ಮೈಸೂರು, ಅಕ್ಟೋಬರ್ 11: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಧ್ಯುಕ್ತವಾಗಿ ಚಾಲನೆ ದೊರೆತಿದೆ. ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಉದ್ಘಾಟನೆ ನೆರವೇರಿಸಿದ್ದಾರೆ. ಈ ವೇಳೆ ಸಿಎಂ ಡಿ.ಕೆ.ಶಿವಕುಮಾರ್, ಅವರ ಪತ್ನಿ ಉಷಾ, ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಶಿವರಾಜ ಸಂಗಪ್ಪ ತಂಗಡಗಿ, ಈಶ್ವರ ಖಂಡ್ರೆ, ಅಜಯ್ ಸಿಂಗ್, ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ತನ್ವೀರ್ ಸೇಠ್, ಸಂಸದ ಸುನೀಲ್ ಬೋಸ್ ಸೇರಿದಂತೆ ರಾಜ್ಯದ ವಿವಿಧ ಮಠಗಳ ಮಠಾಧೀಶರು, ಸಾರ್ವಜನಿಕರು ಉಪಸ್ಥಿತರಿದ್ದರು.
