PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಉಡುಪಿ ಜಿಲ್ಲಾಡಳಿತದ ದ್ವಂದ್ವ ನೀತಿ: ನಿಯಮ ರೂಪಿಸಿದ ಡಿಸಿ ಮತ್ತು ಸಚಿವರಿಂದಲೇ ಸುರಕ್ಷತಾ ಮಾನದಂಡಗಳ ಉಲ್ಲಂಘನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಉಡುಪಿ ಜಿಲ್ಲಾಡಳಿತದ ದ್ವಂದ್ವ ನೀತಿ: ನಿಯಮ ರೂಪಿಸಿದ ಡಿಸಿ ಮತ್ತು ಸಚಿವರಿಂದಲೇ ಸುರಕ್ಷತಾ ಮಾನದಂಡಗಳ ಉಲ್ಲಂಘನೆ
ಮುಖಪುಟ

ಉಡುಪಿ ಜಿಲ್ಲಾಡಳಿತದ ದ್ವಂದ್ವ ನೀತಿ: ನಿಯಮ ರೂಪಿಸಿದ ಡಿಸಿ ಮತ್ತು ಸಚಿವರಿಂದಲೇ ಸುರಕ್ಷತಾ ಮಾನದಂಡಗಳ ಉಲ್ಲಂಘನೆ

Prathinidhi News
Last updated: January 28, 2026 12:17 pm
Prathinidhi News
Published January 28, 2026
Share
SHARE

ಉಡುಪಿ, ಜನವರಿ 28, 2026 : ಕೋಡಿಬೆಂಗ್ರೆ ಸಮೀಪ ಸಂಭವಿಸಿದ ಭೀಕರ ಬೋಟ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಉಡುಪಿ ಜಿಲ್ಲಾಡಳಿತದ ಬೇಜವಾಬ್ದಾರಿತನ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಪ್ರವಾಸಿ ಬೋಟ್‌ಗಳಲ್ಲಿ ಲೈಫ್ ಜಾಕೆಟ್ ಧರಿಸುವುದನ್ನು ಕಡ್ಡಾಯಗೊಳಿಸಿ ತಕ್ಷಣದ ಆದೇಶ ಹೊರಡಿಸಿದ್ದ ಡಿಸಿ ಮತ್ತು ಸಚಿವರಿಂದಲೇ ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಮಾಡಲಾಗಿದೆ. 

ಮೈಸೂರಿನ ಪ್ರವಾಸಿಗರಿದ್ದ ಬೋಟ್ ಅರಬ್ಬಿ ಸಮುದ್ರದ ಅಲೆಗಳಿಗೆ ಸಿಲುಕಿ ಮಗುಚಿದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಜಿಲ್ಲೆಯಾದ್ಯಂತ ಪ್ರವಾಸಿ ಬೋಟ್‌ಗಳಲ್ಲಿ ಲೈಫ್ ಜಾಕೆಟ್ ಧರಿಸುವುದನ್ನು ಕಡ್ಡಾಯಗೊಳಿಸಿ ತಕ್ಷಣದ ಆದೇಶ ಹೊರಡಿಸಿದ್ದರು. ಲೈಫ್ ಜಾಕೆಟ್ ಬಳಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕರಪತ್ರಗಳನ್ನು ಹಂಚಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನೂ ನೀಡಿದ್ದರು.

ಆದರೆ ಈ ಆದೇಶ ಹೊರಬಿದ್ದ ಕೆಲವೇ ಕ್ಷಣಗಳಲ್ಲಿ, ಸ್ವತಃ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ ಈ ನಿಯಮವನ್ನು ಗಾಳಿಗೆ ತೂರಿದ್ದಾರೆ. ಗಣರಾಜ್ಯೋತ್ಸವದ ಅಂಗವಾಗಿ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ನೆರವೇರಿಸಲು ಬೋಟ್‌ನಲ್ಲಿ ತೆರಳಿದ್ದ ಸಚಿವರು ಮತ್ತು ಅಧಿಕಾರಿಗಳ ತಂಡ ಲೈಫ್ ಜಾಕೆಟ್ ಧರಿಸದೆ ಪ್ರಯಾಣಿಸಿರುವುದು ಈಗ ವಿಡಿಯೋ ಸಮೇತ ಬಯಲಾಗಿದೆ. ದುರಂತ ನಡೆದ ದಿನವೇ ಇಂತಹ ಬೇಜವಾಬ್ದಾರಿ ಪ್ರದರ್ಶಿಸಿರುವುದು ದುರದೃಷ್ಟಕರ.

ಬೋಟ್‌ನಲ್ಲಿ ನಿಂತು ಕೈಬೀಸುತ್ತಾ ಸಂಭ್ರಮಿಸಿದ ಸಚಿವರು ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳ ಈ ನಡೆ, ಸಾಮಾನ್ಯ ಜನರಿಗೆ ಮಾತ್ರವೇ ನಿಯಮಗಳು ಸೀಮಿತವೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಜನರಿಗೆ ಮಾರ್ಗದರ್ಶನ ನೀಡಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ಸುರಕ್ಷತಾ ಸಾಧನಗಳನ್ನು ನಿರ್ಲಕ್ಷಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಜಿಲ್ಲಾಡಳಿತದ ದ್ವಂದ್ವ ನಿಲುವಿನ ವಿರುದ್ಧ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಚಾಮುಂಡಿ ಬೆಟ್ಟ ಉಳಿಸಿ: ಪರಿಸರ ವಿರೋಧಿ ಅಭಿವೃದ್ಧಿ ಕಾಮಗಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

January 21, 2026
ಬೆಂಗಳೂರುಮುಖಪುಟ

ಮಕ್ಕಳ ಕಥೆ ಪುಸ್ತಕಗಳಲ್ಲಿ ಡ್ರಗ್ಸ್ ಸಾಗಾಟ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿಲಿಯ 70ರ ವೃದ್ಧನ ಬಂಧನ

January 22, 2026
ಮುಖಪುಟ

ಹಂಪಿ ಎಎಸ್‌ಐ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂ ಹಗರಣ: ಪ್ರಧಾನಿ ಮೋದಿಗೆ ಪತ್ರ ಬರೆದ ಸಾಮಾಜಿಕ ಕಾರ್ಯಕರ್ತ

January 16, 2026
ಬೆಂಗಳೂರುಮುಖಪುಟ

ರಾಜ್ಯದಲ್ಲಿ ಕುಸಿದ ತಾಪಮಾನ ; ಮುಂದಿನ ಮೂರ್ನಾಲ್ಕು ದಿನ ಶೀತಗಾಳಿ ಪ್ರಭಾವ

November 17, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?