PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಸರ್ಕಾರಿ ಆಸ್ತಿ ಕಬಳಿಕೆ ಆರೋಪ – ರಮ್ಮನಹಳ್ಳಿ ಪಟ್ಟಣ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಪ್ರಾದೇಶಿಕ ಆಯುಕ್ತರಿಗೆ ದೂರು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಸರ್ಕಾರಿ ಆಸ್ತಿ ಕಬಳಿಕೆ ಆರೋಪ – ರಮ್ಮನಹಳ್ಳಿ ಪಟ್ಟಣ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಪ್ರಾದೇಶಿಕ ಆಯುಕ್ತರಿಗೆ ದೂರು
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಸರ್ಕಾರಿ ಆಸ್ತಿ ಕಬಳಿಕೆ ಆರೋಪ – ರಮ್ಮನಹಳ್ಳಿ ಪಟ್ಟಣ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಪ್ರಾದೇಶಿಕ ಆಯುಕ್ತರಿಗೆ ದೂರು

Prathinidhi News
Last updated: April 18, 2026 4:49 pm
Prathinidhi News
Published April 18, 2026
Share
SHARE

ಮೈಸೂರು, ಏಪ್ರಿಲ್‌ 18, 2026: ಸರ್ಕಾರಿ ಅಧಿಕಾರಿಗಳೇ ಸೇರಿಕೊಂಡು ಸರ್ಕಾರದ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊಡುವ ಮೂಲಕ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಕಬಳಿಸಿರುವ ಗಂಭೀರ ಆರೋಪ ಮೈಸೂರು ತಾಲ್ಲೂಕಿನ ರಮ್ಮನಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ರಮ್ಮನಹಳ್ಳಿ ಪಟ್ಟಣ ಪಂಚಾಯ್ತಿಯ ಮುಖ್ಯಾಧಿಕಾರಿ ಮಹೇಶ್, ಕಂದಾಯ ನಿರೀಕ್ಷಕ (RI) ಮಂಜುನಾಥ್ ಹಾಗೂ ಗ್ರಾಮ ಆಡಳಿತಾಧಿಕಾರಿ (VA) ಅಜೀಂ ಖಾನ್ ಅವರುಗಳು ಶಾಮೀಲಾಗಿ ಈ ಗೋಲ್ಮಾಲ್ ನಡೆಸಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಹಿ ಕೃಷ್ಣ ಅವರು ಪ್ರಾದೇಶಿಕ ಆಯುಕ್ತರಿಗೆ ದೂರು ನೀಡುವ ಮೂಲಕ ಈ ಹಗರಣವನ್ನು ಬಯಲಿಗೆಳೆದಿದ್ದಾರೆ.

ಘಟನೆಯ ವಿವರದಂತೆ, 2003-2005ರ ಅವಧಿಯಲ್ಲಿ ಬಡವರಿಗೆ ನಿವೇಶನ ನೀಡುವ ಉದ್ದೇಶದಿಂದ ಆಶ್ರಯ ಯೋಜನೆಯಡಿ ರಮ್ಮನಹಳ್ಳಿ ಪಟ್ಟಣ ಪಂಚಾಯ್ತಿಯ ಸರ್ವೇ ನಂಬರ್ 259/3 ಮತ್ತು 252/2ರ ಸುಮಾರು 30 ಗುಂಟೆ ಭೂಮಿಯನ್ನು ಮಹಾನಗರ ಪಾಲಿಕೆ ವಶಕ್ಕೆ ಪಡೆದುಕೊಂಡಿತ್ತು. ಮೂಲತಃ ಕೆಂಚಯ್ಯ ಎಂಬುವವರ ಕುಟುಂಬಕ್ಕೆ ಸೇರಿದ್ದ ಈ ಜಮೀನನ್ನು ಸರ್ಕಾರ ವಶಪಡಿಸಿಕೊಂಡು ಆಶ್ರಯ ಯೋಜನೆಗೆ ಮೀಸಲಿಟ್ಟಿತ್ತು. ಈ ಮಧ್ಯೆ, ಕೆಂಚಯ್ಯನ ಮಗಳು ಸುಂದ್ರಮ್ಮ ಜಮೀನಿನ ಭಾಗಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯವು ಅವರಿಗೆ 10 ಗುಂಟೆ ಜಮೀನು ನೀಡುವಂತೆ ಆದೇಶಿಸಿತ್ತು. ಆದರೆ ಉಳಿದ 20 ಗುಂಟೆ ಜಮೀನು ದಾಖಲೆಗಳಲ್ಲಿ ಕೆಂಚಯ್ಯ ಅವರ ಹೆಸರಿನಲ್ಲೇ ಉಳಿದಿದ್ದನ್ನು ಬಂಡವಾಳ ಮಾಡಿಕೊಂಡ ಅಧಿಕಾರಿಗಳು, ಆಶ್ರಯ ಯೋಜನೆಗೆ ಭೂಮಿ ಹಸ್ತಾಂತರವಾಗಿರುವ ಅಸಲಿ ದಾಖಲೆಗಳನ್ನು ಮುಚ್ಚಿಟ್ಟು ಕೆಂಚಯ್ಯ ಅವರ ಮಕ್ಕಳ ಹೆಸರಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ.

ವಿಶೇಷವೆಂದರೆ, ಸದರಿ ಜಮೀನಿನ ಮೇಲೆ ಯಾವುದೇ ವ್ಯವಹಾರ (Transaction) ನಡೆಸದಂತೆ ಮಹಾನಗರ ಪಾಲಿಕೆಯು ನೋಟಿಸ್ ನೀಡಿದ್ದರೂ ಸಹ, ಅದಕ್ಕೆ ಕ್ಯಾರೆ ಎನ್ನದ ಅಧಿಕಾರಿಗಳು ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ. ತದನಂತರ ಈ ಭೂಮಿಯನ್ನು ಸೈಯದ್ ಫೈಸಲ್ ಎಂಬ ಖಾಸಗಿ ವ್ಯಕ್ತಿಗೆ ಮಾರಾಟ ಮಾಡಲಾಗಿದ್ದು, ಆತ ಕೇವಲ ಕೆಲವೇ ದಿನಗಳಲ್ಲಿ ಫಾಜೀಲ್ ಬೇಗ್ ಎಂಬುವವರಿಗೆ ಮಾರಾಟ ಮಾಡಿದ್ದಾನೆ. ಈ ಫಾಜೀಲ್ ಬೇಗ್ ಎಂಬಾತ ಪ್ರಕರಣದಲ್ಲಿ ಭಾಗಿಯಾಗಿರುವ ಗ್ರಾಮ ಆಡಳಿತಾಧಿಕಾರಿ ಅಜೀಂ ಖಾನ್ ಅವರ ಸಂಬಂಧಿ ಎಂಬುದು ಲಭ್ಯವಿರುವ ಮಾಹಿತಿಯಿಂದ ದೃಢಪಟ್ಟಿದೆ. ಈ ಮೂಲಕ ಸರ್ಕಾರಿ ಆಸ್ತಿಯನ್ನು ವ್ಯವಸ್ಥಿತವಾಗಿ ಖಾಸಗಿ ಪಾಲಾಗುವಂತೆ ಮಾಡಿರುವ ಅಧಿಕಾರಿಗಳ ವಿರುದ್ಧ ಸಮಗ್ರ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ನೇಹಮಹಿ ಕೃಷ್ಣ ಅವರು ಒತ್ತಾಯಿಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಬೆಳಗಾವಿ ದುರಂತದ ಬೆನ್ನಲ್ಲೇ ಮೈಸೂರು ಮೃಗಾಲಯದಲ್ಲಿ ವ್ಯಾಪಕ ಕಟ್ಟೆಚ್ಚರ : ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ!

November 22, 2025
ಕ್ರೈಂ ಸುದ್ದಿಗಳುನಂಜನಗೂಡುಮುಖಪುಟ

ಪತಿ ಅನುಮಾನಾಸ್ಪದ ಸಾವು: ಅಕ್ರಮ ಸಂಬಂಧಕ್ಕೆ ವಿರೋಧಿಸಿದ ಕಾರಣಕ್ಕೆ ಪತ್ನಿಯೇ ಕೊಲೆಗೈದಿರುವ ಶಂಕೆ

November 10, 2025
ಮುಖಪುಟಮೈಸೂರು ನಗರ

ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ: ಮೃತ ಸಲೀಂ ವಿರುದ್ಧ FIR ದಾಖಲು

December 27, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ಗ್ರಾಮಾಂತರ

ಹುಣಸೂರಿನಲ್ಲಿ ಹಾಡಹಗಲೇ ಸಿನಿಮಾ ಶೈಲಿಯಲ್ಲಿ ಚಿನ್ನದ ಅಂಗಡಿ ದರೋಡೆ: ಆರೋಪಿಗಳ ಪತ್ತೆಗೆ ಐದು ಪೊಲೀಸ್ ತಂಡಗಳ ರಚನೆ

December 29, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?