ಮೈಸೂರು, ಜುಲೈ 24, 2026 : ಅಯೋಧ್ಯೆಯ ರಾಮಮಂದಿರದಲ್ಲಿ ಹುಂಡಿ ಕಳ್ಳತನ ನಡೆದಿರುವ ವಿಚಾರವನ್ನು ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಗಾಂಧಿ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ವೇಳೆ “ದೇವಸ್ಥಾನದ ಹುಂಡಿ ಕಳ್ಳರು” ಹಾಗೂ “ಶ್ರೀರಾಮನ ಹುಂಡಿ ಕದ್ದ ಕಳ್ಳರಿಗೆ ಧಿಕ್ಕಾರ” ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮಾಜಿ ಸಚಿವ ಕೋಟೆ ಎಂ. ಶಿವಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ಜೆ. ವಿಜಯ್ ಕುಮಾರ್, ರಾಜ್ಯ ವಕ್ತಾರ ಮೌರ್ಯ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದರು.
