ತುಮಕೂರು, ಮಾರ್ಚ್ 2, 2026 : ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಈಗಾಗಲೇ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು.
ಕೊರಟಗೆರೆ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ತೀವ್ರ ಕಾಳಜಿ ವಹಿಸಲಾಗಿದೆ. ಶೀಘ್ರವಾಗಿ ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಚಿವರು ಭರವಸೆ ನೀಡಿದರು.
