ಮೈಸೂರು, ಸೆ.19: ಜಿಲ್ಲೆಯ ಕೆ.ಆರ್.ನಗರ ತಾಲೂಕು ಚುಂಚನಕಟ್ಟೆ ಬಳಿಯ ನಾಲೆಯೊಂದರಲ್ಲಿ ವ್ಯಕ್ತಿ ಶವ Found) ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಮೃತಪಟ್ಟಿದ್ದು ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಚುಂಚನಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವ್ಯಕ್ತಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರಾ? ಆತ್ಮಹತ್ಯೆಯಾ? ಕೊಲೆಯಾ? ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
![](https://www.prathinidhi.net/wp-content/uploads/2023/09/Death-32.webp)