ರಾಮಸ್ಥರಿಂದ ರಸ್ತೆ ತಡೆದು ತೀವ್ರ ಪ್ರತಿಭಟನೆ
ಮುಖಪುಟಮೈಸೂರು ಗ್ರಾಮಾಂತರ

ಮೈಸೂರು ಜಿಲ್ಲೆಯಲ್ಲಿ ಹುಲಿ ಹಾವಳಿ: ಹಸುವಿನ ಮೇಲೆ ದಾಳಿ, ಗ್ರಾಮಸ್ಥರಿಂದ ರಸ್ತೆ ತಡೆದು ತೀವ್ರ ಪ್ರತಿಭಟನೆ

Prathinidhi News
Last updated: January 12, 2026 12:38 pm
Prathinidhi News
Published January 12, 2026
Share
SHARE

ಹುಣಸೂರು, ಜನವರಿ 12, 2026: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ನಿರಂತರವಾಗಿ ಮುಂದುವರಿದಿದ್ದು, ಸಾರ್ವಜನಿಕರಲ್ಲಿ ತೀವ್ರ ಭೀತಿ ಮೂಡಿಸಿದೆ. ಇಂದು ಹುಣಸೂರು ತಾಲೂಕಿನ ಗುರುಪುರ ಸಮೀಪದ ಗೌಡನ ಕಟ್ಟೆ ಎಂಬಲ್ಲಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ಭೀಕರವಾಗಿ ದಾಳಿ ನಡೆಸಿದೆ. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಸಮರ ಸಾರಿದ್ದಾರೆ.

ಹಸುವಿನ ಮೇಲೆ ದಾಳಿಯಾದ ತಕ್ಷಣ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರೂ, ಅವರು ಸಕಾಲಕ್ಕೆ ಸ್ಥಳಕ್ಕೆ ಆಗಮಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರ ಆಕ್ರೋಶ ಕಟ್ಟೆ ಒಡೆದಿದೆ. ಗುರುಪುರ ಬಳಿಯ ಹೊಸೂರು ಗೇಟ್ ಬಳಿ ಜಮಾಯಿಸಿದ ನೂರಾರು ಜನರು, ರಸ್ತೆಯಲ್ಲೇ ಟೈರ್‌ಗಳಿಗೆ ಬೆಂಕಿ ಹಚ್ಚುವ ಮೂಲಕ ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಕಾರಣ ಹುಣಸೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಸಾರ್ವಜನಿಕರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಈ ಭಾಗದಲ್ಲಿ ಹುಲಿ ಹಾವಳಿ ಹೆಚ್ಚಾಗಿದ್ದು, ಕೂಡಲೇ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಅರಣ್ಯಾಧಿಕಾರಿಗಳ ವಿಳಂಬ ಧೋರಣೆಯೇ ಜನರ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದ್ದು, ಸದ್ಯ ಪ್ರತಿಭಟನೆ ಮುಂದುವರಿದಿದೆ.

- ಜಾಹೀರಾತು -

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ರಾಜ್ಯದ ಹಲವೆಡೆ ಅಲ್ಲಲ್ಲಿ ತುಂತುರು ಮಳೆ : ಜನವರಿ 15ರವರೆಗೂ ಮುಂದುವರಿಯಲಿದೆ ಇದೇ ವಾತಾವರಣ !

January 13, 2026
ತುಮಕೂರುಮುಖಪುಟರಾಜಕೀಯ

ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕೇಂದ್ರದೊಂದಿಗೆ ಮಾತುಕತೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

March 2, 2026
ಮುಖಪುಟ

ಪಿರಿಯಾಪಟ್ಟಣ: ಆಯತೊಲ್ಲಾ ಅಲಿ ಖಮೇನಿ ಸಾವು; ಅಮೆರಿಕ-ಇಸ್ರೇಲ್ ವಿರುದ್ಧ ಶಿಯಾ ಸಮುದಾಯದ ಆಕ್ರೋಶ

March 3, 2026
ನಂಜನಗೂಡುಮುಖಪುಟ

ಕಾಡು ಹಂದಿ ಅಡ್ಡ ಬಂದು ಬೈಕ್‌ನಿಂದ ಬಿದ್ದು ರೈತ ಸಾವು: ನಂಜನಗೂಡಿನಲ್ಲಿ ದುರ್ಘಟನೆ

November 8, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?