ಬೆಂಗಳೂರು, ನವೆಂಬರ್ 19, 2025 : ರಾಜ್ಯ ರಾಜಧಾನಿ ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲಿ ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ನಗದು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ.
ಇಂದು ಮಧ್ಯಾಹ್ನ ಜಯದೇವ ಡೇರಿ ಸರ್ಕಲ್ ಬಳಿ ದರೋಡೆ ನಡೆದಿದ್ದು, ಒಂದು ವಾಹನದಿಂದ ಇನ್ನೊಂದು ವಾಹನಕ್ಕೆ ಹಣ ಶಿಫ್ಟ್ ಮಾಡುತ್ತಿದ್ದ ವೇಳೆ ಏಕಾಏಕಿ ಬಂದ ಗ್ಯಾಂಗ್ ವೊಂದು 7.11 ಕೋಟಿ ರೂಪಾಯಿ ಹಣ ದರೋಡೆ ಮಾಡಿ ಪರಾರಿಯಾಗಿದೆ.
