PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಕ್ರಮ: ಶಾಸಕ ದರ್ಶನ್ ಧ್ರುವ ನಾರಾಯಣ್ ಭರವಸೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಅಂಕಣ > ಸನ್ನಿಧಾನ > ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಕ್ರಮ: ಶಾಸಕ ದರ್ಶನ್ ಧ್ರುವ ನಾರಾಯಣ್ ಭರವಸೆ
ನಂಜನಗೂಡುಮುಖಪುಟಸನ್ನಿಧಾನ

ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಕ್ರಮ: ಶಾಸಕ ದರ್ಶನ್ ಧ್ರುವ ನಾರಾಯಣ್ ಭರವಸೆ

Prathinidhi News
Last updated: March 30, 2026 12:13 pm
Prathinidhi News
Published March 30, 2026
Share
SHARE

ನಂಜನಗೂಡು, ಮಾರ್ಚ್‌ 30, 2026 : ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನಡೆದ ಪಂಚ ಮಹಾ ರಥೋತ್ಸವದ ಯಶಸ್ಸಿನ ಕುರಿತು ಶಾಸಕ ದರ್ಶನ್ ಧ್ರುವ ನಾರಾಯಣ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ರಥೋತ್ಸವದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೈವದರ್ಶನ ಪಡೆದಿರುವುದು ವಿಶೇಷವಾಗಿದೆ ಎಂದು ತಿಳಿಸಿದರು.

ಈ ವರ್ಷದ ಜಾತ್ರಾ ಮಹೋತ್ಸವವನ್ನು ಅತ್ಯಂತ ವಿಶೇಷವಾಗಿ ಮತ್ತು ವ್ಯವಸ್ಥಿತವಾಗಿ ಆಚರಿಸಬೇಕೆಂದು ಮೊದಲೇ ತೀರ್ಮಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಅದರಂತೆ ಇಂದು ಪಂಚ ರಥೋತ್ಸವವು ಅತ್ಯಂತ ಸಂಭ್ರಮ ಮತ್ತು ಯಶಸ್ವಿಯಾಗಿ ನೆರವೇರಿದೆ ಎಂದು ಅವರು ಹೇಳಿದರು.

ದೇವಸ್ಥಾನದ ಭವಿಷ್ಯದ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ಶಾಸಕರು, ಮುಂದಿನ ದಿನಗಳಲ್ಲಿ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನವನ್ನು ಇನ್ನೂ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಹಂತ ಹಂತವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಜಾತ್ರೆಯ ಯಶಸ್ವಿ ನಿರ್ವಹಣೆಗೆ ಸಹಕರಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಭಕ್ತಾದಿಗಳಿಗೆ ಶಾಸಕರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಬಳ್ಳಾರಿ ಗಲಾಟೆ ವಿಚಾರದಲ್ಲಿ ತನಿಖೆ ವರದಿ ಬಂದಾಗ ಸತ್ಯಾಸತ್ಯತೆ ತಿಳಿಯಲಿದೆ : ಸಚಿವ ಸತೀಶ್ ಜಾರಕಿಹೊಳಿ

January 5, 2026
ಮುಖಪುಟಮೈಸೂರು ನಗರ

ಫಿಟ್‌ ಮೈಸೂರು ವಾಕಥಾನ್‌ ಯಶಸ್ವಿ : ವಾಕಥಾನ್‌ ಯಶಸ್ಸಿಗೆ ಕೈಜೋಡಿಸಿದವರಿಗೆ ಕೃತಜ್ಞತೆ

January 17, 2026
ಬೆಂಗಳೂರುಮುಖಪುಟರಾಜಕೀಯ

ಸಿದ್ದು – ಡಿಕೆಶಿ ಪವರ್ ಶೇರಿಂಗ್ ಕ್ಲೈಮ್ಯಾಕ್ಸ್..! ಆಪ್ತರಿಗೆ ಸಿಎಂ ಡಿನ್ನರ್ ಮೀಟಿಂಗ್

November 22, 2025
ಮುಖಪುಟಮೈಸೂರು ನಗರರಾಜಕೀಯ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

December 9, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?