PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ದಸರಾ ಭದ್ರತೆಗೆ 6,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ದಸರಾ ಭದ್ರತೆಗೆ 6,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಮುಖಪುಟಮೈಸೂರು ನಗರ

ದಸರಾ ಭದ್ರತೆಗೆ 6,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

Prathinidhi News
Last updated: October 9, 2026 7:23 pm
Prathinidhi News
Published October 9, 2026
Share
SHARE

ಮೈಸೂರು : ದಸರಾಗೆ ದಿನಗಣನೆ ಶುರುವಾಗಿದ್ದು, ವಿಶ್ವ ವಿಖ್ಯಾತ ದಸರಾ ಕಣ್ತುಂಬಿಕೊಳ್ಳಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ದಸರಾ ಮಹೋತ್ಸವದ ಕಾರ್ಯಗಳು ಜೋರಾಗಿ ನಡೆದಿವೆ. ಈ ಬಾರಿಯ ದಸರಾ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಆರು ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು, ಶಿಥಿಲಗೊಂಡ ಕಟ್ಟಡ ಮತ್ತು ಮರಗಳಲ್ಲಿ ಕುಳಿತು ಜಂಬೂಸವಾರಿ ವೀಕ್ಷಣೆಗೆ ನಿಷೇಧಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸೀಮಾ ಲಾಟ್ಕರ್, ‘ಈ ಬಾರಿಯ ನಾಡ ಹಬ್ಬ ಮೈಸೂರು ದಸರಾಗೆ 5,161 ಸಿವಿಲ್ ಹಾಗೂ ಸಂಚಾರಿ ಪೊಲೀಸರು, 33 ಕೆಎಸ್​​ಆರ್​ಪಿ ತುಕಡಿ, 25 ಡಿಎಆರ್​ ತುಕಡಿ, 1500 ಹೋಮ್​ ಗಾರ್ಡ್​ಗಳು ಸೇರಿದಂತೆ ಆರು ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಸಾರ್ವಜನಿಕರ ಮೇಲೆ 35,794 ಸಿಸಿ ಕ್ಯಾಮರಾ ಕಣ್ಗಾವಲು

‘ದಸರಾದ 11 ದಿನ ಒಟ್ಟು 18 ಪೊಲೀಸ್ ಸಹಾಯ ಕೇಂದ್ರಗಳ ಸ್ಥಾಪನೆ ಮಾಡಲಾಗಿದ್ದು, ತುರ್ತು ಸಂದರ್ಭಗಳಲ್ಲಿ 112 ಸಹಾಯವಾಣಿ ಬಳಕೆ ಮಾಡಿಕೊಳ್ಳಬಹುದಾಗಿದೆ. ಇನ್ನು ಅರಮನೆ ಸುತ್ತಮುತ್ತ ಪ್ರಮುಖ ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಇರಲಿದ್ದು, 35,794 ಸಿಸಿ ಕ್ಯಾಮರಾ ಮೂಲಕ ಸಾರ್ವಜನಿಕರ ಮೇಲೆ ಕಣ್ಗಾವಲು ಇರಲಿದೆ’ ಎಂದು ಅವರು ತಿಳಿಸಿದರು.

TAGGED:#dasara#mysuru
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ಚಾಮುಂಡಿಬೆಟ್ಟದಲ್ಲಿ ನಾಳೆ ಮೊದಲ ಆಷಾಢ ಶುಕ್ರವಾರದ ಸಡಗರ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಪೂರ್ಣ

July 16, 2026
ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂಗೆ ಹಕ್ಕೊತ್ತಾಯ: ಅಹಿಂದ ಸಂಘಟನೆಗಳಿಂದ ಉಗ್ರ ಹೋರಾಟದ ಎಚ್ಚರಿಕೆ

November 29, 2025
ಬೆಂಗಳೂರುಮುಖಪುಟ

ಕರ್ನಾಟಕದಲ್ಲಿ ಮುಂದಿನ 4 ದಿನ ಮಳೆ

September 26, 2026
ಜಿಲ್ಲೆಮುಖಪುಟರಾಜಕೀಯ

ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ

September 19, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?