PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಾಜ್ಯದಲ್ಲಿ ಅಪಘಾತಗಳ ಪಟ್ಟಿಯಲ್ಲಿ ಮೈಸೂರಿಗೆ 6ನೇ ಸ್ಥಾನ; ಸುರಕ್ಷತಾ ಕ್ರಮಕ್ಕೆ ಆರ್.ಟಿ.ಒ ಮುಂದು!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ರಾಜ್ಯದಲ್ಲಿ ಅಪಘಾತಗಳ ಪಟ್ಟಿಯಲ್ಲಿ ಮೈಸೂರಿಗೆ 6ನೇ ಸ್ಥಾನ; ಸುರಕ್ಷತಾ ಕ್ರಮಕ್ಕೆ ಆರ್.ಟಿ.ಒ ಮುಂದು!
ಮುಖಪುಟಮೈಸೂರು ನಗರ

ರಾಜ್ಯದಲ್ಲಿ ಅಪಘಾತಗಳ ಪಟ್ಟಿಯಲ್ಲಿ ಮೈಸೂರಿಗೆ 6ನೇ ಸ್ಥಾನ; ಸುರಕ್ಷತಾ ಕ್ರಮಕ್ಕೆ ಆರ್.ಟಿ.ಒ ಮುಂದು!

Prathinidhi News
Last updated: January 13, 2026 4:09 pm
Prathinidhi News
Published January 13, 2026
Share
SHARE

ಮೈಸೂರು, ಜನವರಿ 13, ಮ2026 :ಮೈಸೂರು ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದು, ಇಡೀ ರಾಜ್ಯದಲ್ಲಿಯೇ ಮೈಸೂರು 6ನೇ ಸ್ಥಾನದಲ್ಲಿದೆ ಎಂಬ ಕಳವಳಕಾರಿ ಮಾಹಿತಿ ಹೊರಬಿದ್ದಿದೆ. ಮೈಸೂರಿನ ಆರ್.ಟಿ.ಒ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಉಪ ಸಾರಿಗೆ ಆಯುಕ್ತ ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ್ ಚೌಹಾಣ್ ಅವರು, ಅಪಘಾತ ಪ್ರಕರಣಗಳಲ್ಲಿ ಜಿಲ್ಲೆಯು ರಾಜ್ಯದ ‘ಟಾಪ್ 10’ ಪಟ್ಟಿಯಲ್ಲಿದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಇಲಾಖೆಯು ‘ರಸ್ತೆ ಸುರಕ್ಷತಾ ಮಾಸಾಚರಣೆ’ ಹಮ್ಮಿಕೊಳ್ಳುತ್ತಿದ್ದು, ವಾಹನ ಸವಾರರಲ್ಲಿ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ವಿವರಿಸಿದರು.

ಇದೇ ವೇಳೆ ಆರ್.ಟಿ.ಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಬಹುತೇಕ ಸೇವೆಗಳನ್ನು ಆನ್‌ಲೈನ್ ಮೂಲಕ ನೀಡಲಾಗುತ್ತಿದೆ. ಮೋಟಾರು ವಾಹನ ಕಾಯ್ದೆಯ ತಿದ್ದುಪಡಿಗಳಿಗೆ ಅನುಗುಣವಾಗಿ, ‘ಸಾರಥಿ’ ತಂತ್ರಾಂಶದ ಮೂಲಕ ಡಿಎಲ್ (DL) ಮತ್ತು ಎಲ್.ಎಲ್ (LL) ಗೆ ಸಂಬಂಧಿಸಿದ ಸೇವೆಗಳನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದೆ. ಇದರೊಂದಿಗೆ ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ತೆರಿಗೆ ಪಾವತಿ, ನಕಲು ನೋಂದಣಿ ಪತ್ರ ಹಾಗೂ ನೋಂದಣಿ ಪತ್ರ ನವೀಕರಣ ಸೇರಿದಂತೆ ಹಲವು ಪ್ರಮುಖ ಸೇವೆಗಳನ್ನು ಸಾರ್ವಜನಿಕರು ಆನ್‌ಲೈನ್ ಮೂಲಕವೇ ಪಡೆಯಬಹುದಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇನ್ನು ಚಿತ್ರದುರ್ಗ ಬಳಿ ನಡೆದ ಭೀಕರ ಸ್ಲೀಪರ್ ಬಸ್ ದುರಂತದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮೈಸೂರು ಸಾರಿಗೆ ಇಲಾಖೆ ಅಧಿಕಾರಿಗಳು, ಜಿಲ್ಲೆಯಾದ್ಯಂತ ಖಾಸಗಿ ಬಸ್‌ಗಳ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಸಾರಿಗೆ ಸಚಿವರ ಸೂಚನೆಯಂತೆ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಸುಮಾರು 60ಕ್ಕೂ ಹೆಚ್ಚು ಸ್ಲೀಪರ್ ಬಸ್‌ಗಳನ್ನು ತಪಾಸಣೆ ನಡೆಸಲಾಗಿದ್ದು, ಬಸ್‌ಗಳಲ್ಲಿ ಅಳವಡಿಸಲಾಗಿರುವ ಸುರಕ್ಷತಾ ಪರಿಕರಗಳನ್ನು ಪರಿಶೀಲಿಸಲಾಗಿದೆ. ಈ ಕಾರ್ಯಾಚರಣೆಯ ವೇಳೆ ನಿಯಮ ಉಲ್ಲಂಘಿಸಿದ 16 ಬಸ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಸಂತ್ ಚೌಹಾಣ್ ತಿಳಿಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ರಾಜಧಾನಿ ಬೆಂಗಳೂರಲ್ಲಿ “ವಿಷ”ಗಾಳಿ..! ; ರಾಷ್ಟ್ರ ರಾಜಧಾನಿಯನ್ನೂ ಮೀರಿಸುತ್ತಾ ರಾಜ್ಯ ರಾಜಧಾನಿ..?

December 23, 2025
ಬೆಂಗಳೂರುಮುಖಪುಟ

ಬೆಂಗಳೂರು, ಮಂಡ್ಯ ಸೇರಿದಂತೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

November 25, 2025
ಮುಖಪುಟ

ಪಿರಿಯಾಪಟ್ಟಣ: ಆಯತೊಲ್ಲಾ ಅಲಿ ಖಮೇನಿ ಸಾವು; ಅಮೆರಿಕ-ಇಸ್ರೇಲ್ ವಿರುದ್ಧ ಶಿಯಾ ಸಮುದಾಯದ ಆಕ್ರೋಶ

March 3, 2026
ಮುಖಪುಟ

ರಾಯಚೂರು : ಬಸ್‌ ಹರಿದು ನಾಲ್ಕು ವರ್ಷದ ಹೆಣ್ಣು ಮಗು ಸಾವು !

January 29, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?