ಮೈಸೂರು, ಮಾರ್ಚ್ 3, 2026 : ಇಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರಿನ ಪ್ರಸಿದ್ಧ ಚಾಮುಂಡೇಶ್ವರಿ ದೇವಸ್ಥಾನದ ದರ್ಶನದ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಗ್ರಹಣದ ಪ್ರಯುಕ್ತ ಇಂದು ಮಧ್ಯಾಹ್ನ 2 ಗಂಟೆಗೆ ದೇವಸ್ಥಾನದ ಬಾಗಿಲನ್ನು ಮುಚ್ಚಲಾಗುತ್ತಿದ್ದು, ರಾತ್ರಿ 8:30ರ ವರೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಗ್ರಹಣದ ಸ್ಪರ್ಶ ಕಾಲ, ಮಧ್ಯ ಕಾಲ ಹಾಗೂ ಮೋಕ್ಷ ಕಾಲದ ಅವಧಿಯಲ್ಲಿ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿವೆ. ಈ ವಿಶೇಷ ಪೂಜೆಗಳ ಸಂದರ್ಭದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ. ಇಂದು ರಾತ್ರಿ ಪೂಜೆ ಮುಗಿದ ಬಳಿಕ, ನಾಳೆ ಬೆಳಿಗ್ಗೆ 7:30ರಿಂದ ಎಂದಿನಂತೆ ಭಕ್ತಾದಿಗಳು ದೇವಿಯ ದರ್ಶನ ಪಡೆಯಬಹುದಾಗಿದೆ ಎಂದು ದೇವಸ್ಥಾನದ ಮಂಡಳಿ ತಿಳಿಸಿದೆ.
ಇನ್ನು ದಕ್ಷಿಣಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಗ್ರಹಣದ ಅವಧಿಯಲ್ಲಿ ದೇವರಿಗೆ ವಿಶೇಷ ಪೂಜೆ ಹಾಗೂ ನೈವೇದ್ಯಗಳನ್ನು ಅರ್ಪಿಸಲಾಗುತ್ತದೆ ಎಂದು ತಿಳಿದುಬಂದಿದೆ.
