PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚಾಮುಂಡಿ ಬೆಟ್ಟದಲ್ಲಿ ಆಷಾಢದ ಸಂಭ್ರಮ; ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ – ಯತೀಂದ್ರ ಸಿದ್ದರಾಮಯ್ಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಚಾಮುಂಡಿ ಬೆಟ್ಟದಲ್ಲಿ ಆಷಾಢದ ಸಂಭ್ರಮ; ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ – ಯತೀಂದ್ರ ಸಿದ್ದರಾಮಯ್ಯ
ಮುಖಪುಟಮೈಸೂರು ನಗರ

ಚಾಮುಂಡಿ ಬೆಟ್ಟದಲ್ಲಿ ಆಷಾಢದ ಸಂಭ್ರಮ; ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ – ಯತೀಂದ್ರ ಸಿದ್ದರಾಮಯ್ಯ

Prathinidhi News
Last updated: July 1, 2026 4:58 pm
Prathinidhi News
Published July 1, 2026
Share
SHARE

ಮೈಸೂರು, ಜುಲೈ 01, 2026 :  ಆಷಾಡ ಶುಕ್ರವಾರದ ಮಾಸದಲ್ಲಿ ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಚಾಮುಂಡಿ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡುವಂತೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ಆಷಾಡ ಶುಕ್ರವಾರ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಷಾಡ ಮಾಸದಲ್ಲಿ ದರ್ಶನಕ್ಕೆ ಬರುವ ಭಕ್ತರ ಸುರಕ್ಷತೆ ಹೆಚ್ಚಿನ ಆಧ್ಯತೆ ನೀಡಬೇಕು. ಯಾವುದೇ ಕಾಲ್ತುಳಿತ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜುಲೈ 17 ರಂದು ಮೊದಲ ಆಷಾಡ ಶುಕ್ರವಾರ, ಜುಲೈ 24 ರಂದು 2 ನೇ ಆಷಾಡ ಶುಕ್ರವಾರ, ಜುಲೈ 31 ರಂದು 3 ನೇ ಆಷಾಡ ಶುಕ್ರವಾರ, ಆಗಸ್ಟ್ 04 ರಂದು ಅಮ್ಮನವರ ಜನ್ಮೋತ್ಸವ, ಆಗಸ್ಟ್ 07 ರಂದು 4 ನೇ ಆಷಾಡ ಶುಕ್ರವಾರ ನಡೆಯುತ್ತದೆ.

- ಜಾಹೀರಾತು -

ಪೋಲಿಸ್ ಇಲಾಖೆಯ ವತಿಯಿಂದ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ಆಷಾಡ ಶುಕ್ರವಾರ ದಿನಗಳಂದು ಬೆಳಗ್ಗೆ 5.30 ರಿಂದ ದೇವಾಲಯ ಮುಚ್ಚುವವರೆಗೆ ದರ್ಶನದ ವ್ಯವಸ್ಥೆ ಕಲ್ಪಿಸಬೇಕು. ಅಮ್ಮನವರ ಜನ್ಮೋತ್ಸವ ದಿವಸ ಬೆಳಗ್ಗೆ 8 ಗಂಟೆಯಿಂದ ಸಾರ್ವಜನಿಕ ಭಕ್ತಾದಿಗಳಿಗೆ ದರ್ಶನದ ವ್ಯವಸ್ಥೆ ಮಾಡಲಾಗುವುದು. ವಿಐಪಿ ದರ್ಶನಕ್ಕೆ ಪ್ರತ್ಯೇಕವಾಗಿ ಬೆಳಗ್ಗೆ 5.30 ರಿಂದ ಬೆಳಗ್ಗೆ 9.30 ರವರಿಗೆ ಸಮಯವನ್ನು ನಿಗದಿ ಪಡಿಸಲಾಗುವುದು ಎಂದರು.

ಚಾಮುಂಡಿ ಬೆಟ್ಟದಲ್ಲಿ ಪಾಸ್ಟಿಕ್ ಬ್ಯಾನ್ ಮಾಡಬೇಕು. ಡಸ್ಟ್ ಬಿನ್ ವ್ಯವಸ್ಥೆ ಮಾಡಬೇಕು. ಸ್ವಚ್ಛತೆಯನ್ನು ಕಾಪಾಡಬೇಕು. ಬೆಟ್ಟದಲ್ಲಿ ವಾಸಿಸುತ್ತಿರುವ ಸ್ಥಳೀಯರಿಗೆ ತೆಂದರೆ ಆಗದಂತೆ ಅವರ ಆಧಾರ್ ಕಾರ್ಡ್ ನೋಡಿ ಪ್ರವೇಶ ನೀಡಬೇಕು. ಬೆಟ್ಟದಲ್ಲಿ ಇರುವ ನಮ್ಮ ಕ್ಲಿನಿಕ್ ನಲ್ಲಿ ದಿನದ 24 ಗಂಟೆ ವೈದ್ಯರು ಹಾಗೂ ಅಗತ್ಯ ಸಿಬ್ಬಂದಿಗಳು ಇರಬೇಕು. ದೇವಸ್ಥಾನದ ಬಳಿಯಲ್ಲಿ 3 ಆಂಬುಲೆನ್ಸ್ ವ್ಯವಸ್ಥೆ ಇರಬೇಕು. ಚೆಸ್ಕಾ ವತಿಯಿಂದ ಪಾರ್ಕಿಂಗ್ ಸ್ಥಳ ಹಾಗೂ ಬೆಟ್ಟಕ್ಕೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದರು .

ನಗರ ಪಾಲಿಕೆಯ ವತಿಯಿಂದ ಅಗತ್ಯ ಸಂಖ್ಯೆಯ ಪೌರ ಕಾರ್ಮಿಕರನ್ನು ನಿಯೋಜನೆ ಮಾಡಬೇಕು. ಸಂಚಾರಿ ಶೌಚಾಲಯಗಳನ್ನು ಪಾರ್ಕಿಂಗ್ ಮತ್ತು ಬೆಟ್ಟದ ಮೇಲೆ ಮಾಡಬೇಕು. ಭಕ್ತಾದಿಗಳ ಅನುಕೂಲಕ್ಕಾಗಿ 6 ಬ್ಯಾಟರಿ ವಾಹನಗಳ ವ್ಯವಸ್ಥೆ ಮಾಡಬೇಕು. ಅಗತ್ಯ ಸಂಖ್ಯೆಯ ಸಿ ಸಿ ಟಿ ವಿ ಗಳನ್ನು ಅಳವಡಿಸಬೇಕು. ಖಾಸಗಿ ವಾಹನಗಳಿಗೆ ಬೆಟ್ಟಕ್ಕೆ ಪ್ರವೇಶ ಇರುವುದಿಲ್ಲ.

ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಮಾತನಾಡಿ ಲಲಿತ ಮಹಲ್ ಮೈದಾನದಿಂದ ಶುಕ್ರವಾರ ಶನಿವಾರ ಮತ್ತು ಭಾನುವಾರ ದಿನಗಳಂದು ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಬಸ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಪಾದರಕ್ಷೆಗಳನ್ನು ಬಿಡಲು ಲಲಿತ ಮಹಲ್ ಬಸ್ ಪಾರ್ಕಿಂಗ್ ಆವರಣದಲ್ಲಿ ವ್ಯವಸ್ಥೆ ಮಾಡಲಾಗುವುದು. ಸಿಟಿ ಬಸ್ ನಿಲ್ದಾಣದಿಂದ ಬರುವ ಭಕ್ತಾದಿಗಳಿಗೆ ಪಾದರಕ್ಷೆಗಳನ್ನು ಬಿಡಲು ಸಿಟಿ ಬಸ್ ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಾದ ಎಸ್ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾದಿಕಾರದ ಕಾರ್ಯದರ್ಶಿಗಳಾದ ರೂಪ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ನನಗೂ ಎಂ.ಎಲ್‌.ಸಿ ಸ್ಥಾನ ಕೊಡಿ: ರಕ್ತದಲ್ಲಿ ಪತ್ರ ಬರೆದು ವರಿಷ್ಠರಿಗೆ ಮನವಿ ಮಾಡಿದ ಮೈಸೂರು ಬಸವಣ್ಣ

December 19, 2025
ಮುಖಪುಟಮೈಸೂರು ನಗರ

ಮೈಸೂರು ಅರಮನೆಯಲ್ಲಿ ನಾಳೆ ‘ಸ್ತುತಿಶಂಕರ ಸ್ತೋತ್ರ ಮಹಾಸಮರ್ಪಣೆ’: 25 ಸಾವಿರ ಭಕ್ತರ ಸಂಗಮ

December 19, 2025
ಬೆಂಗಳೂರುಮುಖಪುಟಸಿನಿಮಾ

OSCAR ಅವಾರ್ಡ್ಸ್ ಅಂಗಳಕ್ಕೆ ಕಾಂತಾರ-1 ಎಂಟ್ರಿ..! ರಿಷಬ್ ಶೆಟ್ಟಿ ಸಿನಿಮಾಗೆ ಒಲಿಯಲಿದ್ಯಾ ಪ್ರತಿಷ್ಠಿತ ಪ್ರಶಸ್ತಿ..?

January 9, 2026
ಮುಖಪುಟ

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದು ಕೊಲೆ : ಮೂಢನಂಬಿಕೆಗೆ ಮಹಾರಾಷ್ಟ್ರದಲ್ಲಿ ಕಲಬುರಗಿ ಮೂಲದ ಮಹಿಳೆ ಸಾವು

December 27, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?