PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಳ..?
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಳ..?
ಜಿಲ್ಲೆಮಂಗಳೂರುಮುಖಪುಟ

ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಳ..?

Prathinidhi News
Last updated: September 18, 2026 6:33 pm
Prathinidhi News
Published September 18, 2026
Share
SHARE

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿಗಳವರೆಗೆ ಹೆಚ್ಚಳ ಮಾಡುವಂತೆ ಕರ್ನಾಟಕ ಹಾಲು ಮಹಾಮಂಡಳ (KMF) ಹಾಗೂ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳು ಸರ್ಕಾರವನ್ನು ಗಂಭೀರವಾಗಿ ಆಗ್ರಹಿಸಿವೆ.

ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
​ಪಶುಆಹಾರದ ವೆಚ್ಚ, ಸಾರಿಗೆ ವೆಚ್ಚ ಹಾಗೂ ಡೈರಿ ನಿರ್ವಹಣಾ ವೆಚ್ಚಗಳು ದಿನದಿಂದ ದಿನಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿರುವುದೇ ಈ ದರ ಏರಿಕೆ ಬೇಡಿಕೆಗೆ ಮುಖ್ಯ ಕಾರಣವಾಗಿದೆ. ಹಾಲು ಉತ್ಪಾದನಾ ವೆಚ್ಚ ಹೆಚ್ಚಿರುವುದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಒಕ್ಕೂಟಗಳು ಪ್ರತಿಪಾದಿಸಿವೆ.

​ಹಾಲಿನ ದರ ಹೆಚ್ಚಳದಿಂದ ಬರುವ ಹೆಚ್ಚುವರಿ ಆದಾಯದ ಸಿಂಹಪಾಲನ್ನು ನೇರವಾಗಿ ಹಾಲು ಉತ್ಪಾದಕ ರೈತರ ಖಾತೆಗೆ ತಲುಪಿಸಲಾಗುವುದು ಎಂದು ಕೆಎಂಎಫ್ ಸ್ಪಷ್ಟಪಡಿಸಿದೆ.

ರೈತರ ಹಿತರಕ್ಷಣೆ ಮತ್ತು ಡೈರಿ ಕ್ಷೇತ್ರದ ಉಳಿವಿಗಾಗಿ ಈ ದರ ಪರಿಷ್ಕರಣೆ ಅತ್ಯಗತ್ಯವಾಗಿದೆ ಎಂಬುದು ಒಕ್ಕೂಟಗಳ ವಾದವಾಗಿದೆ.
​ಪ್ರಸ್ತುತ ಈ ಪ್ರಸ್ತಾವನೆಯು ಸರ್ಕಾರದ ಅಂಗಳದಲ್ಲಿದ್ದು, ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

- ಜಾಹೀರಾತು -

ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ರೈತರಿಗೆ ನೆರವಾಗುವಂತೆ ಸರ್ಕಾರ ಕೈಗೊಳ್ಳುವ ತೀರ್ಮಾನದತ್ತ ಎಲ್ಲರ ಕಣ್ಣು ನೆಟ್ಟಿದೆ.

TAGGED:mangaloreMILKNANDINI
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ರಾಜಧಾನಿ ಬೆಂಗಳೂರಲ್ಲಿ “ವಿಷ”ಗಾಳಿ..! ; ರಾಷ್ಟ್ರ ರಾಜಧಾನಿಯನ್ನೂ ಮೀರಿಸುತ್ತಾ ರಾಜ್ಯ ರಾಜಧಾನಿ..?

December 23, 2025
ದೇಶ-ವಿದೇಶಮುಖಪುಟ

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ ; 42 ಮಂದಿ ಭಾರತೀಯರು ಸಜೀವ ದಹನ !

November 17, 2025
ಮುಖಪುಟಮೈಸೂರು ನಗರ

ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮೀಜಿಯವರಿಗೆ ಮೈಸೂರಿನಲ್ಲಿ ಭಕ್ತಿಪೂರ್ವಕ ಪುಷ್ಪ ನಮನ

January 21, 2026
ಬೆಂಗಳೂರುಮುಖಪುಟ

ಮಹಿಳಾ ಉದ್ಯೋಗಿಗಳಿಗೆ ವೇತನಸಹಿತ ಮಾಸಿಕ ಋತುಚಕ್ರದ ಒಂದು ರಜೆ ; ಕಾರ್ಮಿಕ ಇಲಾಖೆ ಕಂಡೀಷನ್ ಏನು..?

November 13, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?