PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆ
ಮೈಸೂರು ಗ್ರಾಮಾಂತರ

ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆ

ಪ್ರತಿನಿಧಿ
Last updated: March 26, 2024 4:35 pm
ಪ್ರತಿನಿಧಿ
Published March 25, 2024
Share
SHARE

ಪ್ರತಿನಿಧಿ ವರದಿ ಕೆ.ಆರ್.ನಗರ

ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಜನಪ್ರಿಯ ಯೋಜನೆಗಳು ಮತ್ತು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮತ ಕೇಳುವಂತೆ ಶಾಸಕ ಡಿ.ರವಿಶಂಕರ್ ಸಲಹೆ ನೀಡಿದರು.

ಪಟ್ಟಣದ ಕನಕನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾ. 27 ರಂದು ಆಯೋಜಿಸಲಿರುವ ಬೃಹತ್ ಕಾರ್ಯಕರ್ತರ ಸಮಾವೇಶದ ಹಿನ್ನೆಲೆಯಲ್ಲಿ ಸೋಮವಾರ ಕರೆಯಲಾಗಿದ್ದ ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಬೇಕೆಂದರು.

ಬೇರೆ ಪಕ್ಷದವರು ಹೇಳುವ ಸುಳ್ಳು ವದಂತಿಗಳಿಗೆ ಕಿವಿ ಕೊಡದೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತದಾರರಿಗೆ ನೀಡಿದ ಭರವಸೆಯಂತೆ ನುಡಿದಂತೆ ನಡೆದುಕೊಂಡಿದೆ. ಗ್ಯಾರಂಟಿ ಯೋಜನೆಗಳನ್ನು ಶೀಘ್ರವಾಗಿ ಜಾರಿಗೆ ತರುವ ಮೂಲಕ ಜನಮಾನಸದಲ್ಲಿ ಉಳಿದಿದೆ ಎಂಬುದನ್ನು ಮನದಟ್ಟಾಗುವ ರೀತಿಯಲ್ಲಿ ಕಾರ್ಯಕರ್ತರು ಮತದಾರರಿಗೆ ತಿಳಿಸಬೇಕು ಎಂದು ಕರೆ ನೀಡಿದರು.

- ಜಾಹೀರಾತು -

ಪಟ್ಟಣಕ್ಕೆ ಈಗಾಗಲೇ ಒಳಚರಂಡಿ, ಕುಡಿಯುವ ನೀರಿನ ಸರಬರಾಜು, ರಸ್ತೆ ಮತ್ತು ಚರಂಡಿಗಳ ಅಭಿವೃದ್ಧಿ, ಉದ್ಯಾನಗಳ ಅಭಿವೃದ್ಧಿ, ಕ್ರೀಡಾಂಗಣ ಅಭಿವೃದ್ಧಿಗೆ ಅನುದಾನ ಸೇರಿದಂತೆ ಹತ್ತಾರು ಅಭಿವೃದ್ಧಿ ಕೆಲಸಗಳಿಗೆ ವಿವಿಧ ಯೋಜನೆ ಯಡಿಯಲ್ಲಿ 60 ಕೋಟಿಗೂ ಹೆಚ್ಚು ಅನುದಾನ ತರಲಾಗಿದೆ ಎಂದರು.

ಪಟ್ಟಣದ ಮೈಸೂರು-ಹಾಸನ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ, ಮಧುವನಹಳ್ಳಿ ಬಡಾವಣೆಯ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಸೇರಿದಂತೆ ಅನೇಕ ಕಾರ್ಯಕ್ರಮಗಳು ಶೀಘ್ರವಾಗಿ ಪ್ರಾರಂಭವಾಗಲಿದ್ದು, ಇವುಗಳನ್ನು ಜನಸಾಮಾನ್ಯರಿಗೆ ಪುರಸಭಾ ಸದಸ್ಯರು ಮತ್ತು ಮುಖಂಡರು ತಿಳಿಸಬೇಕೆಂದರು.

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷ ಸರಳ, ಸಜ್ಜನಿಕೆಗೆ ಹೆಸರಾದ ಸ್ಟಾರ್ ಚಂದ್ರು ಅವರನ್ನು ಘೋಷಿಸಿದೆ. ನಾವೆಲ್ಲ ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು, ನಮ್ಮ ಸಾಮರ್ಥ್ಯ ಸಾಬೀತುಪಡಿಸಬೇಕು ಎಂದು ಕೋರಿದರು.

ಮಾ. 27 ರಂದು ಪಟ್ಟಣದ ಡಾ.ರಾಜಕುಮಾರ್ ಬಾನಂಗಳದಲ್ಲಿ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಏರ್ಪಡಿಸಲಾಗಿದ್ದು, ಇದಕ್ಕೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರನ್ನು ಸೇರಿಸಿ ಕಾರ್ಯಕ್ರಮ ಯಶಸ್ವಿಯಾಗುವಂತೆ ಸಹಕರಿಸಬೇಕೆಂದು ತಿಳಿಸಿದರು.

ಪುರಸಭಾ ಮಾಜಿ ಅಧ್ಯಕ್ಷ ನರಸಿಂಹರಾಜು, ಸದಸ್ಯರಾದ ನಟರಾಜು, ಸೈಯದ್ ಸಿದ್ದೀಕ್, ಜಾವೀದ್ ಪಾಷಾ, ನಗರಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಸ್.ಮಹೇಶ್, ಮುಖಂಡ ಕ್ಯಾರೆನಾಗರಾಜ್, ರಾಜಯ್ಯ, ಚರ‍್ನಹಳ್ಳಿಶಿವಣ್ಣ, ಕೆ.ಸಿ.ಹರೀಶ್, ವಿನಯ್, ತಿಮ್ಮಶೆಟ್ಟಿ, ಸ್ವಾಮಿನಾಯಕ ಇನ್ನಿತರರು ಮಾತನಾಡಿದರು.

ಪುರಸಭಾ ಸದಸ್ಯ ಕೆ.ಜಿ.ಸುಬ್ರಮಣ್ಯ, ಮಿಕ್ಸರ್‌ ಶಂಕರ್, ಶಿವುನಾಯಕ್, ಶಂಕರ್‌ಸ್ವಾಮಿ, ಕಾಂಗ್ರೆಸ್ ನಗರಾಧ್ಯಕ್ಷ  ಎಂ.ಜೆ.ರಮೇಶ್, ಮುಖಂಡ ಪ್ರಸನ್ನಕುಮಾರ್, ಸರಿತಾಜವರಪ್ಪ, ಪುಟ್ಟರಾಜು, ಆದರ್ಶ, ರವಿಪೂಜಾರಿ, ಎಂ.ಎ.ನಾಗೇಂದ್ರ, ಸಮಂತ್, ಮಹದೇವ್ ಸೇರಿದಂತೆ ಇನ್ನಿತರರು ಹಾಜರಿದ್ದರು.

25 ಕೆಆರ್‌ಎನ್-1:- ಕೆ.ಆರ್.ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕರೆಯಲಾಗಿದ್ದ ಪಟ್ಟಣ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಪೂರ್ವಭಾವಿ ಸಭೆಯಲ್ಲಿ ಶಾಸಕ ಡಿ.ರವಿಶಂಕರ್ ಮಾತನಾಡಿದರು. ಕಾಂಗ್ರೆಸ್ ನಗರಾದ್ಯಕ್ಷ ಎಂ.ಜೆ.ರಮೇಶ್, ಪುರಸಭಾ ಮಾಜಿ ಅಧ್ಯಕ್ಷ ನರಸಿಂಹರಾಜು, ಸದಸ್ಯ ಕೆ.ಜಿ.ಸುಬ್ರಮಣ್ಯ, ಮುಖಂಡರಾದ ಚರ‍್ನಹಳ್ಳಿಶಿವಣ್ಣ, ಕ್ಯಾರೆನಾಗರಾಜ್, ತಿಮ್ಮಶೆಟ್ಟಿ, ವಿನಯ್ ಇನ್ನಿತರರು ಇದ್ದರು.

 

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮೈಸೂರು ಗ್ರಾಮಾಂತರ

26 ರಂದು ಮೈಸೂರಿನ ಸೆಸ್ಕ್ ಕಚೇರಿ ಮುತ್ತಿಗೆ

March 22, 2024
ಕ್ರೈಂ ಸುದ್ದಿಗಳುಮುಖಪುಟಮೈಸೂರು ಗ್ರಾಮಾಂತರ

ಪೊಲೀಸಪ್ಪನ ತ್ರಿಕೋನ ಪ್ರೇಮಕಥೆ : ಪತ್ನಿ 5 ತಿಂಗಳ ಗರ್ಭೀಣಿಯಾದಾಗ ಹೆಂಡತಿ ಬೇಡವೆಂದ ಭೂಪ..!

May 21, 2025
ಮುಖಪುಟಮೈಸೂರು ಗ್ರಾಮಾಂತರ

ರೈತನ ಬೆಳೆಗೆ ಕನ್ನ ಹಾಕಿದ ಖದೀಮರು..! ಎಕರೆ ಭೂಮಿಯಲ್ಲಿ ಬೆಳೆದಿದ್ದ ಸುಮಾರು 7 ಟನ್‌ ಕಲ್ಲಂಗಡಿ ರಾತ್ರೋರಾತ್ರಿ ಮಂಗಮಾಯ..!

January 24, 2025
ಮುಖಪುಟಮೈಸೂರು ಗ್ರಾಮಾಂತರರಾಜಕೀಯ

ಸಿಎಂ, ಪ್ರಭಾವಿ ಸಚಿವರಿದ್ದರೂ ಟಿ ನರಸೀಪುರಕ್ಕಿಲ್ಲ ಕ್ರೀಡಾಂಗಣದ ಭಾಗ್ಯ..!

January 22, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?