PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಂಜನಗೂಡು: ಕೆಸರುಗದ್ದೆಗೆ ಇಳಿದು ಭತ್ತದ ಸಸಿ ನೆಟ್ಟ ಮೈಸೂರು ಮಹಾರಾಜ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ನಂಜನಗೂಡು > ನಂಜನಗೂಡು: ಕೆಸರುಗದ್ದೆಗೆ ಇಳಿದು ಭತ್ತದ ಸಸಿ ನೆಟ್ಟ ಮೈಸೂರು ಮಹಾರಾಜ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳು
ನಂಜನಗೂಡುಮುಖಪುಟ

ನಂಜನಗೂಡು: ಕೆಸರುಗದ್ದೆಗೆ ಇಳಿದು ಭತ್ತದ ಸಸಿ ನೆಟ್ಟ ಮೈಸೂರು ಮಹಾರಾಜ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳು

Prathinidhi News
Last updated: March 2, 2026 11:43 am
Prathinidhi News
Published March 2, 2026
Share
SHARE

ನಂಜನಗೂಡು, ಫೆಬ್ರವರಿ 2, 2026: ಪಟ್ಟಣ ಪ್ರದೇಶದ ವಿದ್ಯಾರ್ಥಿಗಳಿಗೆ ಕೃಷಿ ಚಟುವಟಿಕೆಗಳ ಬಗ್ಗೆ ಪ್ರಾಯೋಗಿಕ ಜ್ಞಾನ ಮೂಡಿಸುವ ಉದ್ದೇಶದಿಂದ ಮೈಸೂರಿನ ಮಹಾರಾಜ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಶಿಬಿರಾರ್ಥಿಗಳು ಕೆಸರುಗದ್ದೆಗೆ ಇಳಿದು ಭತ್ತದ ನಾಟಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ತಾಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಎನ್.ಎಸ್.ಎಸ್ ವಿಶೇಷ ವಾರ್ಷಿಕ ಶಿಬಿರದ ಅಂಗವಾಗಿ ಈ ವಿಶಿಷ್ಟ ಕಾರ್ಯಕ್ರಮ ನಡೆಯಿತು. ಶಿಬಿರಾಧಿಕಾರಿಗಳಾದ ಡಾ. ಪಿ.ಎಸ್. ಮಧುಸೂದನ್ ಮತ್ತು ಡಾ. ಎಸ್. ಕೃಷ್ಣಪ್ಪ ಅವರ ನೇತೃತ್ವದಲ್ಲಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅತ್ಯಂತ ಉತ್ಸಾಹದಿಂದ ಕೃಷಿ ಕಾಯಕದಲ್ಲಿ ಪಾಲ್ಗೊಂಡರು.

ನಗರ ಜೀವನದ ಹಿನ್ನೆಲೆ ಹೊಂದಿರುವ ವಿದ್ಯಾರ್ಥಿಗಳು ರೈತರಂತೆಯೇ ತಲೆಗೆ ಟವಲ್ ಪೇಟ ಸುತ್ತಿಕೊಂಡು, ಸಂತಸದಿಂದಲೇ ಕೆಸರುಗದ್ದೆಗೆ ಇಳಿದು ಭತ್ತದ ಪೈರುಗಳನ್ನು ನಾಟಿ ಮಾಡಿದರು. ಕೃಷಿಯ ಕಷ್ಟ-ಸುಖಗಳನ್ನು ಅರಿಯುವ ವಿದ್ಯಾರ್ಥಿಗಳ ಈ ಪ್ರಯತ್ನಕ್ಕೆ ಬೊಕ್ಕಹಳ್ಳಿ ಗ್ರಾಮಸ್ಥರು ಕೂಡ ಸಾಥ್ ನೀಡಿದರು. ಯುವಜನತೆಯಲ್ಲಿ ಕೃಷಿ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ತೋರಿದ ಈ ಆಸಕ್ತಿಗೆ ಗ್ರಾಮಸ್ಥರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಅಕ್ರಮವಾಗಿ ದಾಸ್ತಾನು ಮಾಡಿದ್ದ 1,256 ಚೀಲ ಯೂರಿಯಾ ವಶ

February 18, 2026
ಮುಖಪುಟಮೈಸೂರು ನಗರರಾಜಕೀಯ

ಮೈಸೂರಿನಲ್ಲಿ ತಂಬಾಕು ಹರಾಜು ಪ್ರಕ್ರಿಯೆ ಕುರಿತು ಮಹತ್ವದ ಸಭೆ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭಾಗಿ.

March 2, 2026
ಮುಖಪುಟಮೈಸೂರು ಗ್ರಾಮಾಂತರ

ಮೈಸೂರು ಜಿಲ್ಲೆಯಲ್ಲಿ ಮುಂದುವರೆದ ಕಳ್ಳರ ಹಾವಳಿ ; ಪ್ರಾವಿಷನ್ ಸ್ಟೋರ್‌ನಲ್ಲಿ ತಡರಾತ್ರಿ ಕಳ್ಳತನಕ್ಕೆ ಯತ್ನ !

January 13, 2026
ಮುಖಪುಟಮೈಸೂರು ನಗರರಾಜಕೀಯ

ನಾನೇ ಪೂರ್ಣಾವಧಿ ಸಿಎಂ; ಹೈಕಮಾಂಡ್ ಮೇಲೆ ನನಗಿದೆ ಅಚಲ ವಿಶ್ವಾಸ -ಸಿಎಂ ಸಿದ್ದರಾಮಯ್ಯ

January 6, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?