PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿ !
ಚಾಮರಾಜನಗರಮುಖಪುಟ

ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿ !

Prathinidhi News
Last updated: January 21, 2026 3:56 pm
Prathinidhi News
Published January 21, 2026
Share
SHARE

ಚಾಮರಾಜನಗರ, ಜನವರಿ 21, 2026 : ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಮುಂಜಾನೆ ನಡೆದಿದ್ದು ಇಂದು ಬೆಳಗ್ಗೆ 11 ರ ಸುಮಾರಿಗೆ ಶವಪತ್ತೆಯಾಗಿದೆ.

ಮಂಡ್ಯ ಜಿಲ್ಲೆಯ ಚಿರನಹಳ್ಳಿ ಗ್ರಾಮದ ಪ್ರವೀಣ್{30} ಎಂಬುವವರು ಚಿರತೆ ದಾಳಿಗೆ ಮೃತಪಟ್ಟಿರುವ ಪಾದಯಾತ್ರಿಕ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯ ಜಿಲ್ಲೆಯ ಚಿರನಹಳ್ಳಿ ಗ್ರಾಮ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಪಾದಯಾತ್ರಿಗಳು ತೆರಳಿದ್ದರು. ಮಂಗಳವಾರ ರಾತ್ರಿ ತಾಳುಬೆಟ್ಟದಲ್ಲಿ ವಾಸ್ತವ್ಯ ಹೂಡಿ ಬುಧವಾರ ಬೆಳಗ್ಗೆ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಹೊರಟಿದ್ದರು. ಬುಧವಾರ ಬೆಳಗ್ಗೆ ರಂಗಸ್ವಾಮಿ ಒಡ್ಡಿನ ಸಮೀಪದ ಪಾದಯಾತ್ರಿಕರ ಮಾರ್ಗದಲ್ಲಿ ಕುಳಿತಿದ್ದ ಚಿರತೆಯು ಏಕಾಏಕಿ ಪ್ರವೀಣ್ ಮೇಲೆ ದಾಳಿ ಮಾಡಿ ಎಳೆದೊಯ್ದಿದೆ. ಜೊತೆಯಲ್ಲಿದ್ದ ಐವರು ಸ್ನೇಹಿತರು ಕಿರುಚಾಡಿಕೊಂಡು ಚಿರತೆ ಓಡಿಸಲು ಎಷ್ಟೇ ಪ್ರಯತ್ನ ಪಟ್ಟರು ಪ್ರವೀಣ್ ನನ್ನು ಅರಣ್ಯದೊಳಗೆ ಎಳೆದುದೊಯ್ದಿದೆ.

ಭಯಭೀತರಾದ ಸ್ನೇಹಿತರು ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ರಿಗೆ ಮಾಹಿತಿ ನೀಡಿದ್ದರಿಂದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಶವವನ್ನು ಪತ್ತೆ ಹಚ್ಚಿದ್ದಾರೆ. ಕಳೆದ ಒಂದು ವಾರದಿಂದ ಸತತವಾಗಿ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡು ಕುಳಿತಿರುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿತ್ತು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯಮುಖಪುಟಮೈಸೂರು ನಗರ

ಶ್ರೀರಂಗಪಟ್ಟಣ: KRS ನಲ್ಲಿ ಮತ್ತೆ ಭದ್ರತಾ ಲೋಪ! ಅಧಿಕಾರಿಗಳು ‘ಡೋಂಟ್ ಕೇರ್’ – ಬೃಂದಾವನ ಗಾರ್ಡನ್ ನಲ್ಲಿ ಪ್ರಭಾವಿ ವ್ಯಕ್ತಿ ಸೈಕ್ಲಿಂಗ್..!

November 5, 2025
ಬೆಂಗಳೂರುಮುಖಪುಟ

ವೃಕ್ಷಮಾತೆ ಶತಾಯುಷಿ ಸಾಲುಮರದ ತಿಮ್ಮಕ್ಕ (114) ವಿಧಿವಶ!

November 14, 2025
ಮುಖಪುಟಮೈಸೂರು ನಗರ

ಪ್ಲಾಸ್ಟಿಕ್ ಪ್ಯಾಕ್ ತ್ಯಜಿಸಿ ಪೇಪರ್ ಬ್ಯಾಗ್ ಬಳಸಿ ಸಾರ್ವಜನಿಕರಿಗೆ ಅರಿವು ಸಂಸ್ಥೆ ಜಾಗೃತಿ

January 28, 2026
ಮುಖಪುಟರಾಜಕೀಯ

ಅರಸೀಕೆರೆ ರಣರಂಗಕ್ಕೆ ಎಚ್‌.ಡಿ. ರೇವಣ್ಣಗೆ ಆಹ್ವಾನ: ‘ತಾಕತ್ತಿದ್ದರೆ ಬನ್ನಿ’ ಎಂದು ಗುಡುಗಿದ ಕೆ.ಎಂ.ಶಿವಲಿಂಗೇಗೌಡ

January 13, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?