PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಂಭ್ರಮದ ನಡುವೆ ಸಮಾಜಮುಖಿ ಕಾರ್ಯ: ಹರೀಶ್ ಗೌಡರ ಹುಟ್ಟುಹಬ್ಬದ ಅಂಗವಾಗಿ ಬಡವರಿಗೆ ಹೊಲಿಗೆ ಯಂತ್ರ, ತಳ್ಳುವ ಗಾಡಿ ವಿತರಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸಂಭ್ರಮದ ನಡುವೆ ಸಮಾಜಮುಖಿ ಕಾರ್ಯ: ಹರೀಶ್ ಗೌಡರ ಹುಟ್ಟುಹಬ್ಬದ ಅಂಗವಾಗಿ ಬಡವರಿಗೆ ಹೊಲಿಗೆ ಯಂತ್ರ, ತಳ್ಳುವ ಗಾಡಿ ವಿತರಣೆ
ಮುಖಪುಟಮೈಸೂರು ನಗರರಾಜಕೀಯ

ಸಂಭ್ರಮದ ನಡುವೆ ಸಮಾಜಮುಖಿ ಕಾರ್ಯ: ಹರೀಶ್ ಗೌಡರ ಹುಟ್ಟುಹಬ್ಬದ ಅಂಗವಾಗಿ ಬಡವರಿಗೆ ಹೊಲಿಗೆ ಯಂತ್ರ, ತಳ್ಳುವ ಗಾಡಿ ವಿತರಣೆ

Prathinidhi News
Last updated: January 31, 2026 3:57 pm
Prathinidhi News
Published January 31, 2026
Share
SHARE

ಮೈಸೂರು, ಜನವರಿ 31, 2026 : ಹುಣಸೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಜಿ.ಡಿ. ಹರೀಶ್ ಗೌಡ ಅವರು ತಮ್ಮ 39ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಸಂಭ್ರಮವನ್ನು ಮೈಸೂರು ಮತ್ತು ಹುಣಸೂರಿನಾದ್ಯಂತ ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.

ಮೈಸೂರಿನ ಬೋಗಾದಿಯಲ್ಲಿ ಆಯೋಜಿಸಲಾಗಿದ್ದ ಪ್ರಮುಖ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಬೆಂಬಲಿಗರು ಭಾಗವಹಿಸಿ, ತಮ್ಮ ನೆಚ್ಚಿನ ನಾಯಕನಿಗೆ ಬೃಹತ್ ಹಾರ ತುರಾಯಿಗಳನ್ನು ಸಮರ್ಪಿಸುವ ಮೂಲಕ ಶುಭಾಶಯ ಕೋರಿದರು. ಶಾಸಕರು ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಂಭ್ರಮ ಹಂಚಿಕೊಂಡರು.

ಈ ಬಾರಿಯ ಹುಟ್ಟುಹಬ್ಬವು ಕೇವಲ ಹಬ್ಬದ ಆಚರಣೆಯಾಗಿ ಉಳಿಯದೆ, ಸಂಪೂರ್ಣವಾಗಿ ಸಾಮಾಜಿಕ ಸೇವಾ ಕಾರ್ಯಗಳಿಗೆ ವೇದಿಕೆಯಾಯಿತು. ಅಭಿಮಾನಿಗಳ ಸಂಘಟನೆಯ ವತಿಯಿಂದ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗಿತ್ತು. ಇದರ ಜೊತೆಗೆ ಬಡ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕಾಗಿ ತಳ್ಳುವ ಗಾಡಿಗಳು ಹಾಗೂ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಮೂಲಕ ಶಾಸಕರ ಜನ್ಮದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಒಟ್ಟಾರೆಯಾಗಿ ಸಂಭ್ರಮದ ಆಚರಣೆಯ ಜೊತೆಗೆ ಸಮಾಜಮುಖಿ ಕಾರ್ಯಗಳ ಮೂಲಕ ಜಿ.ಡಿ. ಹರೀಶ್ ಗೌಡರ ಅಭಿಮಾನಿಗಳು ತಮ್ಮ ಅಭಿಮಾನ ಮೆರೆದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಜಿ ಡಿ ಹರೀಶ್ ಗೌಡ, ಪ್ರತಿ ವರ್ಷದಂತೆ ಈ ಬಾರಿಯೂ ನನ್ನ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಸ್ನೇಹಿತರು ಆಪ್ತರು ಅಭಿಮಾನಿಗಳು ಎಲ್ಲರೂ ಸೇರಿಕೊಂಡು ಹುಟ್ಟುಹಬ್ಬ ಆಚರಿಸಿರುವುದರಿಂದ ಸಂತಸವಾಗಿದೆ.ಇದು ನನ್ನ ಸೌಭಾಗ್ಯವಾಗಿದೆ ಎಂದರು. ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಹುಟ್ಟು ಹಬ್ಬ ಆಚರಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಕಳೆದ ಹಲವಾರು ವರ್ಷಗಳಿಂದಲೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಹುಟ್ಟು ಹಬ್ಬ ಆಚರಿಸುತ್ತಾ ಬಂದಿದ್ದರು. ಹುಣಸೂರು ಕ್ಷೇತ್ರದ ಶಾಸಕನಾದ ಬಳಿಕ ಕಳೆದೆರಡು ವರ್ಷಗಳಿಂದ ಆಚರಿಸಿರಲಿಲ್ಲ. ಆದರೆ ಈ ಬಾರಿ ಆಚರಿಸಲೇ ಬೇಕೆಂದು ಅಭಿಮಾನಿಗಳು ಒತ್ತಾಯ ಮಾಡಿದರು ಹಾಗಾಗಿ ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಈ ಬಾರಿ ಹುಟ್ಟು ಹಬ್ಬ ಆಚರಿಸಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಶುಭಾಶಯ ಕೋರಿದ ಫ್ಲೆಕ್ಸ್ ಗಳಲ್ಲಿ ತಂದೆ ಜಿ ಟಿ ದೇವೇಗೌಡರ ಭಾವಚಿತ್ರ ಇಲ್ಲದಿರುವ ವಿಚಾರವಾಗಿ  ಈ ಬಗ್ಗೆ ಏನನ್ನೂ ಮಾತನಾಡುವುದಿಲ್ಲ. ಇಂದು ಯಾವುದೇ ರಾಜಕೀಯ ವಿಚಾರ ಮಾತನಾಡುವುದಿಲ್ಲವೆಂದು ನುಡಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

ಸಿದ್ದು – ಡಿಕೆಶಿ ಪವರ್ ಶೇರಿಂಗ್ ಕ್ಲೈಮ್ಯಾಕ್ಸ್..! ಆಪ್ತರಿಗೆ ಸಿಎಂ ಡಿನ್ನರ್ ಮೀಟಿಂಗ್

November 22, 2025
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಅಕ್ರಮ ಸಂಬಂಧ: ಮಹಿಳೆಯ ಕಾಮದಾಹಕ್ಕೆ ಯುವಕ ಬಲಿ, ಕಾಟ ತಾಳಲಾರದೆ ಆತ್ಮಹತ್ಯೆ

November 5, 2025
ಮುಖಪುಟಮೈಸೂರು ನಗರಸನ್ನಿಧಾನ

ಸುತ್ತೂರು ಶ್ರೀ ಕ್ಷೇತ್ರದಲ್ಲಿ ಜನವರಿ 15 ರಿಂದ ಜಾತ್ರಾ ಮಹೋತ್ಸವದ ಸಂಭ್ರಮ: ಅದ್ದೂರಿಯಿಂದ ಸಾಗಿದ ಸಿದ್ಧತೆಗಳು

January 12, 2026
ಮುಖಪುಟಮೈಸೂರು ನಗರರಾಜಕೀಯ

ಪ್ರಧಾನಿ ಮೋದಿಗೆ ಸುಳ್ಳಿನ ನೊಬೆಲ್ ನೀಡಬೇಕು: ಮೈಸೂರಿನಲ್ಲಿ ವಿ.ಎಸ್. ಉಗ್ರಪ್ಪ ವಾಗ್ದಾಳಿ

January 30, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?