PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಧರ್ಮಗುರುಗಳ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ತೀವ್ರ ಖಂಡನೆ; ‘ಸೇವ್ ಹಿಂದೂಸ್ ಟೆಂಪಲ್ಸ್ ಟ್ರಸ್ಟ್’ ವತಿಯಿಂದ ಮೌನ ಪ್ರತಿಭಟನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಧರ್ಮಗುರುಗಳ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ತೀವ್ರ ಖಂಡನೆ; ‘ಸೇವ್ ಹಿಂದೂಸ್ ಟೆಂಪಲ್ಸ್ ಟ್ರಸ್ಟ್’ ವತಿಯಿಂದ ಮೌನ ಪ್ರತಿಭಟನೆ
ಮುಖಪುಟಮೈಸೂರು ನಗರ

ಮೈಸೂರು: ಧರ್ಮಗುರುಗಳ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ತೀವ್ರ ಖಂಡನೆ; ‘ಸೇವ್ ಹಿಂದೂಸ್ ಟೆಂಪಲ್ಸ್ ಟ್ರಸ್ಟ್’ ವತಿಯಿಂದ ಮೌನ ಪ್ರತಿಭಟನೆ

Prathinidhi News
Last updated: March 25, 2026 2:29 pm
Prathinidhi News
Published March 25, 2026
Share
SHARE

ಮೈಸೂರು, ಮಾರ್ಚ್‌ 25, 2026 : ರಾಜ್ಯದಲ್ಲಿ ಧರ್ಮಗುರುಗಳು ಮತ್ತು ಮಠಾಧಿಪತಿಗಳ ವಿರುದ್ಧ ಇತ್ತೀಚೆಗೆ ಕೇಳಿಬರುತ್ತಿರುವ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸಿ, ಸೇವ್ ಹಿಂದೂಸ್ ಟೆಂಪಲ್ಸ್ ಟ್ರಸ್ಟ್ ವತಿಯಿಂದ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಮೌನ ಪ್ರತಿಭಟನೆ ನಡೆಸಲಾಯಿತು. “ನಮ್ಮ ಧರ್ಮ ಗುರುಗಳು ನಮ್ಮ ಹೆಮ್ಮೆ” ಎಂಬ ಬರಹವಿರುವ ಪ್ಲೇ ಕಾರ್ಡ್‌ಗಳನ್ನು ಹಿಡಿದಿದ್ದ ಪ್ರತಿಭಟನಾಕಾರರು, ಸಾರ್ವಜನಿಕವಾಗಿ ಮಠಾಧಿಪತಿಗಳ ಗೌರವಕ್ಕೆ ಧಕ್ಕೆ ತರುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಭಾರತೀಯ ಸಂಸ್ಕೃತಿಯಲ್ಲಿ ಧರ್ಮಗುರುಗಳ ಸೇವೆ ಅಪಾರವಾಗಿದ್ದು, ಶಿಕ್ಷಣ, ವಸತಿ ಹಾಗೂ ದಾಸೋಹದಂತಹ ಸಾಮಾಜಿಕ ಕಾರ್ಯಗಳಲ್ಲಿ ಮಠಮಾನ್ಯಗಳ ಕೊಡುಗೆ ಮರೆಯುವಂತಿಲ್ಲ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು. ಸರ್ಕಾರಗಳಿಗೆ ಮಾಡಲಾಗದ ಕಷ್ಟಸಾಧ್ಯವಾದ ಕೆಲಸಗಳನ್ನು ಮಠಗಳು ಮತ್ತು ಧರ್ಮಗುರುಗಳು ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ. ಇಂತಹ ಪವಿತ್ರ ಶಕ್ತಿಗಳ ವಿರುದ್ಧ ಬಹಿರಂಗವಾಗಿ ಅಥವಾ ಸಾರ್ವಜನಿಕ ವೇದಿಕೆಗಳಲ್ಲಿ ಯಾರೂ ಕೂಡ ಹಗುರವಾಗಿ ಮಾತನಾಡಬಾರದು ಎಂದು ಅವರು ಎಚ್ಚರಿಸಿದರು.

ಇದೇ ವೇಳೆ ಮಾತನಾಡಿದ ಗಣ್ಯರು, ಧರ್ಮಗುರುಗಳ ವಿರುದ್ಧದ ಇಂತಹ ನಿಂದನೀಯ ಹೇಳಿಕೆಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಮತ್ತು ಒಂದು ವೇಳೆ ಈ ಪ್ರವೃತ್ತಿ ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಈ ಪ್ರತಿಭಟನೆಯಲ್ಲಿ ಸೇವ್ ಹಿಂದೂಸ್ ಟೆಂಪಲ್ ಟ್ರಸ್ಟ್‌ನ ನಿಖಿಲೇಶ್ ಅರಸ್, ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ಮಾಜಿ ಉಪಮೇಯರ್ ಶೈಲೇಂದ್ರ, ರಾಖೇಶ್ ಭಟ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿ ತಮ್ಮ ಬೆಂಬಲ ಸೂಚಿಸಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ ಪರ ಅಹಿಂದ ಸಮರಾದೇಶ: ಜನವರಿ 25ಕ್ಕೆ ಮೈಸೂರಿನಲ್ಲಿ ಬೃಹತ್ ಸಮಾವೇಶ ನಿಗದಿ

December 24, 2025
ಮುಖಪುಟಮೈಸೂರು ನಗರ

ನಿಯಮಬಾಹಿರ ನೇಮಕಾತಿ ಆರೋಪ: ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ

December 3, 2025
ಬೆಂಗಳೂರುಮುಖಪುಟರಾಜಕೀಯ

ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ;”ಶಿವ”ನ ಪಾದಕ್ಕೆ ಬೀಳಲಿದೆ ಮಲ್ಲಿಗೆ..! ಮಕರ ಸಂಕ್ರಾಂತಿಗೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ..?

December 3, 2025
ಮುಖಪುಟಮೈಸೂರು ನಗರ

ಮೈಸೂರು ಡ್ರಗ್ಸ್ ಲ್ಯಾಬ್ ಪ್ರಕರಣ: ಗೃಹ ಸಚಿವರ ‘ಫಿನಾಯಿಲ್’ ಹೇಳಿಕೆಗೆ ಎನ್‌ಸಿಬಿ ತಿರುಗೇಟು; ಸರ್ಕಾರಕ್ಕೆ ತೀವ್ರ ಮುಖಭಂಗ.

January 31, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?