ಬೆಂಗಳೂರು, ಜನವರಿ 13, 2026 : ನಟ ಯಶ್ ಟಾಕ್ಸಿಕ್ ಸಿನಿಮಾದ ಟೀಸರ್ ರಿಲೀಸ್ ಆದ ಬಳಿಕ ದೊಡ್ಡ ವಿವಾದ ಸೃಷ್ಟಿಯಾಗಿದೆ. ಯಶ್ ನಟನೆಯ `ಟಾಕ್ಸಿಕ್’ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಕ್ಕಳಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ ಮಾಡಲಾಗಿದೆ.
ಈ ಟೀಸರ್ ನಲ್ಲಿ ಅಶ್ಲೀಲ ಕಂಟೆಂಟ್ ಇದೆ. ಮಕ್ಕಳ ಸ್ವಾಸ್ಥಕ್ಕೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಹೈಕೋರ್ಟ್ ವಕೀಲ ಲೋಹಿತ್ ಹನುಮಾಪುರ ದೂರು ಸಲ್ಲಿಸಿದ್ದಾರೆ. ವಕೀಲಯ ದೂರು ಸ್ವೀಕರಿಸಿರುವ ಮಕ್ಕಳ ಹಕ್ಕುಗಳ ಆಯೋಗವು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ ಎನ್ನಲಾಗಿದೆ.
ಟಾಕ್ಸಿಕ್ ಟೀಸರ್ ನಲ್ಲಿ ಅಶ್ಲೀಲತೆ ಇದೆ ಎಂದು ಕೇಂದ್ರ ಚಲನಚಿತ್ರ ಪ್ರಮಾಣಿಕರಣ ಮಂಡಳಿ ಅಧ್ಯಕ್ಷರಿಗೆ ದೂರು ನೀಡಲಾಗಿದೆ. ವಕೀಲ ಲೋಹಿತ್ ಹನುಮಪುರ ದೂರು ಕೊಟ್ಟಿದ್ದಾರೆ. ಸಾರ್ವಜನಿಕ ನೈತಿಕತೆ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿದ್ದಾರೆ.
