ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅಭಿಪ್ರಾಯ
ಪ್ರತಿನಿಧಿ ವರದಿ ಕೊಳ್ಳೇಗಾಲ
ರಾಜ್ಯದಲ್ಲಿ 25ಕ್ಕೂ ಹೆಚ್ಚು ಕಾಂಗ್ರೆಸ್ ಅಭ್ಯರ್ಥಿಗಳು ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಹೇಳಿದರು.
ಪಟ್ಟಣದ ನ್ಯಾಷನಲ್ ಶಾಲಾ ಆವರಣದಲ್ಲಿ ಇತ್ತೀಚೆಗೆ ಲೋಕಸಭಾ ಚುನಾವಣೆ ಹಿನ್ನೆಲೆ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು.
ರಾಷ್ಟç ಮಟ್ಟದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ಸಾರ್ವಜನಿಕರಿಗೆ ಅಸಮಾಧನವಿದೆ. ಹಾಗಾಗಿ, ಯಾವುದೇ ಕಾರಣಕ್ಕೂ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಆಟ ನಡೆಯೋದಿಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ 5 ಕ್ಯಾರಂಟಿ ಯೋಜನೆಗಳನ್ನು ನಾಡಿನ ಎಲ್ಲಾ ವರ್ಗದ ಜನರು ಮೆಚ್ಚಿದ್ದಾರೆ. ಪರಿಣಾಮ, ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೀನಾಯವಾಗಿ ಸೋಲುವುದು ಖಚಿತ ಎಂದರು.
ಚಾ.ನಗರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆಲುವಿಗೋಸ್ಕರ ಮಾತ್ರ ಜನರು ಮತ ನೀಡುವುದಿಲ್ಲ. ಈ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರಬೇಕು ಎಂಬ ದೃಷ್ಟಿಯಿಂದ ವೋಟ್ ನೀಡುತ್ತಾರೆ ಹಾಗೂ ಹಿಂದುತ್ವದ ಹೆಸರಿನಲ್ಲಿ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿರುವ ಬಿಜೆಪಿ ಸರ್ಕಾರವನ್ನು ಕರ್ನಾಟಕದಲ್ಲಿ ಕಿತ್ತೊಗೆದಂತೆ ಕೇಂದ್ರದಲ್ಲಿಯೂ ಕಿತ್ತೆಸೆಯಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಚಾ.ನಗರ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಸುನಿಲ್ ಬೋಸ್ ಮಾತನಾಡಿ, ಕ್ಷೇತ್ರದಲ್ಲಿ ಪಕ್ಷದಿಂದ ಸ್ಪರ್ಧಿಸಲು 8 ಜನರು ಆಕಾಂಕ್ಷಿಗಳಾಗಿದ್ದರು. ಈ ನಡುವೆ ರಾಷ್ಟç ಹಾಗೂ ರಾಜ್ಯ ಮಟ್ಟದ ಪಕ್ಷದ ನಾಯಕರು ನನ್ನನ್ನು ಅಭ್ಯರ್ಥಿಯಾಗಿಸಿದ್ದಾರೆ. ನನ್ನ ಮುಖ ಪರಿಚಯ ಚಾ.ನಗರ ಕ್ಷೇತ್ರದಲ್ಲಿ ಸಾಕಷ್ಟು ಕಾರ್ಯಕರ್ತರಿಗೆ ಗೊತ್ತಿಲ್ಲ. ಇತ್ತೀಚೆಗೆ ಪ್ರವಾಸಗೈದು ಎಲ್ಲರನ್ನು ತಿಳಿದುಕೊಳ್ಳುತ್ತಿದ್ದೇನೆ. ಆಗಿದ್ದರೂ ನನ್ನ ಗೆಲುವಿಗೆ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಈ ನಡುವೆ ಕ್ಷೇತ್ರದ ಜನರು ನನ್ನ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿಕೊಡಬೇಕು. ಈ ವಿಶ್ವಾಸವನ್ನು ನಾನು ಉಳಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತೇನೆ ಹಾಗೂ ದಿ.ಆರ್.ಧ್ರುವನಾರಾಯಣ್ ಅವರ ಹಾದಿಯಲ್ಲಿ ದುಡಿಯುತ್ತೇನೆ ಎಂದು ಭರವಸೆ ನೀಡಿದರು.
ವೇದಿಕೆಯಲ್ಲಿ ಚಾ.ನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಶಾಸಕರಾದ ಗಣೇಶ್ ಪ್ರಸಾದ್, ಡಾ.ತಿಮ್ಮಯ್ಯ, ಮಾಜಿ ಶಾಸಕರಾದ ಡಾ.ಯತೀಂದ್ರ, ಆರ್.ನರೇಂದ್ರ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ತೋಟೇಶ್, ಚಂದ್ರು ಸೇರಿದಂತೆ ಇತರರು ಇದ್ದರು.
ಸಮಾಜಘಾತಕ ಎನ್.ಮಹೇಶ್!
ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಮಾತನಾಡಿ, ಚಾ.ನಗರ ಲೋಕ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಯಾವತ್ತು ಲೀಡರ್ ಅಲ್ಲ ಎಂದು ಏಕವಚನದಲ್ಲಿಯೇ ಹಿಗ್ಗಾಮಗ್ಗ ತರಾಟೆ ತೆಗೆದುಕೊಂಡರು. ಹಿಂದೆ ಕಾಂಗ್ರೆಸ್ ಪಕ್ಷದ ನಾಯಕರ ಜತೆ ಸೇರಿದ್ದರಿಂದ ಅವರಿಗೆ ಲೀಡರ್ ಶಿಫ್ ಸಿಕ್ಕಿತ್ತು ಅಷ್ಟೆ. ಆತ ಯಾವತ್ತು ಜನಪರ ಕೆಲಸ ಮಾಡಿದವನಲ್ಲ. ಹಾಗಾಗಿ, ಬಾಲರಾಜು ಈ ಚುನಾವಣೆಯಲ್ಲಿ ಲೆಕ್ಕಕ್ಕಿಲ್ಲ. ಆಗಂತ ಕಾಂಗ್ರೆಸ್ ಕಾರ್ಯಕರ್ತರು ಸುಮ್ಮನೆ ಕೂರಬಾರದು ಎಂದು ಕರೆ ನೀಡಿದರಲ್ಲದೇ, ಎಸ್.ಬಾಲರಾಜು ಜತೆಗಿರುವ ಇನ್ನೊಬ್ಬ ಸಮಾಜಘಾತಕ ವ್ಯಕ್ತಿ ಯಾರಾದರೂ ಇದ್ದರೆ, ಸನ್ಮಾನ್ಯ ನಮ್ಮ ಮಾಜಿ ಶಾಸಕರಾದ ಎನ್.ಮಹೇಶ್ ಅವ್ರು, ಅವರು ಏನ್ ಹೇಳಿದ್ದಾರೆ ಸ್ವಾಮಿ. ವಿದ್ಯಾರ್ಥಿಗಳಿಗೆ ನಮ್ಮ ಕಾಂಗ್ರೆಸ್ ಸರ್ಕಾರ ಏನು ಮಾಡ್ತಿಲ್ಲ ಅಂದ್ರು. ಅಯ್ಯೋ ಪುಣ್ಯಾತ್ಮ ನೀನು ಶಿಕ್ಷಣ ಸಚಿವನಾಗಿದ್ದಾಗ ಆ ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಕೊಡೋದ್ರಲ್ಲಿ 30 ಕೋಟಿ ದುಡ್ವಡ್ಕೊಂಡು ನೀನು ಜಾಗನೇ ಖಾಲಿ ಮಾಡ್ಬಿಟ್ಟೆ. ಹಾಗಾಗಿ, ನಿನ್ನಿಂದ ನಾವೇನು ಕಲಿಯುವಂತದಿಲ್ಲ. ನೀನು ಹಾಳಾಗಿದ್ದಾಯ್ತು. ಈಗ ಬಾಲರಾಜು ಹಾಳ್ ಮಾಡಲು ಹೋಗಿದ್ದೀಯ. ಅದರ ಜತೆಯಲ್ಲಿ ನಿಮ್ಮ ಪಕ್ಷವೂ ಯಕ್ಕುಟ್ಟಿ ಹೋಗುತ್ತದೆ ಎಂದು ಟೀಕಿಸಿದರು.
ಬಿಜೆಪಿಯಿಂದ ದೇವರ ಹೆಸರಿನಲ್ಲಿ ಮೋಡಿ: ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, 2024ರ ಲೋಕಸಭಾ ಚುನಾವಣೆಯನ್ನು ಗೆಲ್ಲುವ ಉದ್ದೇಶದಿಂದ ಬಿಜೆಪಿ ಪಕ್ಷ ದೇಶಾಧ್ಯಂತ ಧಾರ್ಮಿಕ ವ್ಯವಸ್ಥೆಯನ್ನು ಮುಂದಿಟ್ಟು ಜನರನ್ನು ಮೋಡಿ ಮಾಡುತ್ತಿದೆ ಎಂದು ಆರೋಪಿಸಿದರು. ಇದರಿಂದ ದೇಶದಲ್ಲಿ ಕೋಮು ಸೌಹಾರ್ಧತೆ ಹಾಳಾಗುತ್ತಿದೆ. ಆದ್ದರಿಂದ ಬಿಜೆಪಿಯನ್ನು ಈ ಬಾರಿ ಮತದಾರರು ದೂರವಿಟ್ಟು ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಈ ಮೂಲಕ ರಾಜ್ಯದಲ್ಲಿ ದೊರೆಯುತ್ತಿರುವ ಗ್ಯಾರಂಟಿಗಳನ್ನು ಕೇಂದ್ರ ಸರ್ಕಾರದಿಂದಲೂ ಪಡೆದುಕೊಳ್ಳಲು ಮುಂದಾಗಬೇಕು ಎಂದು ಕಿವಿ ಮಾತು ಹೇಳಿದರಲ್ಲದೇ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಇದೀಗ ಕೊಳ್ಳೇಗಾಲ ಕ್ಷೇತ್ರಕ್ಕೆ 10 ತಿಂಗಳ ಅವಧಿಯಲ್ಲಿ 150 ಕೋಟಿ ಅನುದಾನ ನೀಡಿದೆ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಅವರು ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ ನೀಡಿದ್ದಾರೆ. ಈ ಎಲ್ಲಾ ಕಾರಣದಿಂದ ಜನರು ಚಾ.ನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಿ ಎಂದು ಮನವಿ ಮಾಡಿದರು.
29ಕೆಜಿಎಲ್-1
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ಪಟ್ಟ
ಣದ ನ್ಯಾಷನಲ್ ಶಾಲಾ ಆವರಣದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
