PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾಲಿಕೆ ಮುಂಭಾಗ ಎಬಿವಿಪಿ ಪ್ರತಿಭಟನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾಲಿಕೆ ಮುಂಭಾಗ ಎಬಿವಿಪಿ ಪ್ರತಿಭಟನೆ
ಮುಖಪುಟಮೈಸೂರು ನಗರ

ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾಲಿಕೆ ಮುಂಭಾಗ ಎಬಿವಿಪಿ ಪ್ರತಿಭಟನೆ

Prathinidhi News
Last updated: July 22, 2026 7:11 pm
Prathinidhi News
Published July 22, 2026
Share
SHARE

ಮೈಸೂರು, ಜುಲೈ 22, 2025 : ರಾಜ್ಯದಲ್ಲಿ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳು ಸಾಲು ಸಾಲು ಶೈಕ್ಷಣಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದ್ದರೂ, ಜವಾಬ್ದಾರಿ ಹೊರಬೇಕಾದ ಉನ್ನತ ಶಿಕ್ಷಣ ಸಚಿವರೇ ಇಲ್ಲದಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪಾಲಿಕೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಸಂಚಾಲಕ ನಂದನ್ ಕುಮಾರ್.ಹೆಚ್ ಮಾತನಾಡಿ, ಸಾರಿಗೆ ಸಂಸ್ಥೆಯ ಬಸ್‌ಗಳ ತೀವ್ರ ಕೊರತೆ ಹಾಗೂ ಬಸ್ ಪಾಸ್ ವಿತರಣೆಯಲ್ಲಿನ ವಿಳಂಬದಿAದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಿತ್ಯ ಫುಟ್‌ಬೋರ್ಡ್ ಮೇಲೆ ಜೀವದ ಹಂಗು ತೊರೆದು ಪ್ರಯಾಣಿಸುತ್ತಿದ್ದಾರೆ. ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳು ಕಳೆದರೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಪ್ರವೇಶಾತಿ ಪ್ರಕ್ರಿಯೆ ಮುಗಿದಿಲ್ಲ. ಇದರಿಂದ ದೂರದ ಊರುಗಳಿಂದ ಬಂದ ವಿದ್ಯಾರ್ಥಿಗಳಿಗೆ ವಸತಿ-ಊಟವಿಲ್ಲದಂತಾಗಿದೆ. ಕಳೆದ ಸಾಲಿನಿಂದಲೂ ಬಾಕಿ ಇರುವ ವಿದ್ಯಾಸಿರಿ ಸೇರಿದಂತೆ ವಿವಿಧ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಗಳನ್ನು ಬಿಡುಗಡೆ ಮಾಡದೆ ತಾಂತ್ರಿಕ ದೋಷಗಳ ನೆಪವೊಡ್ಡಿ ಇಲಾಖೆಗಳು ಕಾಲಹರಣ ಮಾಡುತ್ತಿವೆ ಎಂದು ದೂರಿದರು.

ರಾಜ್ಯದ 432 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 3,000 ಕಾಯಂ ಉಪನ್ಯಾಸಕರು ಮಾತ್ರ ಇದ್ದು, ಇದು ಅಗತ್ಯದ ಕೇವಲ ಶೇ.20ರಷ್ಟಾಗಿದೆ. ಉಳಿದ ಶೇ.80ರಷ್ಟು ಬೋಧನೆಗೆ ಅಗತ್ಯವಿರುವ 12,000 ಅತಿಥಿ ಉಪನ್ಯಾಸಕರ ನೇಮಕಾತಿ ತಕ್ಷಣ ಪೂರ್ಣಗೊಳ್ಳಬೇಕಿದೆ. ಕೂಡಲೇ ಸಮರ್ಪಕ ಬಸ್ ಸೌಕರ್ಯ ಒದಗಿಸುವುದು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ಸುಲಭವಾಗಿ ಬಸ್ ಪಾಸ್ ವಿತರಿಸಬೇಕು. ದೂರದ ಊರುಗಳಿಂದ ಬರುವ ಬಡ ವಿದ್ಯಾರ್ಥಿಗಳು ತಂಗಲು ಜಾಗವಿಲ್ಲದೆ ಪರದಾಡುತ್ತಿದ್ದಾರೆ. ಸರ್ಕಾರಿ ಹಾಸ್ಟೆಲ್‌ಗಳ ಪ್ರವೇಶಾತಿ ಪ್ರಕ್ರಿಯೆ ಪೂರ್ಣಗೊಳಿಸಿ ಮೂಲ ಸೌಕರ್ಯ ಸುಧಾರಿಸಬೇಕು ಎಂದು ಆಗ್ರಹಿಸಿದರು.

ಬಾಕಿ ಇರುವ ಎಲ್ಲಾ ವಿದ್ಯಾಸಿರಿ ಹಾಗೂ ಇತರ ವಿದ್ಯಾರ್ಥಿವೇತನಗಳನ್ನು ಬಿಡುಗಡೆ ಮಾಡಬೇಕು. ಸಾರಿಗೆ, ಹಾಸ್ಟೆಲ್ ವಸತಿ ಹಾಗೂ ವಿದ್ಯಾರ್ಥಿವೇತನದ ಈ ಮೂರೂ ಪ್ರಮುಖ ಬೇಡಿಕೆಗಳನ್ನು ಮುಂದಿನ ಒಂದು ವಾರದೊಳಗೆ ಈಡೇರಿಸದಿದ್ದರೆ, ರಾಜ್ಯಾದ್ಯಂತ ಕಾಲೇಜು ಬಂದ್ ಮಾಡಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

- ಜಾಹೀರಾತು -

ಪ್ರತಿಭಟನೆಯಲ್ಲಿ ನಗರ ಕಾರ್ಯದರ್ಶಿ ಸಜಿತ್, ಗೌರವ್, ಮೇಘನಾ, ಲಕ್ಷಿ, ಸ್ಮಿತಾ  ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂದಾರ ಬಾಳುಗೋಡು, ಭಾನುತೇಜ ಸೇರಿದಂತೆ ಹಲವರು ಭಾಗವಹಿಸಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ಅರಮನೆಯಲ್ಲಿ ನಾಳೆ ‘ಸ್ತುತಿಶಂಕರ ಸ್ತೋತ್ರ ಮಹಾಸಮರ್ಪಣೆ’: 25 ಸಾವಿರ ಭಕ್ತರ ಸಂಗಮ

December 19, 2025
ಮುಖಪುಟಮೈಸೂರು ನಗರರಾಜಕೀಯ

ಪೂರ್ಣ 5 ವರ್ಷಕ್ಕೆ ಸಿದ್ದರಾಮಯ್ಯ ಅವ್ರೇ ಮುಖ್ಯಮಂತ್ರಿ ಆಗಿರ್ಲಿ.., ರಸ್ತೆ ತಡೆ ನಡೆಸಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಂದ ಪ್ರತಿಭಟನೆ !

November 29, 2025
ಕ್ರೈಂ ಸುದ್ದಿಗಳುಮುಖಪುಟ

ವಿಜಯಪುರದಲ್ಲಿ ಅಮಾನವೀಯ ಘಟನೆ : ಗಂಡು ಮಗುವಿಗಾಗಿ ಪತ್ನಿಯ ನೆತ್ತಿ ಕೂದಲು ಕತ್ತರಿಸಿದ ಪತಿ !

December 8, 2025
ಮುಖಪುಟಮೈಸೂರು ನಗರ

ಹೊಸ ವರ್ಷದ ಸಂಭ್ರಮ: ಚಾಮುಂಡಿಬೆಟ್ಟದಲ್ಲಿ ಭಕ್ತಸಾಗರ

January 1, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?