PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಮುಡಾ ಭರ್ಜರಿ ಕಾರ್ಯಾಚರಣೆ; ದೇವನೂರು ಗ್ರಾಮದಲ್ಲಿ ಕೋಟ್ಯಂತರ ಮೌಲ್ಯದ ಜಾಗ ಒತ್ತುವರಿ ಮುಕ್ತ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಮುಡಾ ಭರ್ಜರಿ ಕಾರ್ಯಾಚರಣೆ; ದೇವನೂರು ಗ್ರಾಮದಲ್ಲಿ ಕೋಟ್ಯಂತರ ಮೌಲ್ಯದ ಜಾಗ ಒತ್ತುವರಿ ಮುಕ್ತ
ಮುಖಪುಟಮೈಸೂರು ನಗರ

ಮೈಸೂರು: ಮುಡಾ ಭರ್ಜರಿ ಕಾರ್ಯಾಚರಣೆ; ದೇವನೂರು ಗ್ರಾಮದಲ್ಲಿ ಕೋಟ್ಯಂತರ ಮೌಲ್ಯದ ಜಾಗ ಒತ್ತುವರಿ ಮುಕ್ತ

Prathinidhi News
Last updated: April 21, 2026 11:20 am
Prathinidhi News
Published April 21, 2026
Share
SHARE

ಮೈಸೂರು, ಏಪ್ರಿಲ್‌ 21, 2026 : ಮೈಸೂರು ಅಭಿವೃದ್ಧಿ ಪ್ರಾಧಿಕಾರವು (ಮುಡಾ) ನಗರದ ಹೊರವಲಯದಲ್ಲಿ ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದು, ದೇವನೂರು ಗ್ರಾಮದಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಜಾಗವನ್ನು ಯಶಸ್ವಿಯಾಗಿ ತೆರವುಗೊಳಿಸಿದೆ. ಮೈಸೂರು ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಗೆ ಬರುವ ದೇವನೂರು ಗ್ರಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ.

ದೇವನೂರು ಗ್ರಾಮದ ಸರ್ವೆ ನಂ. 155, 156, 228/2, 229/1, 229/2 ಹಾಗೂ 153/2 ರ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಶೆಡ್‌ಗಳನ್ನು ನಿರ್ಮಿಸಿಕೊಳ್ಳಲಾಗಿತ್ತು. ಈ ಜಾಗವನ್ನು ವಾಹನಗಳ ತಂಗುದಾಣ ಹಾಗೂ ಇನ್ನಿತರ ವಾಣಿಜ್ಯ ಉದ್ದೇಶಗಳಿಗಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿತ್ತು. ಈ ಕುರಿತು ಮಾಹಿತಿ ಪಡೆದ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದಾಗ ಅಕ್ರಮ ಒತ್ತುವರಿ ಆಗಿರುವುದು ದೃಢಪಟ್ಟಿತ್ತು.

ಸರ್ಕಾರದ ಅಧಿಸೂಚನೆ ಹಾಗೂ ಭೂಸ್ವಾಧೀನ ಅಧಿಕಾರಿಗಳ ಅಧಿಕೃತ ಪತ್ರದ ಆಧಾರದ ಮೇಲೆ ಇಂದು ಬೆಳಿಗ್ಗೆಯಿಂದಲೇ ತೆರವು ಕಾರ್ಯಾಚರಣೆ ಆರಂಭವಾಯಿತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಜೆಸಿಬಿ ಯಂತ್ರಗಳ ಮೂಲಕ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು. ಆ ಮೂಲಕ ಪ್ರಾಧಿಕಾರಕ್ಕೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಸ್ವತ್ತನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯಮುಖಪುಟರಾಜಕೀಯ

ಡಿ.ಕೆ. ಶಿವಕುಮಾರ್ ಸಿಎಂ ಆಗಲೆಂದು ಮಳವಳ್ಳಿಯ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ!

November 26, 2025
ಮುಖಪುಟಮೈಸೂರು ನಗರ

ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ: ಆನೆಗಳ ರಕ್ಷಣೆಗೆ ಎಐ ತಂತ್ರಜ್ಞಾನದ ಮೊರೆ ಹೋದ ಅರಣ್ಯ ಇಲಾಖೆ

December 23, 2025
ಮುಖಪುಟಮೈಸೂರು ನಗರ

ಮೈಸೂರು : ಹಳೇ ಕೋರ್ಟ್‌ ಗೆ ಬಾಂಬ್‌ ಬ್ಲ್ಯಾಸ್ಟ್‌ ಬೆದರಿಕೆ ಇ ಮೇಲ್‌ – ಸ್ಥಳಕ್ಕೆ ಬಾಂಬ್ ತಪಾಸಣಾ ದಳ ಹಾಗೂ ಶ್ವಾನ ದಳ ಭೇಟಿ

January 6, 2026
ಮುಖಪುಟಮೈಸೂರು ನಗರ

ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ !

December 11, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?