PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಕಾಂಗ್ರೆಸ್‌ನ ಮುಸ್ಲಿಂ ವಿರೋಧಿ ಧೋರಣೆಗೆ ಧರ್ಮಗುರುಗಳ ಆಕ್ರೋಶ – ಬಿಜೆಪಿ ಜೊತೆಗೂಡಲು ಸಿದ್ಧವೆಂದು ಎಚ್ಚರಿಕೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಕಾಂಗ್ರೆಸ್‌ನ ಮುಸ್ಲಿಂ ವಿರೋಧಿ ಧೋರಣೆಗೆ ಧರ್ಮಗುರುಗಳ ಆಕ್ರೋಶ – ಬಿಜೆಪಿ ಜೊತೆಗೂಡಲು ಸಿದ್ಧವೆಂದು ಎಚ್ಚರಿಕೆ
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಕಾಂಗ್ರೆಸ್‌ನ ಮುಸ್ಲಿಂ ವಿರೋಧಿ ಧೋರಣೆಗೆ ಧರ್ಮಗುರುಗಳ ಆಕ್ರೋಶ – ಬಿಜೆಪಿ ಜೊತೆಗೂಡಲು ಸಿದ್ಧವೆಂದು ಎಚ್ಚರಿಕೆ

Prathinidhi News
Last updated: April 18, 2026 5:12 pm
Prathinidhi News
Published April 18, 2026
Share
SHARE

ಮೈಸೂರು, ಏಪ್ರಿಲ್‌  18 : ದಾವಣಗೆರೆ ಉಪಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಮುಸ್ಲಿಂ ಧರ್ಮಗುರುಗಳ ಒಕ್ಕೂಟವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರ್ಮಗುರುಗಳು, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 85 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದರೂ ಸಮುದಾಯದ ನಾಯಕರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ವಿಫಲವಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಚುನಾವಣೆ ಮುಗಿಯುತ್ತಿದ್ದಂತೆ ಶಿಸ್ತು ಕ್ರಮದ ನೆಪದಲ್ಲಿ ಮುಸ್ಲಿಂ ನಾಯಕರನ್ನು ಗುರಿ ಮಾಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದು ಕಾಂಗ್ರೆಸ್‌ನ ಮುಸ್ಲಿಂ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದೆ ಎಂದು ಕಿಡಿಕಾರಿದರು.

ಈಗಾಗಲೇ ನಸೀರ್ ಅಹಮದ್ ಮತ್ತು ಅಬ್ದುಲ್ ಜಬ್ಬಾರ್ ಅವರಂತಹ ಹಿರಿಯ ಮುಸ್ಲಿಂ ನಾಯಕರ ತಲೆದಂಡವಾಗಿದ್ದು, ಮುಂಬರುವ ದಿನಗಳಲ್ಲಿ ಸಚಿವ ಜಮೀರ್ ಅಹಮದ್ ಅವರ ವಿರುದ್ಧವೂ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮುಸ್ಲಿಂ ಸಮುದಾಯದ ಭದ್ರ ಬೆಂಬಲವೇ ಕಾರಣ ಎಂಬ ಅಂಶವನ್ನು ಮರೆತು, ಜನಸಂಖ್ಯೆಗೆ ಅನುಗುಣವಾಗಿ ಸಮುದಾಯಕ್ಕೆ ನೀಡಬೇಕಾದ ರಾಜಕೀಯ ಸ್ಥಾನಮಾನಗಳನ್ನು ನೀಡದೆ ಪಕ್ಷವು ಅನ್ಯಾಯ ಮಾಡುತ್ತಿದೆ. ಕಾಂಗ್ರೆಸ್ ಮಾತ್ರವಲ್ಲದೆ ಜೆಡಿಎಸ್ ಮತ್ತು ಬಿಜೆಪಿ ಕೂಡ ಮುಸ್ಲಿಮರಿಗೆ ಸೂಕ್ತ ಸ್ಥಾನಮಾನ ನೀಡುವಲ್ಲಿ ಹಿಂದೇಟು ಹಾಕಿವೆ ಎಂದು ಒಕ್ಕೂಟದ ನಾಯಕರು ದೂರಿದರು.

ಕಾಂಗ್ರೆಸ್ ಪಕ್ಷವು ಕೂಡಲೇ ತನ್ನ ಪ್ರಮಾದಗಳನ್ನು ಸರಿಪಡಿಸಿಕೊಳ್ಳಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಮುದಾಯವು ನಿರ್ಣಾಯಕ ನಿರ್ಧಾರ ಕೈಗೊಳ್ಳಲಿದೆ ಎಂದು ಧರ್ಮಗುರುಗಳು ಎಚ್ಚರಿಸಿದ್ದಾರೆ. “ದಾವಣಗೆರೆಯಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಯಾರು ಗೆದ್ದರೂ ಅವರು ನಮ್ಮವರೇ” ಎಂದು ಮಾರ್ಮಿಕವಾಗಿ ನುಡಿದಿರುವ ಅವರು, ಮುಸ್ಲಿಂ ಸಮುದಾಯದ ಹಿತದೃಷ್ಟಿಯಿಂದ ಮುಂಬರುವ ದಿನಗಳಲ್ಲಿ ಬಿಜೆಪಿ ಜೊತೆ ಬೇಕಾದರೂ ಹೋಗಲು ತಾವು ಸಿದ್ಧ ಎಂದು ಬಹಿರಂಗವಾಗಿ ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮೌಲಾನಾ ಜಕಾಉಲ್ಲಾ, ಮೌಲಾನಾ ಇಬ್ರಾಹಿಂ, ನಿವೃತ್ತ ಪೊಲೀಸ್ ಅಧಿಕಾರಿ ಸುಹೇಲ್ ಅಹಮದ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಗೌಡನಕಟ್ಟೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ‘ತಾಯಿ ಹುಲಿ’ ಸೆರೆ; ಮರಿಗಳಿಗಾಗಿ ಕಾರ್ಯಾಚರಣೆ ಮುಂದುವರಿಕೆ

November 28, 2025
ಮುಖಪುಟಮೈಸೂರು ನಗರ

ಮೈಸೂರು: ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಕ್ಕಾಗಿ ಗ್ರಹಣ ಶಾಂತಿ ಹೋಮ

March 4, 2026
ಮುಖಪುಟಮೈಸೂರು ನಗರ

ಶಾಲಾ ಪ್ರವಾಸದ ಬಸ್ ಅಪಘಾತ: ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ – ಪೋಷಕರ ಆಕ್ರೋಶ!

December 5, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು ಜೈಲಲ್ಲೂ ಕೈದಿಗಳ ಐಷಾರಾಮಿ ಜೀವನ..? ಕಾರಾಗೃಹದಲ್ಲಿ 9 ಮೊಬೈಲ್, 11 ಸಿಮ್ ಕಾರ್ಡ್, 2 ಚಾರ್ಜರ್ ಪತ್ತೆ.!

December 18, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?