ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಯ ಭೀಕರ ಕೊಲೆ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ (45) ಎಂಬವರನ್ನು ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಶನಿವಾರ ರಾತ್ರಿ ಈ ಭೀಕರ ಕೊಲೆ ನಡೆದಿದ್ದು, ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಅಧಿಕಾರಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಂಗಳೂರಿನ ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
