PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಜಿಲ್ಲೆಯಲ್ಲಿ ಅಪಘಾತಗಳ ಸರಣಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಜಿಲ್ಲೆಯಲ್ಲಿ ಅಪಘಾತಗಳ ಸರಣಿ
ಚಾಮರಾಜನಗರ

ಜಿಲ್ಲೆಯಲ್ಲಿ ಅಪಘಾತಗಳ ಸರಣಿ

ಪ್ರತಿನಿಧಿ
Last updated: July 4, 2024 8:49 pm
ಪ್ರತಿನಿಧಿ
Published July 4, 2024
Share
SHARE

ಒಂದೇ ದಿನದಲ್ಲಿ 4 ಅಪಘಾತ । ಮಲೆ ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ಹೆಚ್ಚಾದ ಪ್ರಕರಣ । ಡಿಕ್ಕಿ ಹೊಡೆದು ಅಪರಿಚಿತ ಕಾರು ಪರಾರಿ

ಪ್ರತಿನಿಧಿ ವರದಿ ಚಾಮರಾಜನಗರ

ಜಿಲ್ಲೆಯ ವಿವಿಧೆಡೆ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಗಂಭಿರವಾಗಿ ಗಾಯಗೊಂಡರೆ, ಇಬ್ಬರು ಮೃತಪಟ್ಟಿದ್ದಾರೆ.

ತಾಲೂಕಿನ ಬಸವಟ್ಟಿ ಗೇಟ್ ಸಮೀಪ ಬುಧವಾರ ರಾತ್ರಿ ಸ್ಕೂಟರ್ ಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿಯಾಗಿ, ಸ್ಕೂಟರ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಮರವಾಡಿ ಗ್ರಾಮದ ಕಿಶೋರ್(48) ಹಾಗೂ ಮಹೇಶ್(46) ಮೃತರು.

- ಜಾಹೀರಾತು -

ಇವರು ಬೈಕ್ ನಲ್ಲಿ ಸಂತೆಮರಹಳ್ಳಿಯಿಂದ ಕಮರವಾಡಿಗೆ ಹೋಗುತ್ತಿದ್ದ ವೇಳೆ ಮೈಸೂರು ಕಡೆಯಿಂದ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರರಿಬ್ಬರು ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸಂತೆಮರಹಳ್ಳಿ ಠಾಣೆಯ ಪೊಲೀಸರು ಆಗಮಿಸಿ, ನಿಗಮದ ಬಸ್ ವಶಕ್ಕೆ ಪಡೆದು ಮೃತ ದೇಹಗಳನ್ನು ಸಂತೆಮರಹಳ್ಳಿಯ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಇರಿಸಿದ್ದಾರೆ. ಈ ಸಂಬಂಧ ಸಂತೆಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹನೂರು ತಾಲೂಕಿನ ಹೊಲಸು ಗುಡ್ಡೆ ಬೋರೆ ಸಮೀಪ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.
ಆರ್.ಎಸ್.ದೊಡ್ಡಿ ಗ್ರಾಮದ ಗುಜರಿ ವ್ಯಾಪಾರಿ ಗೋವಿಂದ ಗಾಯಗೊಂಡ ವ್ಯಕ್ತಿ. ಇವರು ಗುಜರಿ ವ್ಯಾಪಾರ ಮಾಡಿಕೊಂಡು ಮಂಗಳ ಗ್ರಾಮದಿಂದ ಹನ್ನೂರು ಪಟ್ಟಣದತ್ತ ಆಗಮಿಸುತ್ತಿದ್ದ ವೇಳೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಪರಿಣಾಮ ಗೋವಿಂದ ಅವರ ಎರಡು ಕೈ ಮುರಿದಿದ್ದು, ತಲೆಗೆ ತೀವ್ರ ಪೆಟ್ಟಾಗಿದೆ.

ಬೈಕ್ ಗೆ ಡಿಕ್ಕಿಹೊಡೆದ ಅಪರಿಚಿತ ವಾಹನ ಸ್ಥಳದಲ್ಲಿ ವಾಹನ ನಿಲ್ಲದೆ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ತುರ್ತುವೈದ್ಯಕೀಯ ಸಿಬ್ಬಂದಿ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನದ ಪತ್ತೆಗೆ ಹನೂರು ಪೊಲೀಸರು ಬಲೆ ಬೀಸಿದ್ದಾರೆ. ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹನೂರಿಗೆ ಬರುತ್ತಿದ್ದ ಬೈಕ್ ಮತ್ತು ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲ ಕಡೆಗೆ ಆಗಮಿಸುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ತೀವ್ರ ಗಾಯಗೊಂಡಿದ್ದು, ತಾಲೂಕಿನ ಬೈರನತ್ತ ಗ್ರಾಮದ ನಿವಾಸಿ ಮಹದೇವಪ್ಪ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾರೆ.

ಕಾರ್ಯನಿಮಿತ್ತ ಕೊಳ್ಳೇಗಾಲ ಪಟ್ಟಣಕ್ಕೆ ತೆರಳಿ ವಾಪಸ್ ಬೈರನತ್ತ ಗ್ರಾಮಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಮಲೆಮಾದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆಗೆ ಹೋಗುತ್ತಿದ್ದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಮಹದೇವಪ್ಪ ಅವರಿಗೆ ಬಲ ಕಾಲು ಹಾಗೂ ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ತಕ್ಷಣ ಸ್ಥಳೀಯರು ಆಂಬುಲೆನ್ಸ್ ಮೂಲಕ ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ . ಪಿಎಸ್ಐ ಬಸವಣ್ಣ ಹಾಗೂ ಮುಖ್ಯಪೇದೆ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹನೂರು  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್-ಕಾರ್ ನಡುವೆ ಡಿಕ್ಕಿ:

ಚಾ.ನಗರದ ಸಂತೆಮರಳ್ಳಿ ಸಮೀಪದ ಕಮರವಾಡಿ ಬಳಿ ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಂತೆಮರಳ್ಳಿ ಕಡೆಯಿಂದ ತೆರಳುತ್ತಿದ್ದ ಬೈಕ್ ಗೆ ಮೈಸೂರು ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಈ ಸಂಬಂಧ ಸಂತೆಮರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಸಂತೆಮರಹಳ್ಳಿ-ಚಾ.ನಗರ ರಸ್ತೆಯಲ್ಲಿರುವ ಮಲ್ಲಿಕಾರ್ಜುನ ಕಲ್ಯಾಣ ಮಂಟಪದ ಬಳಿ 2 ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಗಾಯಗೊಂಡಿದ್ದಾರೆ.

 

ಚಿತ್ರ: ಬೈಕ್ ಮತ್ತು ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲ ಕಡೆಗೆ ಆಗಮಿಸುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ತೀವ್ರ ಗಾಯಗೊಂಡಿದರೆ.

ಚಿತ್ರ: ಡಿಕ್ಕಿ ಹೊಡೆದ ಪರಿಣಾಮ ಕಾರ್ ಪ್ಲಟಿಯಾಗಿರುವುದು.

ಚಿತ್ರ: ಹುಲಸುಗುಡ್ಡೆ ಬೋರೆ ಸಮೀಪ ಅಪರಿಚಿತ ವಾಹನವೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ನಿಲ್ಲದೆ ಪರಾರಿಯಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರ

ಚಾಮರಾಜನಗರ ಕಾಡಂಚಿನ ಜನರಿಗಾಗಿ ಆಂಬ್ಯುಲೆನ್ಸ್ ಸೌಲಭ್ಯ ಆರಂಭ

January 14, 2024
ಚಾಮರಾಜನಗರ

ಮತಗಟ್ಟೆ ಕೇಂದ್ರಗಳತ್ತ ಅಧಿಕಾರಿಗಳು

April 25, 2024
ಚಾಮರಾಜನಗರ

ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ

April 24, 2024
ಚಾಮರಾಜನಗರಜಿಲ್ಲೆಮುಖಪುಟ

ಬಾವಲಿ ಹಾಡಿ ಬಳಿ ತೆರೆದಿರುವ ಬಾರ್ ರದ್ದುಪಡಿಸುವಂತೆ ಆಗ್ರಹಿಸಿ ಮನವಿ

March 23, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?