ಹೆಚ್.ಡಿ. ಕೋಟೆ, ಜುಲೈ 8, 2026 : ಕೇರಳದ ವಯನಾಡು ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹೆಚ್.ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಪ್ರಸ್ತುತ ಜಲಾಶಯಕ್ಕೆ 10,757 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕೇವಲ 500 ಕ್ಯೂಸೆಕ್ ನೀರನ್ನು ಮಾತ್ರ ನದಿಗೆ ಹೊರಬಿಡಲಾಗುತ್ತಿದೆ.
ಸಮುದ್ರ ಮಟ್ಟದಿಂದ ಒಟ್ಟು 2,284 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಈ ಜಲಾಶಯದ ನೀರಿನ ಮಟ್ಟವು ಸದ್ಯ 2,261 ಅಡಿಗೆ ತಲುಪಿದೆ. ವಯನಾಡು ಭಾಗದಲ್ಲಿ ಮಳೆ ಹೀಗೆಯೇ ಮುಂದುವರಿದರೆ ಜಲಾಶಯದ ನೀರಿನ ಮಟ್ಟ ಮತ್ತಷ್ಟು ವೇಗವಾಗಿ ಏರಿಕೆಯಾಗಲಿದ್ದು, ಮುಂದಿನ ದಿನಗಳಲ್ಲಿ ಹೊರಹರಿವಿನ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
