ಚಿಕ್ಕಬಳ್ಳಾಪುರ, ಜನವರಿ 14,2026 : ಶಿಡ್ಲಘಟ್ಟ ನಗರದಾದ್ಯಂತ ಹಾಕಿಸಿದ್ದ ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಿದ ಪುರಸಭೆ ಅಧಿಕಾರಿ ಅಮೃತಾ ಗೌಡಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಜರುಗಿದೆ.
ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಸಿನಿಮಾದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಕರೆ ಮಾಡಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಲ್ಲದೆ ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆಸುವುದಾಗಿ ಹೇಳಿದ್ದಾನೆ.
ಶಿಡ್ಲಘಟ್ಟದಿಂದ ಅಮೃತಗೌಡರನ್ನು ವರ್ಗಾವಣೆ ಮಾಡಿಸುತ್ತೇನೆ ರಾಜೀವ್ ಗೌಡ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಲಾದ ಸಂಭಾಷಣೆಯ ಆಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರಿಂದ ಮನನೊಂದ ಅಮೃತಾ ಗೌಡ ಕಣ್ಣೀರಿಟ್ಟಿದ್ದಾರೆ. ಸದ್ಯ ಈ ಘಟನೆ ಚಿಕ್ಕಬಳ್ಳಾಪುರದಲ್ಲಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕನ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ತಮ್ಮ ಕಚೇರಿಯ ಹೊರಗೆ ಅಮೃತ ಗೌಡ ಪ್ರತಿಭಟನೆ ನಡೆಸಿದರು.
