PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸೌಜನ್ಯ ಅತ್ಯಾಚಾರ ಪ್ರಕರಣ: ಕೇಸ್​​ ಮರು ತನಿಖೆಗೆ ಸುಪ್ರೀಂಕೋರ್ಟ್​ ಅಸ್ತು..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಸೌಜನ್ಯ ಅತ್ಯಾಚಾರ ಪ್ರಕರಣ: ಕೇಸ್​​ ಮರು ತನಿಖೆಗೆ ಸುಪ್ರೀಂಕೋರ್ಟ್​ ಅಸ್ತು..!
ಕ್ರೈಂ ಸುದ್ದಿಗಳುಮಂಗಳೂರುಮುಖಪುಟ

ಸೌಜನ್ಯ ಅತ್ಯಾಚಾರ ಪ್ರಕರಣ: ಕೇಸ್​​ ಮರು ತನಿಖೆಗೆ ಸುಪ್ರೀಂಕೋರ್ಟ್​ ಅಸ್ತು..!

Prathinidhi News
Last updated: September 21, 2026 6:42 pm
Prathinidhi News
Published September 21, 2026
Share
SHARE

ಮಂಗಳೂರು : 2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದ್ದು, ಕೇಸ್​​ ಮರು ತನಿಖೆಗೆ ಸುಪ್ರೀಂಕೋರ್ಟ್​ ಅಸ್ತು ಎಂದಿದೆ. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಹೊಸದಾಗಿ ತನಿಖೆಗೆ ಕೋರ್ಟ್​​ ಆದೇಶಿಸಿದ್ದು, 3 ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಆ ಮೂಲಕ ದೇಶಾದ್ಯಂತ ಸದ್ದು ಮಾಡಿದ್ದ ಈ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ.

ಸೌಜನ್ಯ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖೆಯಲ್ಲಿ ಸೇರಿಸದಂತೆ ನಿರ್ದೇಶನ ನೀಡಿದ್ದು, ಹೊಸ ತಂಡದಿಂದ ಸ್ವತಂತ್ರವಾಗಿ ಮರು ತನಿಖೆ ನಡೆಸುವಂತೆ ಸೂಚಿಸಿದೆ. ಪ್ರಕರಣದ ತನಿಖೆ ಮತ್ತು ಸಾಕ್ಷ್ಯಗಳ ಕುರಿತು ಈ ಹಿಂದೆ ಸುಪ್ರೀಂ ಕೋರ್ಟ್ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು

2012 ರ ಅಕ್ಟೋಬರ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಉಜಿರೆ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ 17 ವರ್ಷದ ಸೌಜನ್ಯಾಳನ್ನು ಅಪಹರಿಸಿ, ಅತ್ಯಾಚಾರ ಎಸಗಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಲಾಗಿತ್ತು. ಘಟನೆ ನಡೆದ ಕೆಲವು ದಿನಗಳ ನಂತರ ಪೊಲೀಸರು ಸಂತೋಷ್ ರಾವ್ ಎಂಬಾತನನ್ನು ಮುಖ್ಯ ಆರೋಪಿಯನ್ನಾಗಿ ಬಂಧಿಸಿದ್ದರು. ಸಾರ್ವಜನಿಕರ ತೀವ್ರ ಆಕ್ರೋಶ ಮತ್ತು ಪ್ರತಿಭಟನೆಗಳ ನಂತರ, ಪ್ರಕರಣವನ್ನು ಮೊದಲು ಸಿಐಡಿ (CID) ಮತ್ತು ನಂತರ ಕೇಂದ್ರ ತನಿಖಾ ದಳಕ್ಕೆ (CBI) ವಹಿಸಲಾಗಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯವು ಆರೋಪಿ ಸಂತೋಷ್ ರಾವ್ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ ಆತನನ್ನು ಖುಲಾಸೆಗೊಳಿಸಿತ್ತು.

ಹೈಕೋರ್ಟ್​​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​​ ಕದತಟ್ಟಿದ್ದ ಸೌಜನ್ಯಾ ತಾಯಿ

ಸಿಬಿಐ ತನಿಖೆಯಲ್ಲಿ ಲೋಪದೋಷಗಳಿದ್ದು, ನೈಜ ಆರೋಪಿಗಳನ್ನು ರಕ್ಷಿಸಲಾಗಿದೆ ಎಂದು ಆರೋಪಿಸಿ ಸೌಜನ್ಯಾಳ ತಾಯಿ ಕುಸುಮಾವತಿ ಅವರು ಮರುತನಿಖೆಗೆ ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಹೀಗಾಗಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ತನಿಖಾ ಸಂಸ್ಥೆಯ ವೈಫಲ್ಯವನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್, ಪ್ರಕರಣದ ಮರುತನಿಖೆ ನಡೆಸುವಂತೆ ಈಗ ಆದೇಶ ಹೊರಡಿಸಿದೆ.

- ಜಾಹೀರಾತು -
TAGGED:mangaloresowjanya case
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನವದೆಹಲಿಮುಖಪುಟರಾಜಕೀಯ

ಬಿಜೆಪಿಗೆ ನೂತನ ಅಧ್ಯಕ್ಷ ; ನೂತನ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ !

January 20, 2026
ಕ್ರೈಂ ಸುದ್ದಿಗಳುನಂಜನಗೂಡುಮುಖಪುಟ

ನಂಜನಗೂಡಿನಲ್ಲಿ ಅಪ್ರಾಪ್ತ ಯುವತಿ ಸಾವು: ಪ್ರಕರಣಕ್ಕೆ ಹೊಸ ತಿರುವು ನೀಡಿದ ಆಡಿಯೋ ಮತ್ತು ಫೋಟೋ

January 10, 2026
ಮಂಡ್ಯಮುಖಪುಟಮೈಸೂರು ನಗರ

ಹನುಮ ಮಾಲಾ ಸಂಕೀರ್ತನ : ಶ್ರೀ ಮೂಡಲ ಬಾಗಿಲು ಹನುಮ ಸಂಕಲ್ಪ ಮಾಲೆ, ಹಿಂಧೂ ಜಾಗರಣಾ ವೇದಿಕೆ ವತಿಯಿಂದ ಸುದ್ದಿಗೋಷ್ಠಿ

December 2, 2025
ಮುಖಪುಟಮೈಸೂರು ನಗರರಾಜಕೀಯ

ಬಿಹಾರ ಚುನಾವಣೆ ಗೆಲುವು: ಮೈಸೂರು ಬಿಜೆಪಿ ಕಚೇರಿಯಲ್ಲಿ ಸಂಭ್ರ!

November 14, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?