ಮೈಸೂರು, ಜುಲೈ 3, 2026 : ಜಿಲ್ಲೆಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿದ್ದು, ಹಲವು ಕಡೆಗಳಲ್ಲಿ ಗುಂಪು ಗುಂಪಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಮೈಸೂರಿನ ಎನ್.ಆರ್. ವಿಧಾನಸಭಾ ಕ್ಷೇತ್ರದಲ್ಲಿ ಅಧಿಕಾರಿಗಳು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವ ಬದಲು ಮತಗಟ್ಟೆ ಕೇಂದ್ರಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ SIR ಪ್ರಕ್ರಿಯೆ ನಡೆಸುತ್ತಿರುವುದು ಕಂಡುಬಂದಿದೆ.
ಇದರಿಂದ ಕೆಲ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, ನಿಯಮಾನುಸಾರ ಅಧಿಕಾರಿಗಳು ಮನೆ ಮನೆಗೆ ತೆರಳಿ SIR ಪ್ರಕ್ರಿಯೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಮನೆಗಳಿಗೆ ಭೇಟಿ ನೀಡಿ ಎಲ್ಲ ಅರ್ಹ ಮತದಾರರ ಮಾಹಿತಿಯನ್ನು ಸಮರ್ಪಕವಾಗಿ ಪರಿಶೀಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ.
