PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ವಕ್ತಾರ ಎಂ ಜಿ ಮಹೇಶ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ವಕ್ತಾರ ಎಂ ಜಿ ಮಹೇಶ್
ಮುಖಪುಟಮೈಸೂರು ನಗರರಾಜಕೀಯ

ಮೈಸೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ವಕ್ತಾರ ಎಂ ಜಿ ಮಹೇಶ್

Prathinidhi News
Last updated: April 8, 2026 4:13 pm
Prathinidhi News
Published April 8, 2026
Share
SHARE

ಮೈಸೂರು, ಏಪ್ರಿಲ್‌ 8, 2026 : ಬಿಜೆಪಿ ಮತ್ತು ಆರೆಸ್ಸೆಸ್‌ನವರನ್ನು ವಿಷ ಸರ್ಪಗಳಿಗೆ ಹೋಲಿಸಿ, ಅವರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಕರೆ ನೀಡಿದ್ದಾರೆ ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ವಕ್ತಾರ ಎಂ ಜಿ ಮಹೇಶ್ ಮೈಸೂರಿನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷ ಮುಸ್ಲಿಮರನ್ನು ಕೇವಲ ಮತಬ್ಯಾಂಕ್ ಆಗಿ ಮಾತ್ರ ಪರಿಗಣಿಸಿದೆ ಎಂಬ ಸತ್ಯ ಇದೀಗ ಮುಸ್ಲಿಮರಿಗೂ ಮನವರಿಕೆಯಾಗಿದ್ದು, ಅವರು ಕಾಂಗ್ರೆಸ್‌ನಿಂದ ದೂರ ಸರಿಯುತ್ತಿದ್ದಾರೆ. ಈ ಬೆಳವಣಿಗೆಯಿಂದ ಕಾಂಗ್ರೆಸ್ ನಾಯಕರು ವಿಚಲಿತರಾಗಿ ದ್ವೇಷ ಹರಡುವ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮಹೇಶ್ ಟೀಕಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಇದೀಗ ಹತಾಶರಾಗಿದ್ದು, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಂತಹ ಕೀಳು ಮಟ್ಟದ ಹೇಳಿಕೆಗಳಿಗೆ ಇಳಿದಿದ್ದಾರೆ ಎಂದು ಆರೋಪಿಸಿದ ಅವರು, ಖರ್ಗೆ ಅವರು ಕಲಬುರ್ಗಿ ಜಿಲ್ಲೆಯಲ್ಲಿ ದಲಿತ ಸಮುದಾಯದ ಬೇರೆ ಯಾವುದೇ ನಾಯಕ ಬೆಳೆಯದಂತೆ ಅಡ್ಡಿಪಡಿಸಿದ್ದಾರೆ ಎಂದು ದೂರಿದರು. ಕಳೆದ ಐದು ದಶಕಗಳಿಂದ ಸಕ್ರಿಯ ರಾಜಕಾರಣದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಯಾವುದೇ ಮಹತ್ವದ ಕೊಡುಗೆ ನೀಡಿಲ್ಲ ಎಂದು ಟೀಕಿಸಿದ ಅವರು, ದಲಿತ ಸಮುದಾಯದ ಆಸ್ತಿಯನ್ನು ಖರ್ಗೆ ಕುಟುಂಬ ಕಬಳಿಸಿದೆ ಎಂದು ಗಂಭೀರ ಆರೋಪ ಮಾಡಿದರು. ಕಲ್ಯಾಣ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗಬೇಕಾದರೆ, ಮೊದಲು ಕಲಬುರ್ಗಿ ಜನತೆ ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ರಾಜಕಾರಣದಿಂದ ಮುಕ್ತಗೊಳಿಸಬೇಕು ಎಂದು ಎಂ ಜಿ ಮಹೇಶ್ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ಗುಜರಾತಿಗಳ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಟೀಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಹೇಶ್, ಖರ್ಗೆಯವರು ಗುಜರಾತಿಗಳನ್ನು ಅನಕ್ಷರಸ್ಥರು ಮತ್ತು ಮೂರ್ಖರು ಎಂದು ಕರೆದಿರುವುದು ಖಂಡನೀಯ ಎಂದಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸರದಾರ್ ವಲ್ಲಭಭಾಯಿ ಪಟೇಲ್ ಅವರನ್ನೂ ಒಳಗೊಂಡಂತೆ ಗುಜರಾತಿಗಳಿಗೆ ಈ ಹೇಳಿಕೆಯ ಮೂಲಕ ಅಪಮಾನ ಮಾಡಲಾಗಿದೆ ಎಂದು ಅವರು ಟೀಕಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಹೆಚ್ಚುತ್ತಿರುವ ಜನಪ್ರಿಯತೆಯನ್ನು ಸಹಿಸಿಕೊಳ್ಳಲಾಗದ ಕಾರಣಕ್ಕಾಗಿಯೇ ಖರ್ಗೆಯವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

- ಜಾಹೀರಾತು -

ಮೈಸೂರಿನಲ್ಲಿ ಆಡಳಿತ ನಡೆಸುತ್ತಿರುವ ಅಧಿಕಾರಿಗಳ ದರ್ಬಾರ್ ಕುರಿತು ಸಂಸದ ಯದುವೀರ್ ಒಡೆಯರ್ ನೀಡಿರುವ ಹೇಳಿಕೆಯನ್ನು ಎಂ. ಜಿ. ಮಹೇಶ್ ಸಂಪೂರ್ಣವಾಗಿ ಬೆಂಬಲಿಸಿದ್ದಾರೆ. ಭಾರೀ ಮೊತ್ತದ ಹಣ ನೀಡಿ ವರ್ಗಾವಣೆ ಮಾಡಿಸಿಕೊಂಡು ಮೈಸೂರಿಗೆ ಬಂದಿರುವ ಅಧಿಕಾರಿಗಳು, ಸಾರ್ವಜನಿಕರ ಅಥವಾ ಜನಪ್ರತಿನಿಧಿಗಳ ಮಾತಿಗೆ ಕಿಮ್ಮತ್ತು ನೀಡುತ್ತಿಲ್ಲ ಎಂದು ಅವರು ದೂರಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಅವರ ಮೇಲೆ ವರ್ಗಾವಣೆ ದಂಧೆಯಲ್ಲಿ ಭಾಗಿಯಾದ ಆರೋಪವನ್ನು ಮಾಡುವ ಮೂಲಕ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಅವರು ಗಂಭೀರವಾಗಿ ಟೀಕಿಸಿದ್ದಾರೆ.

ಚಾಮುಂಡಿ ಬೆಟ್ಟದ ಅಭಿವೃದ್ಧಿಯ ವಿಷಯದಲ್ಲೂ ವ್ಯಾಪಕ ಅಕ್ರಮಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರವು ಅಭಿವೃದ್ಧಿಗಾಗಿ ಬಿಡುಗಡೆ ಮಾಡಿರುವ ಅನುದಾನವನ್ನು ಬಳಸಿಕೊಳ್ಳುವಲ್ಲಿ ಪ್ರಾಧಿಕಾರದ ಅಧಿಕಾರಿಗಳು ವಿಫಲರಾಗಿದ್ದಾರೆ ಮತ್ತು ಚಾಮುಂಡಿ ಬೆಟ್ಟದಲ್ಲೂ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ ಎಂದು ಹೇಳಿದ್ದಾರೆ. ದೇವಸ್ಥಾನದ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ದೇವಸ್ಥಾನದ ಅಭಿವೃದ್ಧಿಗೆ ಬಳಸುವ ಬದಲು ಬೇರೆ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಮತ್ತು ಈ ಹಣದ ಬಗ್ಗೆ ಪಾರದರ್ಶಕ ಮಾಹಿತಿ ಲಭ್ಯವಾಗುತ್ತಿಲ್ಲ ಎಂದು ಅವರು ದೂರಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು: ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ಸ್ಮರಣಾರ್ಥ ಕ್ಯಾಲೆಂಡರ್ ಬಿಡುಗಡೆ ಹಾಗೂ ಅಭಿನಂದನಾ ಸಮಾರಂಭ

February 9, 2026
ಮುಖಪುಟಮೈಸೂರು ನಗರ

ಮೈಸೂರು ವೀಳ್ಯದೆಲೆಗೆ ಜಾಗತಿಕ ಮನ್ನಣೆ: ನಗರೀಕರಣದ ಭರಾಟೆಯಲ್ಲಿ ಕಿರಿದಾಗುತ್ತಿದೆ ಪಾರಂಪರಿಕ ಎಲೆತೋಟ

February 24, 2026
ಬೆಂಗಳೂರುಮುಖಪುಟ

ಅಲರ್ಟ್..!‌ ರಾಜ್ಯದಲ್ಲಿ ಮುಂದಿನ 2 ದಿನ ಚಳಿ ಜತೆ ಮಳೆ! ಹವಾಮಾನ ಇಲಾಖೆ ಮುನ್ಸೂಚನೆ

November 12, 2025
ಮುಖಪುಟಮೈಸೂರು ನಗರ

ಅರಣ್ಯದಂಚಿನಲ್ಲಿ ಹುಲಿ ದಾಳಿಗೆ ಕಾರಣ ಏನು..? ಮಾನವ ವನ್ಯಜೀವಿ ಸಂಘರ್ಷಕ್ಕೆ ಪರಿಹಾರ ಇಲ್ವಾ..?

November 15, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?