PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬೆಂಗಳೂರಿನ ಆಸ್ಪತ್ರೆಯಲ್ಲಿ ಕಾಮುಕ ಸಿಬ್ಬಂದಿಯ ವಿಕೃತಿ: ನರ್ಸ್‌ಗಳ ಖಾಸಗಿ ವಿಡಿಯೋ ಚಿತ್ರೀಕರಣ – ಆರೋಪಿ ಬಂಧನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಬೆಂಗಳೂರಿನ ಆಸ್ಪತ್ರೆಯಲ್ಲಿ ಕಾಮುಕ ಸಿಬ್ಬಂದಿಯ ವಿಕೃತಿ: ನರ್ಸ್‌ಗಳ ಖಾಸಗಿ ವಿಡಿಯೋ ಚಿತ್ರೀಕರಣ – ಆರೋಪಿ ಬಂಧನ
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಬೆಂಗಳೂರಿನ ಆಸ್ಪತ್ರೆಯಲ್ಲಿ ಕಾಮುಕ ಸಿಬ್ಬಂದಿಯ ವಿಕೃತಿ: ನರ್ಸ್‌ಗಳ ಖಾಸಗಿ ವಿಡಿಯೋ ಚಿತ್ರೀಕರಣ – ಆರೋಪಿ ಬಂಧನ

Prathinidhi News
Last updated: December 26, 2025 3:54 pm
Prathinidhi News
Published December 26, 2025
Share
SHARE

ಬೆಂಗಳೂರು, ಡಿಸೆಂಬರ್ 26, 2025 : ರಸ್ತೆಗಳಲ್ಲಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆಯ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಸಹೋದ್ಯೋಗಿ ಮಹಿಳೆಯರ ಖಾಸಗಿತನಕ್ಕೆ ಧಕ್ಕೆ ತಂದಿರುವ ಘಟನೆ ಆತಂಕ ಮೂಡಿಸಿದೆ. ಮಹಿಳಾ ನರ್ಸ್‌ಗಳು ಬಟ್ಟೆ ಬದಲಿಸುವ ದೃಶ್ಯಗಳನ್ನು ರಹಸ್ಯವಾಗಿ ಚಿತ್ರೀಕರಿಸುತ್ತಿದ್ದ ಆಸ್ಪತ್ರೆ ಸಿಬ್ಬಂದಿಯನ್ನು ಪೊಲೀಸರು ಜೈಲಿಗಟ್ಟಿದ್ದಾರೆ.

ನಗರದ ನಾಗರಬಾವಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸುವೆಂದು ಮೊಹಂತ ಎಂಬಾತ ಕಳೆದ ಒಂದು ವರ್ಷದಿಂದ ಆಪರೇಷನ್ ಥಿಯೇಟರ್ (OT) ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ. ಈತ ತನ್ನ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿ, ಮಹಿಳಾ ನರ್ಸ್‌ಗಳು ಬಟ್ಟೆ ಬದಲಿಸುವ ಕೊಠಡಿಯಲ್ಲಿ ಗುಟ್ಟಾಗಿ ಫೋಟೋ ಮತ್ತು ವಿಡಿಯೋಗಳನ್ನು ಚಿತ್ರಿಸುತ್ತಿದ್ದ.

ಆರೋಪಿಯ ಈ ಅನುಮಾನಾಸ್ಪದ ನಡವಳಿಕೆಯನ್ನು ಗಮನಿಸಿದ ನರ್ಸ್‌ ಒಬ್ಬರು ಕೂಡಲೇ ಎಚ್ಚೆತ್ತುಕೊಂಡು ಆಸ್ಪತ್ರೆಯ ವೈದ್ಯರ ಗಮನಕ್ಕೆ ತಂದಿದ್ದಾರೆ. ವಿಷಯದ ಗಂಭೀರತೆಯನ್ನು ಅರಿತ ಆಸ್ಪತ್ರೆಯ ವೈದ್ಯ ಡಾ. ಚೇತನ್ ಅವರು ತಡಮಾಡದೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೊಲೀಸ್ ತನಿಖೆ ಮತ್ತು ಬಂಧನ:

ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಆರೋಪಿ ಸುವೆಂದು ಮೊಹಂತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತನ ಮೊಬೈಲ್ ಫೋನ್ ಪರಿಶೀಲಿಸಿದಾಗ ಸ್ಫೋಟಕ ಸತ್ಯ ಹೊರಬಿದ್ದಿದೆ. ಮೊಬೈಲ್‌ನಲ್ಲಿ ಮಹಿಳಾ ಸಹೋದ್ಯೋಗಿಗಳ ಹಲವಾರು ಖಾಸಗಿ ಫೋಟೋ ಮತ್ತು ವಿಡಿಯೋಗಳು ಪತ್ತೆಯಾಗಿವೆ. ಕಳೆದ ಕೆಲವು ಸಮಯದಿಂದ ಈತ ಈ ಕೃತ್ಯದಲ್ಲಿ ತೊಡಗಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

- ಜಾಹೀರಾತು -

ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಈ ವಿಡಿಯೋಗಳನ್ನು ಈತ ಬೇರೆಲ್ಲಿಯಾದರೂ ಹಂಚಿಕೊಂಡಿದ್ದಾನೆಯೇ ಅಥವಾ ಯಾರಿಗಾದರೂ ಬ್ಲ್ಯಾಕ್‌ಮೇಲ್ ಮಾಡಲು ಬಳಸಿದ್ದಾನೆಯೇ ಎಂಬ ನಿಟ್ಟಿನಲ್ಲಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರಸನ್ನಿಧಾನ

ನಂಜನಗೂಡು: ಶ್ರೀಕಂಠೇಶ್ವರ ದೇವಾಲಯ ಹುಂಡಿಯಲ್ಲಿ 3 ಕೋಟಿಗೂ ಅಧಿಕ ಕಾಣಿಕೆ ಸಂಗ್ರಹ

November 27, 2025
ಮಂಡ್ಯಮುಖಪುಟರಾಜಕೀಯ

ಮಾಜಿ ಸಿಎಂ ಬಿ.ಎಸ್.ವೈ.ಗೆ ಪೋಕ್ಸೋ ಕೇಸ್ ಸಂಕಷ್ಟ: ಮನೆ ದೇವರ ಮೊರೆ, ಹುಟ್ಟೂರಿನಲ್ಲಿ ವಿಶೇಷ ಪೂಜೆ

November 21, 2025
ಮುಖಪುಟಮೈಸೂರು ಗ್ರಾಮಾಂತರಮೈಸೂರು ನಗರ

ಗುಂಗ್ರಾಲ್ ಛತ್ರ ಗ್ರಾಮದಲ್ಲಿ ಬೇಕರಿ ಬೀಗ ಮುರಿದು ಹಣ ಕಳ್ಳತನ ಮಾಡಿದ ಖದೀಮರು..!

November 6, 2025
ಮುಖಪುಟಮೈಸೂರು ನಗರ

ಮೈಸೂರು ನ್ಯಾಯಾಲಯಕ್ಕೆ ಬಂದಿದ್ದ ಬಾಂಬ್ ಬೆದರಿಕೆ ಹುಸಿ: ನಿರಾಳರಾದ ಸಿಬ್ಬಂದಿ ಮತ್ತು ವಕೀಲರು

January 6, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?