ನವದೆಹಲಿ, ಜನವರಿ 28, 2026: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಬರೆದುಕೊಂಡಿರುವ ಅವರು,ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಅಕಾಲಿಕ ಮರಣ ಹೊಂದಿದರು ಎಂಬ ವಾರ್ತೆ ತಿಳಿದು ತೀವ್ರ ಆಘಾತ ಉಂಟಾಯಿತು.
ಮಹಾರಾಷ್ಟ್ರದ ಪ್ರಭಾವೀ ನಾಯಕರಾಗಿದ್ದ ಅವರು, ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ.
ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಶ್ರೀಮತಿ ಸುನೇತ್ರಾ ಪವಾರ್ ಅವರು, ಸುಪುತ್ರ ಶ್ರೀ ಪಾರ್ಥ್ ಪವಾರ್ ಅವರು ಮತ್ತು ಇಡೀ ಕುಟುಂಬಕ್ಕೆ, ಪವಾರ್ ಅವರ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರೆಲ್ಲರಿಗೂ ನೀಡಲಿ ಎಂದಿದ್ದಾರೆ. https://x.com/i/status/2016379931325038995
