PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಲೋಕಾಯುಕ್ತ ಬಲೆಗೆ ಶಿರಹಟ್ಟಿ ಬಿಜೆಪಿ ಶಾಸಕ: 5 ಲಕ್ಷ ಲಂಚ ಪಡೆಯುವಾಗ ಡಾ. ಚಂದ್ರು ಲಮಾಣಿ ರೆಡ್ ಹ್ಯಾಂಡ್ ಅರೆಸ್ಟ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಲೋಕಾಯುಕ್ತ ಬಲೆಗೆ ಶಿರಹಟ್ಟಿ ಬಿಜೆಪಿ ಶಾಸಕ: 5 ಲಕ್ಷ ಲಂಚ ಪಡೆಯುವಾಗ ಡಾ. ಚಂದ್ರು ಲಮಾಣಿ ರೆಡ್ ಹ್ಯಾಂಡ್ ಅರೆಸ್ಟ್
ಮುಖಪುಟರಾಜಕೀಯ

ಲೋಕಾಯುಕ್ತ ಬಲೆಗೆ ಶಿರಹಟ್ಟಿ ಬಿಜೆಪಿ ಶಾಸಕ: 5 ಲಕ್ಷ ಲಂಚ ಪಡೆಯುವಾಗ ಡಾ. ಚಂದ್ರು ಲಮಾಣಿ ರೆಡ್ ಹ್ಯಾಂಡ್ ಅರೆಸ್ಟ್

Prathinidhi News
Last updated: February 21, 2026 3:53 pm
Prathinidhi News
Published February 21, 2026
Share
SHARE

ಗದಗ, ಫೆಬ್ರವರಿ 21, 2026: ಗುತ್ತಿಗೆದಾರರೊಬ್ಬರಿಂದ ಲಕ್ಷಾಂತರ ರೂಪಾಯಿ ಕಮಿಷನ್ ಪಡೆಯುತ್ತಿದ್ದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಭಾನುವಾರ ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಶಾಸಕರ ಸ್ವಂತ ಒಡೆತನದ ಬಾಲಾಜಿ ಆಸ್ಪತ್ರೆಯ ಮೇಲೆ ಈ ದಾಳಿ ನಡೆದಿದ್ದು, ಲಂಚದ ಹಣದೊಂದಿಗೆ ಶಾಸಕರು ಸಿಕ್ಕಿಬಿದ್ದಿರುವುದು ಸಂಚಲನ ಮೂಡಿಸಿದೆ.

ವೃತ್ತಿಯಲ್ಲಿ ವೈದ್ಯರಾಗಿರುವ ಶಾಸಕ ಚಂದ್ರು ಲಮಾಣಿ ಅವರು ಕಾಮಗಾರಿ ಯೋಜನೆಯೊಂದಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರೊಬ್ಬರಿಂದ ಒಟ್ಟು 11 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಮುಂಗಡವಾಗಿ 5 ಲಕ್ಷ ರೂಪಾಯಿ ಕಮಿಷನ್ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಶಾಸಕರ ಜೊತೆಗೆ ಅವರ ಇಬ್ಬರು ಆಪ್ತ ಸಹಾಯಕರುಗಳಾದ (PA) ಮಂಜುನಾಥ್ ಹಾಗೂ ಗುರು ಎಂಬುವವರೂ ಕೂಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸದ್ಯ ಶಾಸಕ ಚಂದ್ರು ಲಮಾಣಿ ಸೇರಿದಂತೆ ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ. ಆಸ್ಪತ್ರೆಯ ಆವರಣದಲ್ಲಿಯೇ ಈ ಭ್ರಷ್ಟಾಚಾರದ ಜಾಲ ಬಯಲಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಲೋಕಾಯುಕ್ತ ಪೊಲೀಸರು ಮಹಜರು ಪ್ರಕ್ರಿಯೆ ನಡೆಸುತ್ತಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು: ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ಸ್ಮರಣಾರ್ಥ ಕ್ಯಾಲೆಂಡರ್ ಬಿಡುಗಡೆ ಹಾಗೂ ಅಭಿನಂದನಾ ಸಮಾರಂಭ

February 9, 2026
ಮುಖಪುಟಮೈಸೂರು ಗ್ರಾಮಾಂತರ

ಸರಗೂರು : ಹುಲಿ ದಾಳಿಗೆ ಮತ್ತೊಂದು ಬ*ಲಿ..! ವ್ಯಾಘ್ರನ ರೋಷಕ್ಕೆ ರೈತ ಸಾ*ವು

November 7, 2025
ಮುಖಪುಟಮೈಸೂರು ನಗರ

ಮೈಸೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಕರ್ಕಶ ಸೈಲೆನ್ಸರ್‌ಗಳ ಮೇಲೆ ಹರಿದ ರೋಡ್ ರೋಲರ್!

February 17, 2026
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ – ನಿಮ್ಹಾನ್ಸ್ ಮಾದರಿ ಆಸ್ಪತ್ರೆ ಜಮೀನು ಪರಿಶೀಲನೆ ವೇಳೆ ದೌರ್ಜನ್ಯ

January 17, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?