ಟಿ. ನರಸೀಪುರ, ಜುಲೈ 24, 2026 : ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿರುವ ತಲಕಾಡು ಠಾಣೆ ಪೊಲೀಸರು 4 ಕೆಜಿ 400 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಟಿ. ದೊಡ್ಡಪುರ ಗ್ರಾಮದ ಸಮೀಪ ದಾಳಿ ನಡೆಸಿದ ವೇಳೆ, ಹುಣಸೂರು ಪಟ್ಟಣದ ಅಜರ್ ವಾಸಿಮ್ ಎಂಬಾತ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು, ಆತನಿಂದ 4 ಕೆಜಿ 400 ಗ್ರಾಂ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.
ಈ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
