PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ನವದೆಹಲಿ > ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!
ನವದೆಹಲಿಮುಖಪುಟಮೈಸೂರು ನಗರ

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

Prathinidhi News
Last updated: November 11, 2025 3:48 pm
Prathinidhi News
Published November 11, 2025
Share
SHARE

ನವದೆಹಲಿ, ನವೆಂಬರ್‌ 11, 2025 : ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಭಾಗಿಯಾಗಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮುನ್ನ ಮಸೀದಿಯೊಂದರ ಬಳಿ ಮೂರು ಗಂಟೆಗಳ ಕಾಲ ಪಾರ್ಕಿಂಗ್‌ ಮಾಡಲಾಗಿತ್ತು ಎಂಬ ವಿಚಾರ ಇದೀಗ ಬಹಿರಂಗಗೊಂಡಿದೆ.

ಪಾರ್ಕಿಂಗ್ ಸ್ಥಳದಿಂದ ನಿರ್ಗಮಿಸಿದ ಕೆಲವೇ ನಿಮಿಷಗಳ ನಂತರ ಕೆಂಪು ಕೋಟೆಯ ಬಳಿ ಸಂಜೆ 6:52–7:00 ಗಂಟೆ ನಡುವೆ ಸ್ಫೋಟಗೊಂಡಿದೆ. ಪಾರ್ಕಿಂಗ್ ಪ್ರದೇಶಕ್ಕೆ ಪ್ರವೇಶಿಸುವ ಮತ್ತು ನಿರ್ಗಮಿಸುವ ವೇಳೆ ಕಾರಿನಲ್ಲಿ ನೀಲಿ ಮತ್ತು ಕಪ್ಪು ಬಣ್ಣದ ಟೀ ಶರ್ಟ್, ಮುಖಕ್ಕೆ ಮಾಸ್ಕ್‌ ಧರಿಸಿದ್ದ ಚಾಲಕ ಒಬ್ಬನೇ ಕುಳಿತ್ತಿದ್ದ. ಕಾರು ಈ ಮೊದಲು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪತ್ತೆಯಾಗಿದೆ.

ತನಿಖಾಧಿಕಾರಿಗಳು ಈಗ ದರ್ಯಗಂಜ್ ಕಡೆಗೆ ಹೋಗುವ ಮಾರ್ಗವನ್ನು ಪತ್ತೆಹಚ್ಚುತ್ತಿದ್ದಾರೆ. ಕಾರು ಎಲ್ಲಿಂದ ಆಗಮಿಸಿದೆ ಎನ್ನುವುದರ ಜಾಡು ಹಿಡಿಯಲು 100ಕ್ಕೂ ಹೆಚ್ಚು ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಾರೆ. ಏತನ್ಮಧ್ಯೆ ದೆಹಲಿ ಸ್ಫೋಟ ಪ್ರಕರಣದ ಆತ್ಮಹತ್ಯಾ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್ ಎಂಬಾತನ ಮೊದಲ ಚಿತ್ರ ಇದೀಗ ಬಹಿರಂಗಗೊಂಡಿದೆ. ಉಮರ್ ಇನ್ನೂ ಇಬ್ಬರು ಸಹಚರರೊಂದಿಗೆ ದಾಳಿಯನ್ನು ಯೋಜಿಸಿದ್ದಲ್ಲದೆ ಕಾರಿನಲ್ಲಿ ಡಿಟೋನೇಟರ್ ಅಳವಡಿಸಿದ್ದ ಎಂದು ಮೂಲಗಳು ತಿಳಿಸಿವೆ. ಇದೀಗ ಡಾ. ಉಮರ್ ಮೊಹಮ್ಮದ್ ನಿಜವಾಗಿಯೂ ಕಾರಿನಲ್ಲಿದ್ದನೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮೃತರ ಡಿಎನ್‌ಎ ಪರೀಕ್ಷೆಯನ್ನು ನಡೆಸಲು ಮುಂದಾಗಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ: ಗಾಯಾಳುಗಳ ಭೇಟಿ ಮಾಡಿ ಧೈರ್ಯ ತುಂಬಿದ ಸಚಿವ ಡಾ. ಹೆಚ್.ಸಿ. ಮಹದೇವಪ್ಪ

December 26, 2025
ಬೆಂಗಳೂರುಮುಖಪುಟ

ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ : SSLC ಟಾಪರ್‌ಗಳಿಗೆ ಲ್ಯಾಪ್ ಟಾಪ್ ಬದಲಿಗೆ ನಗದು ಬಹುಮಾನ ನೀಡಲು ಆದೇಶ

January 24, 2026
ಮುಖಪುಟಮೈಸೂರು ನಗರ

ಮೈಸೂರು: ವಸತಿ ಪ್ರದೇಶಕ್ಕೆ ನುಗ್ಗಿ ಬೀದಿ ನಾಯಿಯನ್ನು ಹೊತ್ತೊಯ್ದ ಚಿರತೆ!

December 23, 2025
ಮುಖಪುಟಮೈಸೂರು ನಗರ

ಮಹಿಳಾ ರಕ್ಷಣಾ ಪಡೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ- ಕಾಯಕದೊಂದಿಗೆ ಕನ್ನಡ ಬೆಳಸಿ: ಡಾ. ಅಬ್ದುಲ್ ಶುಕುರ್

November 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?