PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ
ಕ್ರೈಂ ಸುದ್ದಿಗಳುಮಂಡ್ಯಮುಖಪುಟ

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

Prathinidhi News
Last updated: November 7, 2026 6:29 pm
Prathinidhi News
Published November 7, 2026
Share
SHARE

ಮಂಡ್ಯ, ನವೆಂಬರ್​ 06: ರೈಲಿಗೆ ತಲೆಕೊಟ್ಟು ವಿವಾಹಿತೆ ಜೊತೆ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಟ್ರಾಕ್‌ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಸಹನಾ(25) ಮತ್ತು ರಾಹುಲ್(23) ಆತ್ಮಹತ್ಯೆಗೆ ಶರಣಾದವರು. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸದ್ಯ ಮೃತದೇಹಗಳನ್ನ ಮಂಡ್ಯ ಮಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ. ರೈಲ್ವೆ ಪೊಲೀಸರು‌ ಮೃತರ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.

8 ವರ್ಷದ ಹಿಂದೆ ಪ್ರೀತಿಸಿ ವೀರೇಶ್​ನನ್ನು ಸಹನಾ ವಿವಾಹವಾಗಿದ್ದಳು. ದಂಪತಿಗೆ 6 ವರ್ಷದ ಹೆಣ್ಣು ಮತ್ತು 2 ವರ್ಷದ ಗಂಡು ಮಗುವಿದೆ. ವೀರೇಶ್ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ. ಕಳೆದ 2-3 ವರ್ಷಗಳಿಂದ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ವಾಸವಾಗಿದ್ದರು. ದಂಪತಿ ಇದ್ದ ಕಟ್ಟಡದಲ್ಲೇ ರಾಹುಲ್​​ ಕೂಡ ವಾಸವಿದ್ದ.ಮದುವೆ ಆಗಿ ಮಕ್ಕಳಿದ್ದರು ಕೂಡ ಇತ್ತೀಚೆಗೆ ರಾಹುಲ್ ಜೊತೆ ಸಹನಾ ಆತ್ಮೀಯತೆ ಬೆಳೆಸಿಕೊಂಡಿದ್ದಳು. ಪರಿಚಯ ಪ್ರೀತಿಗೆ ತಿರುಗಿ ಇಬ್ಬರ ನಡುವೆ ಅಕ್ರಮ ಸಂಬಂಧವಿತ್ತು. ಈ ವಿಚಾರ ತಿಳಿದ ಪತಿ ವೀರೇಶ್, ಸಹನಾಳೊಂದಿಗೆ ಜಗಳ ಮಾಡಿದ್ದ. ಮದನಾಯಕನಹಳ್ಳಿ ಬಿಟ್ಟು ಬೇರೆ ಕಡೆ ಮನೆ ಮಾಡಿದ್ದ. ಹಲವು ಬಾರಿ ಹಿರಿಯರ ಸಮ್ಮುಖದಲ್ಲಿ ರಾಜೀ ಪಂಚಾಯಿತಿ ಆಗಿತ್ತು. ರಾಹುಲ್ ಸಹವಾಸ ಬಿಟ್ಟುಬಿಡುವಂತೆ ಸಹನಾಗೆ ಬುದ್ಧಿ ಹೇಳಿದ್ದರು. ಆದರೆ ಯಾರ ಮಾತನ್ನೂ ಕೇಳದೆ ಹಳೇ ಚಾಳಿ ಮುಂದುವರಿಸಿದ್ದಳು.

ಇನ್ನು ಸೋಮವಾರ ಇದೇ ವಿಚಾರಕ್ಕೆ ಸಹನಾ ಮತ್ತು ವೀರೇಶ್ ನಡುವೆ​ ಜಗಳ‌ವಾಗಿದೆ. ಈ ವೇಳೆ ರಾಹುಲ್ ಜೊತೆಯಲ್ಲೇ ಬಾಳುವುದಾಗಿ ಹೇಳಿದ್ದಳು. ಈ ವೇಳೆ ನಿಮ್ಮಿಬ್ಬರನ್ನು ಬಾಳಲು ಬಿಡಲ್ಲ ಎಂದು ವೀರೇಶ್ ಗದರಿದ್ದಾನೆ. ಗಂಡನ ಮನೆಯಿಂದ ಹೊರಟ ಸಹನಾ ಮಂಡ್ಯದ ಗುನ್ನಾಯಕನಹಳ್ಳಿಯಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದಾಳೆ. ಗುರುವಾರ ಗುನ್ನಾಯಕನಹಳ್ಳಿ ಬಳಿ ಸಹನಾ ಪಿಕ್ ಮಾಡಿದ್ದ ರಾಹುಲ್, ವಿರೇಶ್ ವಿರುದ್ಧ ದೂರು ನೀಡಲು ತೀರ್ಮಾನಿಸಿದ್ದರು. ಆದರೆ ವೀರೇಶ್ ನಮ್ಮನ್ನು ಬಾಳಲು ಬಿಡಲ್ಲ ಎಂದು ಮನನೊಂದು ಬೆಳಗ್ಗೆ ರೈಲಿಗೆ ತಲೆಕೊಟ್ಟು ಸಹನಾ ಮತ್ತು ರಾಹುಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

TAGGED:#crime#mandya
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ದೇವರಾಜ ಅರಸು ರಸ್ತೆಯಲ್ಲಿ ರಾಷ್ಟ್ರಕವಿ ಕುವೆಂಪು 121ನೇ ಜನ್ಮ ದಿನಾಚರಣೆ

December 29, 2025
ಮುಖಪುಟರಾಜಕೀಯ

ಪ್ರಮೋದಾದೇವಿ ಆರೋಪಕ್ಕೆ ಸಿಎಂ ಡಿಕೆ ಶಿವಕುಮಾರ್​​ ಸ್ಪಷ್ಟನೆ

October 27, 2026
ಮುಖಪುಟಮೈಸೂರು ನಗರ

ಇಸ್ಲಾಮಿಕ್ ಟ್ರಸ್ಟ್ ಗಳ ತನಿಖೆಗೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ

July 22, 2026
ಮಂಡ್ಯಮುಖಪುಟರಾಜಕೀಯ

ಡಿ.ಕೆ. ಶಿವಕುಮಾರ್ ಸಿಎಂ ಆಗಲೆಂದು ಮಳವಳ್ಳಿಯ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ!

November 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?