PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ: ಮಾಲೀಕನ ಮೇಲೆ ಗುಂಡಿನ ದಾಳಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ: ಮಾಲೀಕನ ಮೇಲೆ ಗುಂಡಿನ ದಾಳಿ
ಕ್ರೈಂ ಸುದ್ದಿಗಳುಮುಖಪುಟ

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ: ಮಾಲೀಕನ ಮೇಲೆ ಗುಂಡಿನ ದಾಳಿ

Prathinidhi News
Last updated: August 8, 2026 3:28 pm
Prathinidhi News
Published August 8, 2026
Share
SHARE

ನೆಲಮಂಗಲ, ಆಗಸ್ಟ್‌ 8, 2026 : ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯಲ್ಲಿ ಗುರುವಾರ ನಡೆದಿದೆ.

ದಾಬಸ್‌ಪೇಟೆಯ ಪ್ರೇಮ್ ಶಿವ ಜ್ಯುವೆಲರ್ಸ್ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ದಾಳಿಯಲ್ಲಿ ಅಂಗಡಿ ಮಾಲೀಕ ಕುನ್ನರಾಮ್ ಅವರ ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಬುಲೆರೋ ವಾಹನದಲ್ಲಿ ಬಂದ ಐದರಿಂದ ಆರು ಮಂದಿಯಲ್ಲಿ ಇಬ್ಬರು ದುಷ್ಕರ್ಮಿಗಳು ಗ್ರಾಹಕರಂತೆ ಅಂಗಡಿಗೆ ಪ್ರವೇಶಿಸಿದ್ದಾರೆ. ಬಳಿಕ ಏಕಾಏಕಿ ಗನ್ ಹೊರತೆಗೆದು ಮಾಲೀಕನ ಮೇಲೆ ಎರಡು ಸುತ್ತು ಗುಂಡು ಹಾರಿಸಿ ಚಿನ್ನಾಭರಣ ದೋಚಲು ಯತ್ನಿಸಿದ್ದಾರೆ.

ಈ ವೇಳೆ ಅಂಗಡಿ ಮಾಲೀಕ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ದುಷ್ಕರ್ಮಿಗಳ ಯೋಜನೆ ವಿಫಲವಾಗಿದೆ. ಗುಂಡಿನ ದಾಳಿಯ ನಡುವೆಯೂ ಅಂಗಡಿಯ ಸಿಬ್ಬಂದಿ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- ಜಾಹೀರಾತು -

ದರೋಡೆ ಯತ್ನ ವಿಫಲವಾಗುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿ ದೊಡ್ಡಬಳ್ಳಾಪುರ ಮಾರ್ಗವಾಗಿ ಎಸ್ಕೇಪ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಎಎಸ್ಪಿ-1 ವೆಂಕಟೇಶ್ ಪ್ರಸನ್ನ, ಎಎಸ್ಪಿ-2 ಲಕ್ಷ್ಮಿನಾರಾಯಣ ಹಾಗೂ ದಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಆರಂಭಿಸಲಾಗಿದೆ. ದರೋಡೆಕೋರರು ಯಾವುದೇ ಚಿನ್ನಾಭರಣ ದೋಚದೇ ಪರಾರಿಯಾದರೂ, ಜನನಿಬಿಡ ಪ್ರದೇಶದಲ್ಲೇ ಗುಂಡಿನ ದಾಳಿ ನಡೆಸಿರುವ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಹೊರವಲಯದಲ್ಲಿ ಇಂತಹ ದರೋಡೆ ಯತ್ನಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಮುಖಪುಟರಾಜಕೀಯ

ಕೇರಳದಲ್ಲಿ ಕಮಲ ಕಮಾಲ್‌ : ಮೊದಲ ಬಾರಿ ತಿರುವನಂತಪುರಂ ಮಹಾನಗಪಾಲಿಕೆಯ ಗದ್ದುಗೆ ಬಿಜೆಪಿ ತೆಕ್ಕೆಗೆ

December 16, 2025
ಮಂಗಳೂರುಮುಖಪುಟರಾಜಕೀಯ

ಪ್ರಧಾನಿ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ ; ಉಡುಪಿ ಕಾರ್ಯಕ್ರಮಕ್ಕೆ ಪ್ರಯಾಣ

November 28, 2025
ದೇಶ-ವಿದೇಶಮುಖಪುಟ

ಟೆಕ್ಸಾಸ್ ಸಮುದ್ರದಲ್ಲಿ ಮೆಕ್ಸಿಕನ್ ನೌಕಾಪಡೆ ವಿಮಾನ ಪತನ: ಐವರ ದುರ್ಮರಣ

December 23, 2025
ಮುಖಪುಟರಾಜಕೀಯ

ಜೂನ್ 2026 ರ ಒಳಗೆ ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟ್ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

December 18, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?