PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಹಾರಾಣಿ ಕಾಲೇಜಿನಲ್ಲಿ ಕಾಂಗ್ರೆಸ್-ಬಿಜೆಪಿ ತೀವ್ರ ಜಟಾಪಟಿ – ಶಾಲಾ ಮಕ್ಕಳನ್ನು ಪ್ರತಿಭಟನೆಗೆ ಬಳಸಿಕೊಂಡ ಆರೋಪ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮಹಾರಾಣಿ ಕಾಲೇಜಿನಲ್ಲಿ ಕಾಂಗ್ರೆಸ್-ಬಿಜೆಪಿ ತೀವ್ರ ಜಟಾಪಟಿ – ಶಾಲಾ ಮಕ್ಕಳನ್ನು ಪ್ರತಿಭಟನೆಗೆ ಬಳಸಿಕೊಂಡ ಆರೋಪ!
ಮುಖಪುಟಮೈಸೂರು ನಗರರಾಜಕೀಯ

ಮಹಾರಾಣಿ ಕಾಲೇಜಿನಲ್ಲಿ ಕಾಂಗ್ರೆಸ್-ಬಿಜೆಪಿ ತೀವ್ರ ಜಟಾಪಟಿ – ಶಾಲಾ ಮಕ್ಕಳನ್ನು ಪ್ರತಿಭಟನೆಗೆ ಬಳಸಿಕೊಂಡ ಆರೋಪ!

Prathinidhi News
Last updated: July 22, 2026 3:56 pm
Prathinidhi News
Published July 22, 2026
Share
SHARE

ಮೈಸೂರು, ಜುಲೈ 22, 2026 : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯು ಮೈಸೂರಿನಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹಾರಾಣಿ ಜೂನಿಯರ್ ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಸಾರ್ವಜನಿಕವಾಗಿಯೇ ತೀವ್ರ ಮಾತಿನ ಚಕಮಕಿ ಹಾಗೂ ವಾಗ್ವಾದ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಬಿಜೆಪಿ ನಾಯಕರ ಗಂಭೀರ ಆರೋಪ ಮತ್ತು ಆಕ್ರೋಶ:

ಸರ್ಕಾರಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳನ್ನು ಬಲವಂತವಾಗಿ ಕರೆತಂದು ರಾಜಕೀಯ ಪ್ರತಿಭಟನೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಕಾಂಗ್ರೆಸ್ ಶಾಸಕ ಕೆ. ಹರೀಶ್ ಗೌಡ ಹಾಗೂ ಬಿಜೆಪಿ ನಾಯಕರು ಏಕಕಾಲಕ್ಕೆ ಭೇಟಿ ನೀಡಿದಾಗ ವಾತಾವರಣ ಕಾವೇರಿತು. ಕಾಲೇಜು ಆಡಳಿತ ಮಂಡಳಿಯ ನಡೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು, ಪ್ರಾಂಶುಪಾಲರ ಕಚೇರಿಯ ಮುಂಭಾಗದಲ್ಲಿ ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು.

- ಜಾಹೀರಾತು -

ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಹಾಗೂ ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಅವರ ನೇತೃತ್ವದಲ್ಲಿ, ಮೃತ ವಿದ್ಯಾರ್ಥಿಗಳ ಫ್ಲೆಕ್ಸ್ ಹಾಗೂ ಕಾಲೇಜು ಆವರಣದಲ್ಲಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸುವಂತೆ ಘೋಷಣೆ ಕೂಗಿ ಆಕ್ರೋಶ ಹೊರಹಾಕಲಾಯಿತು. ಅಂತಿಮವಾಗಿ ಬಿಜೆಪಿ ಕಾರ್ಯಕರ್ತರೇ ಮುಂಚೂಣಿಯಲ್ಲಿದ್ದು ಕಾಲೇಜಿನಲ್ಲಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸಿದರು.

ಶಾಸಕ ಹರೀಶ್ ಗೌಡ ತಿರುಗೇಟು:

ಬಿಜೆಪಿ ನಾಯಕರ ಆರೋಪಗಳನ್ನು ಸಂಪೂರ್ಣವಾಗಿ ತಳ್ಳುಹಾಕಿದ ಕಾಂಗ್ರೆಸ್ ಶಾಸಕ ಕೆ. ಹರೀಶ್ ಗೌಡ, ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆಯೇ ಹೊರತು ಯಾವುದೇ ರಾಜಕೀಯ ಪ್ರೇರಿತ ಕಾರ್ಯಕ್ರಮ ಇದಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲಿ ರಾಹುಲ್ ಗಾಂಧಿಯವರ ಫೋಟೋ ಬಳಸಿಲ್ಲ ಹಾಗೂ ಬಿಜೆಪಿ ನಾಯಕರು ಮಾಡುತ್ತಿರುವ ಆರೋಪಗಳು ಕೇವಲ ಸುಳ್ಳು ಎಂದು ಅವರು ತಿರುಗೇಟು ನೀಡಿದರು.

ಪ್ರಾಂಶುಪಾಲರ ಸ್ಪಷ್ಟನೆ:

ಘಟನೆ ಕುರಿತು ಮಹಾರಾಣಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲ ಸೋಮಣ್ಣ ಪ್ರತಿಕ್ರಿಯಿಸಿ, ನೀಟ್ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವ ಕಾರ್ಯಕ್ರಮ ಇದಾಗಿದ್ದು, ಸ್ಥಳೀಯ ಶಾಸಕರು ಉಪನಿರ್ದೇಶಕರಿಗೆ ನೀಡಿದ್ದ ಪತ್ರದ ಆಧಾರದಲ್ಲಿ ಮೇಲಧಿಕಾರಿಗಳ ಆದೇಶ ಪಾಲಿಸಿ ಅನುಮತಿ ನೀಡಿದ್ದಾಗಿ ತಿಳಿಸಿದರು. ಬ್ಯಾನರ್‌ನಲ್ಲಿ ರಾಹುಲ್ ಗಾಂಧಿಯವರ ಫೋಟೋ ಇರುವ ವಿಷಯ ತಮ್ಮ ಗಮನಕ್ಕೆ ಬಂದಿರಲಿಲ್ಲವೆಂದು ತಿಳಿಸಿದ ಅವರು, ತಕ್ಷಣವೇ ಕಾಲೇಜು ಆವರಣದಲ್ಲಿದ್ದ ಬ್ಯಾನರ್‌ಗಳನ್ನು ತೆಗೆಸಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.


Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಮುಖಪುಟ

ಕರ್ನಾಟಕ – ತಮಿಳು ನಾಡು ಗಡಿ ಭಾಗದಲ್ಲಿ ಜಮೀನುಗಳಿಗೆ ಲಗ್ಗೆ ಇಟ್ಟ 20ಕ್ಕೂ ಅಧಿಕ ಆನೆಗಳ ಹಿಂಡು !

November 27, 2025
ಮುಖಪುಟಮೈಸೂರು ನಗರ

ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ: ಮೃತ ಸಲೀಂ ವಿರುದ್ಧ FIR ದಾಖಲು

December 27, 2025
ಮಂಗಳೂರುಮುಖಪುಟ

ಕಾರವಾರ : ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ

November 29, 2025
ಅಮೆರಿಕದೇಶ-ವಿದೇಶಮುಖಪುಟ

ದೇಶದ ಸೈನಿಕರಿಗೆ “ದೊಡ್ಡಣ್ಣ”ನ ಕ್ರಿಸ್ಮಸ್ ಗಿಫ್ಟ್..! ಅಮೆರಿಕ ಸೇನಾನಿಗಳಿಗೆ “ಡೊನಾಲ್ಡ್ ಟ್ರಂಪ್” ಕೊಟ್ಟ ಹಣವೆಷ್ಟು..?

December 18, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?