PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡ ಲೋಕಾರ್ಪಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಮೈಸೂರು: ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡ ಲೋಕಾರ್ಪಣೆ
ಜಿಲ್ಲೆಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡ ಲೋಕಾರ್ಪಣೆ

Prathinidhi News
Last updated: February 7, 2026 3:23 pm
Prathinidhi News
Published February 7, 2026
Share
SHARE

ಮೈಸೂರು, ಫೆಬ್ರವರಿ 7, 2026 :ಸಾಂಸ್ಕೃತಿಕ ನಗರಿ ಮೈಸೂರಿನ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಯ ಸುಸಜ್ಜಿತ ನೂತನ ಕಟ್ಟಡವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಶುಕ್ರವಾರ ಅಧಿಕೃತವಾಗಿ ಉದ್ಘಾಟಿಸಿದರು. ಟೇಪ್ ಕತ್ತರಿಸುವ ಮೂಲಕ ಕಟ್ಟಡ ಲೋಕಾರ್ಪಣೆ ಮಾಡಿದ ಸಚಿವರು, ಬಳಿಕ ವೇದಿಕೆ ಸಮಾರಂಭಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

 

ಪೊಲೀಸ್ ಠಾಣೆಗಳು ದೇಗುಲಗಳಿದ್ದಂತೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ಸಮಾರಂಭದಲ್ಲಿ ಮಾತನಾಡಿದ ಗೃಹ ಸಚಿವರು, “ಪೊಲೀಸ್ ಇಲಾಖೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಸಾಕಷ್ಟು ಸುಧಾರಣೆ ತರಲಾಗಿದೆ. ಜನರು ತಮ್ಮ ಕಷ್ಟ ಪರಿಹಾರಕ್ಕಾಗಿ ದೇವಸ್ಥಾನಕ್ಕೆ ಹೋಗುವಂತೆ ಪೊಲೀಸ್ ಠಾಣೆಗೂ ಬರುತ್ತಾರೆ. ಆ ದೃಷ್ಟಿಯಿಂದ ಠಾಣೆಗಳು ದೇಗುಲಗಳಿದ್ದಂತೆ. ಪೊಲೀಸರು ಪ್ರತಿಯೊಬ್ಬರನ್ನೂ ಅಪರಾಧಿ ಎಂಬಂತೆ ನೋಡದೆ, ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಜಾರಿಗೊಳಿಸಬೇಕು,” ಎಂದರು. ಇದೇ ವೇಳೆ ‘ಮನೆ ಮನೆಗೂ ಕಾಂಗ್ರೆಸ್’ ಮಾದರಿಯಲ್ಲಿ ‘ಮನೆ ಮನೆಗೂ ಪೊಲೀಸ್’ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಪೊಲೀಸರು ಜನರ ಮನೆಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಬೇಕು ಎಂದು ಕರೆ ನೀಡಿದರು.

- ಜಾಹೀರಾತು -

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜನಪ್ರತಿನಿಧಿಗಳು ಮೈಸೂರಿನ ಸುಗಮ ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ಕುರಿತು ಹಲವು ಸಲಹೆಗಳನ್ನು ನೀಡಿದರು:

  • ಶಾಸಕ ಶ್ರೀವತ್ಸ: “ಮೈಸೂರು ಪ್ರವಾಸಿಗರ ತಾಣ. ವಾರಾಂತ್ಯದಲ್ಲಿ ನಗರದ ಹೃದಯ ಭಾಗದಲ್ಲಿ ವಿಪರೀತ ಟ್ರಾಫಿಕ್ ಜಾಮ್ ಆಗುತ್ತಿದ್ದು, ಪ್ರವಾಸಿಗರು ಪರದಾಡುತ್ತಿದ್ದಾರೆ. ಇದನ್ನು ತಡೆಯಲು ಮತ್ತು ಮೈಸೂರನ್ನು ಟೂರಿಸ್ಟ್ ಫ್ರೆಂಡ್ಲಿ ನಗರವನ್ನಾಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಒತ್ತಾಯಿಸಿದರು.

  • ಶಾಸಕ ತನ್ವೀರ್ ಸೇಠ್: “ಉದಯಗಿರಿ ಪೊಲೀಸ್ ಠಾಣೆ ವಿಭಜನೆಯಾಗಿದ್ದರೂ ಸೂಕ್ತ ಸಿಬ್ಬಂದಿ ನೇಮಕವಾಗಿಲ್ಲ. ಹೆಚ್ಚುತ್ತಿರುವ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಹೆಚ್ಚಿನ ಸಿಬ್ಬಂದಿ ನಿಯೋಜಿಸಬೇಕು. ವ್ಯಸನ ಮುಕ್ತ ಸಮಾಜದ ಜೊತೆಗೆ ಅಪರಾಧ ಮುಕ್ತ ಸಮಾಜದತ್ತ ಪೊಲೀಸರು ಗಮನಹರಿಸಬೇಕು,” ಎಂದರು.

  • ಶಾಸಕ ಅನಿಲ್ ಚಿಕ್ಕಮಾದು: “ನಗರದಲ್ಲಿ ಇತ್ತೀಚೆಗೆ ಡ್ರಗ್ಸ್ ಹಾವಳಿ ಹೆಚ್ಚುತ್ತಿರುವುದು ಕಳವಳಕಾರಿ. ವಿಶೇಷವಾಗಿ ಇಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು,” ಎಂದು ತಿಳಿಸಿದರು.

  • ಎಂಎಲ್ಸಿ ಸಿ.ಎನ್. ಮಂಜೇಗೌಡ: “ಹಗಲಿರುಳು ದುಡಿಯುವ ಪೊಲೀಸರ ಆರೋಗ್ಯ ಸುಧಾರಣೆ ಮತ್ತು ವಸತಿ ಗೃಹಗಳ ನವೀಕರಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು,” ಎಂದು ಮನವಿ ಮಾಡಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಮುಖಪುಟ

ಚಾಮರಾಜನಗರ: ಉಪ ಲೋಕಾಯುಕ್ತರ ಮಿಂಚಿನ ರೌಂಡ್ಸ್ ; ಆಸ್ಪತ್ರೆ, ಹಾಸ್ಟೆಲ್, ನಗರ ಸ್ವಚ್ಛತೆ ಬಗ್ಗೆ ಅಸಮಾಧಾನ

November 29, 2025
ನಂಜನಗೂಡುಮುಖಪುಟ

ನಂಜನಗೂಡು: ಕೋಣನೂರು-ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಬೆಂಕಿ; ಕಿಡಿಗೇಡಿಗಳ ಕೃತ್ಯದ ಶಂಕೆ

February 7, 2026
ಬೆಂಗಳೂರುಮುಖಪುಟ

ಚಳಿ ಗಾಳಿಗೆ ಉತ್ತರ ಕರ್ನಾಟಕ ತತ್ತರ ;  ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

December 22, 2025
ಬೆಂಗಳೂರುಮುಖಪುಟರಾಜಕೀಯ

ಬೆಂಗಳೂರಿನ ಶಾಸಕರ ಭವನದಲ್ಲಿ ಮುಖ್ಯಮಂತ್ರಿಗಳಿಂದ ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಣೆ

November 8, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?