PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: DK SHIVAKUMAR : ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ‘ಇಂಜಿನಿಯರ್ಸ್​ ಡೇ’ ಆಚರಣೆ: ಸಿಎಂ ಡಿಕೆ ಶಿವಕುಮಾರ್ ಘೋಷಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > DK SHIVAKUMAR : ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ‘ಇಂಜಿನಿಯರ್ಸ್​ ಡೇ’ ಆಚರಣೆ: ಸಿಎಂ ಡಿಕೆ ಶಿವಕುಮಾರ್ ಘೋಷಣೆ
ಬೆಂಗಳೂರುಮುಖಪುಟ

DK SHIVAKUMAR : ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ‘ಇಂಜಿನಿಯರ್ಸ್​ ಡೇ’ ಆಚರಣೆ: ಸಿಎಂ ಡಿಕೆ ಶಿವಕುಮಾರ್ ಘೋಷಣೆ

Prathinidhi News
Last updated: September 15, 2026 5:50 pm
Prathinidhi News
Published September 15, 2026
Share
SHARE

ಬೆಂಗಳೂರು, ಸೆಪ್ಟೆಂಬರ್ 15: ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್‌ಗಳ ದಿನವನ್ನು (ಇಂಜಿನಿಯರ್ಸ್​ ಡೇ) ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಘೋಷಿಸಿದ್ದಾರೆ. ಇಂಜಿನಿಯರ್‌ಗಳ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಸರ್ಕಾರದ ಪರವಾಗಿ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಆಚರಣೆಯ ರೂಪುರೇಷೆಗಳನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಅಭಿವೃದ್ಧಿಗೆ ಅಡಿಪಾಯ ಹಾಕುವವರು ಇಂಜಿನಿಯರ್‌ಗಳು. ದೇಶದ ವಿಜ್ಞಾನಿಗಳು ನಡೆಸುವ ಸಂಶೋಧನೆಗಳನ್ನು ಕಾರ್ಯರೂಪಕ್ಕೆ ತರುವ ಮಹತ್ವದ ಜವಾಬ್ದಾರಿ ಇಂಜಿನಿಯರ್‌ಗಳ ಮೇಲಿದೆ. ಇಂಜಿನಿಯರ್‌ಗಳು ದೇಶದ ಆಸ್ತಿಯಾಗಿದ್ದು, ಅವರ ಕೊಡುಗೆಯನ್ನು ಗುರುತಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಹೇಳಿದರು.

ಕರ್ನಾಟಕದಲ್ಲಿ ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಇಂಜಿನಿಯರ್‌ಗಳು ತಯಾರಾಗುತ್ತಿದ್ದಾರೆ. ಭಾರತದಲ್ಲೇ ಅತಿ ಹೆಚ್ಚು ಇಂಜಿನಿಯರ್‌ಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಪ್ರಮುಖವಾಗಿದೆ. ಹೀಗಾಗಿ ರಾಜ್ಯದ ಉದ್ದಗಲಕ್ಕೂ ಇಂಜಿನಿಯರ್‌ಗಳು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಡಿಕೆ ಶಿವಕುಮಾರ್ ಕರೆ ನೀಡಿದರು.

ಹಿಂದೆ ವಾಸ್ತುಶಿಲ್ಪದ ಪರಂಪರೆಯಲ್ಲಿ ಇಂಜಿನಿಯರ್‌ಗಳನ್ನು ಗುರುತಿಸಲಾಗುತ್ತಿತ್ತು. ಆದರೆ, ಈಗ ಇಂಧನ, ಕಟ್ಟಡ ನಿರ್ಮಾಣ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಇಂಜಿನಿಯರ್‌ಗಳು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಅವರ ಸೇವೆ ಅಪಾರವಾಗಿದೆ. ಸರ್ ಎಂ. ವಿಶ್ವೇಶ್ವರಯ್ಯ ಅವರು ದೇಶಕ್ಕೆ ಮಾದರಿಯಾಗಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದ್ದು, ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

TAGGED:#dcmdkshivakumarbengaluruDKSHIVAKUMAR
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು: ಜಮೀನು ವಿವಾದಕ್ಕೆ ಬೆಳೆ ನಾಶ, ಹಲ್ಲೆ; ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

December 29, 2025
ದೇಶ-ವಿದೇಶಮುಖಪುಟ

“ದಿತ್ವಾ” ಸೈಕ್ಲೋನ್ ಗೆ ದ್ವೀಪರಾಷ್ಟ್ರ ಶ್ರೀಲಂಕಾ ತತ್ತರ ; ಮರ*ಣ ಮಾರುತಕ್ಕೆ ಸಿಲುಕಿ ಕಂಗಾಲಾದ ಜನರು !

December 1, 2025
ಮುಖಪುಟ

ಬೆಳಗಾವಿ : ರಜೆಗೆಂದು ಮನೆಗೆ ತೆರಳಿದ್ದ ಯೋಧ ರಸ್ತೆ ಅಪಘಾತದಲ್ಲಿ ಸಾವು

December 22, 2025
ಬೆಂಗಳೂರುಮುಖಪುಟರಾಜಕೀಯ

ಸಿದ್ದು – ಡಿಕೆಶಿ ಪವರ್ ಶೇರಿಂಗ್ ಕ್ಲೈಮ್ಯಾಕ್ಸ್..! ಆಪ್ತರಿಗೆ ಸಿಎಂ ಡಿನ್ನರ್ ಮೀಟಿಂಗ್

November 22, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?