PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಭ್ರಷ್ಟಾಚಾರದ ವಿರುದ್ಧ ಮಾಜಿ ಸಚಿವ ಸಾ. ರಾ. ಮಹೇಶ್ ಸರಣಿ ಆರೋಪ; ಮುಡಾ ಮುಂದೆ ಪ್ರತಿಭಟನೆಯ ಎಚ್ಚರಿಕೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಭ್ರಷ್ಟಾಚಾರದ ವಿರುದ್ಧ ಮಾಜಿ ಸಚಿವ ಸಾ. ರಾ. ಮಹೇಶ್ ಸರಣಿ ಆರೋಪ; ಮುಡಾ ಮುಂದೆ ಪ್ರತಿಭಟನೆಯ ಎಚ್ಚರಿಕೆ
ಮುಖಪುಟಮೈಸೂರು ನಗರರಾಜಕೀಯ

ಭ್ರಷ್ಟಾಚಾರದ ವಿರುದ್ಧ ಮಾಜಿ ಸಚಿವ ಸಾ. ರಾ. ಮಹೇಶ್ ಸರಣಿ ಆರೋಪ; ಮುಡಾ ಮುಂದೆ ಪ್ರತಿಭಟನೆಯ ಎಚ್ಚರಿಕೆ

Prathinidhi News
Last updated: July 4, 2026 1:43 pm
Prathinidhi News
Published July 4, 2026
Share
SHARE

ಮೈಸೂರು, ಜುಲೈ 4, 2026 : ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ, ಮುಡಾ ಹಗರಣದ ಸೈಟ್‌ಗಳ ಮುಟ್ಟುಗೋಲು ಹಾಗೂ ಭ್ರಷ್ಟ ಐಎಎಸ್-ಐಪಿಎಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಮೌನವನ್ನು ಪ್ರಶ್ನಿಸಿ ಮಾಜಿ ಸಚಿವ ಸಾ. ರಾ. ಮಹೇಶ್ ಅವರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Contents
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರಿ ಅಕ್ರಮ: BLOಗಳ ವಿರುದ್ಧ ಆಕ್ರೋಶಮುಡಾ 50:50 ಸೈಟ್ ಹಂಚಿಕೆ ಹಗರಣ: ಮುಟ್ಟುಗೋಲಿಗೆ ಆಗ್ರಹಭ್ರಷ್ಟ IAS-IPS ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಏಕಿಲ್ಲ?

ಮೈಸೂರಿನಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ವೈಫಲ್ಯ ಹಾಗೂ ಭ್ರಷ್ಟಾಚಾರದ ಕುರಿತು ಸಾಕ್ಷ್ಯಸಹಿತ ಗಂಭೀರ ಆರೋಪಗಳನ್ನು ಮಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರಿ ಅಕ್ರಮ: BLOಗಳ ವಿರುದ್ಧ ಆಕ್ರೋಶ

ಕೆ. ಆರ್. ನಗರದ ಮೂರು ವಾರ್ಡ್‌ಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ‘SIR’ ಅರ್ಜಿಗಳನ್ನು ನಿಯಮಬಾಹಿರವಾಗಿ ಇನ್ಯಾರೋ ಭರ್ತಿ ಮಾಡುತ್ತಿದ್ದಾರೆ ಎಂದು ಸಾ. ರಾ. ಮಹೇಶ್ ದೂರಿದರು. “ಬಿಎಲ್ಒ (BLO)ಗಳು ಬಿಸಿಲಿನಲ್ಲಿ ಪ್ರತಿ ಮನೆಗೆ ಹೋಗಲು ಸಾಧ್ಯವಾಗದೆ, ಒಂದು ಅರ್ಜಿಗೆ 50 ರೂಪಾಯಿ ನೀಡಿ ಹೊರಗಿನ ಕಾರ್ಯಕರ್ತರಿಂದ ಕೆಲಸ ಮಾಡಿಸುತ್ತಿದ್ದಾರೆ. ಬಿಎಲ್ಒಗಳ ಈ ಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಅಧಿಕಾರಿಗಳ ಭವಿಷ್ಯದ ದೃಷ್ಟಿಯಿಂದ ಸದ್ಯಕ್ಕೆ ಅವರ ಹೆಸರುಗಳನ್ನು ಬಹಿರಂಗಪಡಿಸುತ್ತಿಲ್ಲ. ಆದರೆ, ಇದು ಹೀಗೆಯೇ ಮುಂದುವರಿದರೆ ಹೆಸರುಗಳನ್ನು ಬಹಿರಂಗಪಡಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

- ಜಾಹೀರಾತು -

ಇದೇ ವೇಳೆ, ಮತದಾರರ ಪಟ್ಟಿ ಪರಿಷ್ಕರಣೆಯನ್ನು ಸಮರ್ಥಿಸಿಕೊಂಡ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಹರಿಹಾಯ್ದ ಅವರು, “ಗೃಹ ಸಚಿವರಿಗೆ ಕಾನೂನಿನ ಅರಿವಿಲ್ಲ. ಬೇರೆ ಯಾವ ಸಚಿವರೂ ಈ ಬಗ್ಗೆ ಮಾತನಾಡದಿದ್ದರೂ, ಗೃಹ ಸಚಿವರು ಮಾತ್ರ ಯಾಕೆ ಕಾನೂನು ಬಾಹಿರ ಪ್ರಕ್ರಿಯೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ? ‘SIR’ ಎಂದ ತಕ್ಷಣ ಅವರಿಗೆ ಯಾಕೆ ಇಷ್ಟೊಂದು ಭಯ?” ಎಂದು ಪ್ರಶ್ನಿಸಿದರು.

ಕೆ.ಆರ್. ನಗರದ 23ನೇ ವಾರ್ಡ್‌ನ ಬೂತ್‌ ಒಂದರಲ್ಲಿ ಕಳೆದ ಬಾರಿ ಮತ ಚಲಾಯಿಸಿದ್ದ 1,000 ಮತದಾರರ ಪೈಕಿ 167 ಜನರು ಈಗ ನಾಪತ್ತೆಯಾಗಿದ್ದಾರೆ. ಹಾಗೆಯೇ ಮಿರ್ಲೆ ಗ್ರಾಮದಲ್ಲಿ 1,118 ಮತದಾರರಿದ್ದರೂ ಅಧಿಕಾರಿಗಳು ಕೇವಲ 1,004 ಮ್ಯಾಪಿಂಗ್ ಆಗಿದೆ ಎಂದು ವರದಿ ನೀಡಿದ್ದಾರೆ. ಈ ಗೊಂದಲಗಳ ಕುರಿತು ಚುನಾವಣಾಧಿಕಾರಿಗಳಿಗೆ ದೂರು ನೀಡಿರುವುದಾಗಿ ಅವರು ತಿಳಿಸಿದರು.

ಮುಡಾ 50:50 ಸೈಟ್ ಹಂಚಿಕೆ ಹಗರಣ: ಮುಟ್ಟುಗೋಲಿಗೆ ಆಗ್ರಹ

ಮುಡಾದಲ್ಲಿ (MUDA) ನಡೆದಿರುವ 50:50 ಅನುಪಾತದ ಸೈಟ್ ಹಂಚಿಕೆಯಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿರುವುದು ತನಿಖಾ ಆಯೋಗಗಳ ವರದಿಯಿಂದ ಸಾಬೀತಾಗಿದೆ. ಆದ್ದರಿಂದ ಸರ್ಕಾರ ತಕ್ಷಣವೇ ಈ ಎಲ್ಲಾ ಸೈಟ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಗ್ರಹಿಸಿದರು.

“ಕೆಲವರು ಸಾರ್ವಜನಿಕರನ್ನು ದಾರಿ ತಪ್ಪಿಸಿ ಈ ವಿವಾದಿತ 50:50 ಅನುಪಾತದ ಸೈಟ್‌ಗಳನ್ನು ಮಾರಾಟ ಮಾಡುತ್ತಿದ್ದಾರೆ. ಈ ಮಾರಾಟ ಪ್ರಕ್ರಿಯೆಗೆ ತಕ್ಷಣ ಬ್ರೇಕ್ ಹಾಕಬೇಕು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಕ್ಷಣವೇ ಈ ಎಲ್ಲಾ ಸೈಟ್‌ಗಳ ರದ್ದತಿಗೆ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ಮುಡಾ ಕಚೇರಿ ಮುಂದೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಭ್ರಷ್ಟ IAS-IPS ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಏಕಿಲ್ಲ?

ಲೋಕಾಯುಕ್ತ ಸಂಸ್ಥೆಯ ಕಾರ್ಯವೈಖರಿಯನ್ನು ಪ್ರಶ್ನಿಸಿದ ಮಾಜಿ ಸಚಿವರು, “ಭ್ರಷ್ಟರು ಎಲ್ಲಾ ಇಲಾಖೆಗಳಲ್ಲೂ ಇರುತ್ತಾರೆ. ಆದರೆ ಲೋಕಾಯುಕ್ತರು ಕೇವಲ ಕೆಳಮಟ್ಟದ ನೌಕರರನ್ನು ಗುರಿಯಾಗಿಸುತ್ತಿದ್ದಾರೆಯೇ ವಿನಃ, ಭ್ರಷ್ಟ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಮನೆಗಳ ಮೇಲೆ ಏಕೆ ದಾಳಿ ನಡೆಸುತ್ತಿಲ್ಲ? ಅವರು ಲಂಚವನ್ನೇ ಪಡೆದಿಲ್ಲವೇ? ಐಎಎಸ್, ಐಪಿಎಸ್ ಅಧಿಕಾರಿಗಳು ಲೋಕಾಯುಕ್ತ ಕಾನೂನಿನ ವ್ಯಾಪ್ತಿಯಿಂದ ಹೊರಗಿದ್ದಾರೆಯೇ?” ಎಂದು ಖಾರವಾಗಿ ಪ್ರಶ್ನಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಅಮೆರಿಕದೇಶ-ವಿದೇಶಮುಖಪುಟ

ದೇಶದ ಸೈನಿಕರಿಗೆ “ದೊಡ್ಡಣ್ಣ”ನ ಕ್ರಿಸ್ಮಸ್ ಗಿಫ್ಟ್..! ಅಮೆರಿಕ ಸೇನಾನಿಗಳಿಗೆ “ಡೊನಾಲ್ಡ್ ಟ್ರಂಪ್” ಕೊಟ್ಟ ಹಣವೆಷ್ಟು..?

December 18, 2025
ಬೆಂಗಳೂರುಮುಖಪುಟ

ಚಳಿಗೆ ಕರುನಾಡು ಗಢ-ಗಢ : 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ !

December 17, 2025
ಮುಖಪುಟಮೈಸೂರು ನಗರಸನ್ನಿಧಾನ

ಸಿದ್ದಲಿಂಗಪುರ: ಸುಬ್ರಹ್ಮಣ್ಯ ಷಷ್ಠಿ ಆಚರಣೆಯಲ್ಲಿ ಶಾಸಕ ಜಿ.ಟಿ. ದೇವೇಗೌಡ ಭಾಗಿ

November 26, 2025
ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಪ್ರತಾಪ್ ಸಿಂಹ: ಕಾಂಗ್ರೆಸ್ ಶಾಸಕರ ನಡವಳಿಕೆಗೆ ತೀವ್ರ ಆಕ್ರೋಶ

January 22, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?