ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16) ಎಂದು ಗುರುತಿಸಲಾಗಿದೆ. ಸಂಜು ಹೊನ್ನಶೆಟ್ಟಿಹಳ್ಳಿಯ ಗ್ರಾಮದ ಗಿರೀಶ್ ಅವರ ಪುತ್ರ ಎಂದು ತಿಳಿದು ಬಂದಿದೆ. ಈತ ಅಜ್ಜಿ ಮನೆಯಿಂದ ಕಾಲೇಜಿಗೆ ಸೈಕಲ್‌ನಲ್ಲಿ ತೆರಳುತ್ತಿದ್ದ.ಈ ವೇಳೆ ರಸ್ತೆ ಕ್ರಾಸ್ ಮಾಡುವಾಗಿ ಇನ್ನೊಂದು ಬದಿಯಿಂದ ವೇಗವಾಗಿ ಬಂದ ಕಾರು ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಪುತ್ರನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
