ಬೀದರ್, ಏಪ್ರಿಲ್ 11, 2026 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು.

ಬೀದರ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಅದ್ಧೂರಿ ಸಮ್ಮೇಳನವನ್ನು ಉದ್ಘಾಟಿಸಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ಹಾಗೂ ಸಾಮಾಜಿಕ ಜವಾಬ್ದಾರಿಯ ಕುರಿತು ಮಾತನಾಡಿದರು.
ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಹಾರಕುಡ ಹಿರೇಮಠ ಸಂಸ್ಥಾನದ ಡಾ. ಚನ್ನವೀರ ಶಿವಾಚಾರ್ಯರು ಹಾಗೂ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಡಾ. ಬಸವಲಿಂಗ ಪಟ್ಟದೇವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ವೇದಿಕೆಯ ಮೇಲೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಸಚಿವರುಗಳಾದ ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಉಪಸ್ಥಿತರಿದ್ದರು.
ಸಮ್ಮೇಳನದ ಪ್ರಧಾನ ಭಾಷಣಕಾರರಾಗಿ ಹಿರಿಯ ಸಂಪಾದಕ ವಿಶ್ವೇಶ್ವರ ಭಟ್ ಅವರು ಭಾಗವಹಿಸಿ ಪತ್ರಿಕೋದ್ಯಮದ ಸವಾಲುಗಳ ಬಗ್ಗೆ ಬೆಳಕು ಚೆಲ್ಲಿದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಆನಂದ್ ದೇವಪ್ಪ, ಸಂಸದ ಸಾಗರ್ ಖಂಡ್ರೆ ಸೇರಿದಂತೆ ಹಲವು ಗಣ್ಯರು ಹಾಗೂ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ ನೂರಾರು ಪತ್ರಕರ್ತರು ಈ ಸಮಾವೇಶಕ್ಕೆ ಸಾಕ್ಷಿಯಾದರು.
