ಬೆಂಗಳೂರು: ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ ಯುವಕನೊಬ್ಬ ಬಲಿಯಾದ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ನೆಲಮಂಗಲ ಮೂಲದ ಚಂದನ್ ಕುಮಾರ್(37) ಎಂದು ಗುರುತಿಸಲಾಗಿದೆ.
ಚಂದನ್ ಕುಮಾರ್ ಬೆಂಗಳೂರಿನ ನೆಲಮಂಗಲ ಮೂಲದ ತ್ಯಾಮಗೊಂಡ್ಲುವಿನ ನಿವಾಸಿ. ಕಳೆದ 6 ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಭಾನುವಾರ ರಾತ್ರಿ 9 ಗಂಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಂದನ್ ಕುಮಾರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಹಲವು ಗುಂಡುಗಳು ಚಂದನ್ ದೇಹವನ್ನು ಹೊಕ್ಕಿವೆ. ಘಟನಾ ಸ್ಥಳದಲ್ಲೇ ಚಂದನ್ ಸಾವನ್ನಪ್ಪಿದ್ದಾರೆ. ಚಂದನ್ ಬ್ರಾಂಪ್ಟನ್‌ನಲ್ಲಿರುವ ಶಿರಡಿ ಸಾಯಿಬಾಬಾ ದೇವಾಲಯದ ಸಕ್ರಿಯ ಸದಸ್ಯರಾಗಿದ್ದರು.
ಲಭ್ಯವಿರುವ ಮಾಹಿತಿಯ ಪ್ರಕಾರ, ಚಂದನ್ ಕುಮಾರ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ವರದಿಯಲ್ಲಿ ಲಭ್ಯವಾಗಿರುವ ದೃಶ್ಯಾವಳಿಗಳ ಪ್ರಕಾರ, ಚಂದನ್ ಅವರ ಕಾರಿನ ಮುಂಭಾಗದ ಗಾಜಿನ ಮೇಲೆ ಗುಂಡು ಹೊಕ್ಕಿರುವ ಗುರುತುಗಳು ಸ್ಪಷ್ಟವಾಗಿ ಕಂಡುಬಂದಿವೆ. ಇದು ಪಾಯಿಂಟ್ ಬ್ಲಾಂಕ್ ರೇಂಜ್‌ನಲ್ಲಿ ಅಥವಾ ಸಮೀಪದಿಂದ ನಡೆಸಲಾದ ದಾಳಿ ಇರಬಹುದೆಂದು ಶಂಕಿಸಲಾಗಿದೆ.
