96ನೇ ಸಾಲಿನಲ್ಲಿ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಇಂದು ಅಮೆರಿಕದ ಲಾಸ್ ಏಂಜಲೀಸ್ನ ಡಾಲ್ಬಿ ಥಿಯೇಟರ್ನಲ್ಲಿ ನಡೆದಿದೆ. ಈ ವೇದಿಕೆ ಮೇಲೆ ‘ಆರ್ಆರ್ಆರ್’ ಚಿತ್ರಕ್ಕೆ ವಿಶೇಷ ಗೌರವ ಸಲ್ಲಿಕೆ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಇದು ಭಾರತಕ್ಕೆ ಹೆಮ್ಮೆಯ ಕ್ಷಣ’ ಎಂದು ಫ್ಯಾನ್ಸ್ ಕರೆದಿದ್ದಾರೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಎಸ್ಎಸ್ ರಾಜಮೌಳಿ ತಂಡಕ್ಕೆ ಶುಭಕೋರುತ್ತಿದ್ದಾರೆ.
2022ರಲ್ಲಿ ರಿಲೀಸ್ ಆದ ‘ಆರ್ಆರ್ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.