PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಿದ್ದರಾಮಯ್ಯ ನಿವಾಸಕ್ಕೆ ಮಹದೇವಪ್ಪ ದಿಢೀರ್ ಭೇಟಿ: ಮುನಿಸು ಮರೆತು ಮತ್ತೆ ಒಂದಾದ ದೋಸ್ತಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಸಿದ್ದರಾಮಯ್ಯ ನಿವಾಸಕ್ಕೆ ಮಹದೇವಪ್ಪ ದಿಢೀರ್ ಭೇಟಿ: ಮುನಿಸು ಮರೆತು ಮತ್ತೆ ಒಂದಾದ ದೋಸ್ತಿ
ಜಿಲ್ಲೆಮುಖಪುಟಮೈಸೂರು ನಗರ

ಸಿದ್ದರಾಮಯ್ಯ ನಿವಾಸಕ್ಕೆ ಮಹದೇವಪ್ಪ ದಿಢೀರ್ ಭೇಟಿ: ಮುನಿಸು ಮರೆತು ಮತ್ತೆ ಒಂದಾದ ದೋಸ್ತಿ

Prathinidhi News
Last updated: November 26, 2026 6:53 pm
Prathinidhi News
Published November 26, 2026
Share
SHARE

ಮೈಸೂರು, ನವೆಂಬರ್ 25: ನಾನೊಂದು ತೀರ ನೀನೊಂದು ಎನ್ನುವಂತಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಹೆಚ್​.ಸಿ.ಮಹದೇವಪ್ಪ ಕೊನೆಗೂ ಒಂದಾಗಿದ್ದಾರೆ. ಹೌದು…ಮಹದೇವಪ್ಪನವರು ಮುನಿಸು ಮರೆತು ಇಂದು (ನವೆಂಬರ್ 25) ಮೈಸೂರಿನ ಕುವೆಂಪುನಗರದಲ್ಲಿರುವ ಹೊಸ ನಿವಾಸಕ್ಕೆ ಭೇಟಿ ನೀಡಿ ಸಿದ್ದರಾಮಯ್ಯನವರ ಜೊತೆ ಮಾತುಕತೆ ಮಾಡಿದರು. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಈ ಇಬ್ಬರು ನಾಯಕರು ಮುಖಾಮುಖಿ ಭೇಟಿಯಾಗಿರುವುದು ಇದೇ ಮೊದಲು. ಇದರೊಂದಿಗೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮ್ಮದ್ ಸೇರಿಕೊಂಡು ಮಹದೇವಪ್ಪನವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮುನಿಸು ಮರೆತು ಒಂದಾದ ದೋಸ್ತಿ

ನಿವಾಸಕ್ಕೆ ಆಗಮಿಸಿದ ಹೆಚ್​.ಸಿ.ಮಹದೇವಪ್ಪನವರಿಗೆ ಸಚಿವ ಯತೀಂದ್ರ ಹೂಗುಚ್ಛ ನೀಡಿ ಸ್ವಾಗತಿಸಿದ್ದು, ಬಳಿಕ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಹದೇವಪ್ಪ ಅವರ ಈ ದಿಢೀರ್ ಭೇಟಿ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಾಲ್ಕು ತಿಂಗಳ ಬಳಿಕ ಇಬ್ಬರೂ ನಾಯಕರು ಮುಖಾಮುಖಿಯಾಗಿ ಚರ್ಚಿಸುತ್ತಿರುವುದು, ಮತ್ತೆ ಅಹಿಂದ ಗ್ಯಾಂಗ್ ಒಂದಾಯ್ತಾ ಎಂಬ ಪ್ರಶ್ನೆ ಉದ್ಭವಿಸಿದೆ. ನಾಳೆ (ನವೆಂಬರ್ 26 ಮೈಸೂರಿನಲ್ಲಿ ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮವು ಅಹಿಂದ ಮತ್ತು ದಲಿತ-ಶೋಷಿತ ವರ್ಗಗಳ ರಾಜಕಾರಣಕ್ಕೆ ಅತ್ಯಂತ ಮಹತ್ವದ್ದಾಗಿದೆ. ಈ ಕಾರ್ಯಕ್ರಮದ ಮುನ್ನಾದಿನವೇ ಇಬ್ಬರೂ ಹಿರಿಯ ನಾಯಕರು ಒಂದಾಗಿರುವುದು, ಮುಂದಿನ ದಿನಗಳಲ್ಲಿ ಅಹಿಂದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮುನ್ಸೂಚನೆ ನೀಡಿದೆ.

ಮಹದೇವಪ್ಪನವರು ಸಿದ್ದರಾಂಯ್ಯನವರಿಂದ ಅಂತರ ಕಾಯ್ದುಕೊಂಡು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ ಆಯೋಜನೆ ಮಾಡಿದ್ದರು. ಸಿದ್ದರಾಮಯ್ಯನವರಿಗೆ ಆಹ್ವಾನ ನೀಡದೇ ಮಹದೇವಪ್ಪನವರ ಮೈಸೂರಿನಲ್ಲಿ ಸಭೆಗಳ ಮೇಲೆ ಸಭೆ ಮಾಡಿದ್ದರು. ಹೀಗಾಗಿ ಸಿದ್ದರಾಮಯ್ಯನವರಿಗೆ ಸೆಡ್ಡು ಹೊಡೆಯಲೆಂದೇ ಮಹದೇವಪ್ಪನವರು ಸಂವಿಧಾನ ದಿನಾಚರಣೆ ಆಯೊಜಿಸಿದ್ದಾರೆ ಎನ್ನುವ ಮಾತುಗಳು ಸಹ ಕೇಳಿಬಂದಿದ್ದವು. ಆದ್ರೆ, ಇದೀಗ ಕಾರ್ಯಕ್ರಮಕ್ಕೆ ಒಂದು ದಿನದ ಮುನ್ನವೇ ಇಬ್ಬರು ಸ್ನೇಹಿತರನ್ನು ಸಂವಿಧಾನ ದಿನಾಚರಣೆ ಒಂದಾಗಿಸಿದ್ದು, ನಾಳೆಯ ಕಾರ್ಯಕ್ರಮದಲ್ಲಿ ಇಬ್ಬರೂ ಭಾಗಿಯಾಗಲಿದ್ದಾರೆ. ಅಲ್ಲದೇ ಕಾರ್ಯಕ್ರಮದ ಮೂಲಕ ವಿರೋಧಿಗಳಿಗೆ ಸಂದೇಶ ರವಾನಿಸುವ ಸಾಧ್ಯತೆಗಳಿವೆ

TAGGED:#mysuru#siddaramaiah
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮುಖಪುಟಮೈಸೂರು ನಗರ

ಈಗಲೂ ನಮಗೆ ಸಿದ್ದರಾಮಯ್ಯನವರೇ ಆರ್ಮಿ ಕ್ಯಾಪ್ಟನ್​’

September 25, 2026
ಮುಖಪುಟಮೈಸೂರು ನಗರ

ಹೀಲಿಯಂ ಸಿಲಿಂಡರ್‌ ಸ್ಪೋಟ ಪ್ರಕರಣ : ಮೃತರ ಸಂಖ್ಯೆ 3ಕ್ಕೆ ಏರಿಕೆ

December 27, 2025
ಮುಖಪುಟಮೈಸೂರು ನಗರರಾಜಕೀಯ

ಸಿಎಂ ತವರು ಮೈಸೂರು ಜಿಲ್ಲೆಯಲ್ಲಿ ಫ್ಲೆಕ್ಸ್ ಕಿರಿಕ್: ಎಚ್‌ಡಿಕೆ ಹಾಗೂ ಸಾ.ರಾ. ಮಹೇಶ್ ಭಾವಚಿತ್ರಕ್ಕೆ ಅವಮಾನ

January 17, 2026
ಮುಖಪುಟ

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

December 20, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?