PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚಿತ್ರ ನಗರಿ ನಿರ್ಮಾಣದಿಂದ ಚಿತ್ರರಂಗಕ್ಕೆ ಮತ್ತಷ್ಟು ಪ್ರೋತ್ಸಾಹ : ಪ್ರಶಸ್ತಿ ಸಮಾರಂಭದಲ್ಲಿ ನಟ ರಿಷಬ್ ಶೆಟ್ಟಿ ಮಾತು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಚಿತ್ರ ನಗರಿ ನಿರ್ಮಾಣದಿಂದ ಚಿತ್ರರಂಗಕ್ಕೆ ಮತ್ತಷ್ಟು ಪ್ರೋತ್ಸಾಹ : ಪ್ರಶಸ್ತಿ ಸಮಾರಂಭದಲ್ಲಿ ನಟ ರಿಷಬ್ ಶೆಟ್ಟಿ ಮಾತು
ಮುಖಪುಟಮೈಸೂರು ನಗರಸಿನಿಮಾ

ಚಿತ್ರ ನಗರಿ ನಿರ್ಮಾಣದಿಂದ ಚಿತ್ರರಂಗಕ್ಕೆ ಮತ್ತಷ್ಟು ಪ್ರೋತ್ಸಾಹ : ಪ್ರಶಸ್ತಿ ಸಮಾರಂಭದಲ್ಲಿ ನಟ ರಿಷಬ್ ಶೆಟ್ಟಿ ಮಾತು

Prathinidhi News
Last updated: November 4, 2025 11:55 am
Prathinidhi News
Published November 4, 2025
Share
SHARE

ಮೈಸೂರು, ನವೆಂಬರ್‌ 4, 2025 : ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಬಹುಮುಖ ಪ್ರತಿಭೆ, ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು, ಚಿತ್ರರಂಗದ ಬೆಳವಣಿಗೆಗೆ ಪ್ರಶಸ್ತಿಗಳು ಮತ್ತು ಮೂಲಭೂತ ಸೌಕರ್ಯಗಳು ಎಷ್ಟು ಮುಖ್ಯ ಎಂಬುದನ್ನು ಒತ್ತಿ ಹೇಳಿದರು.

“ನಾನು ಒಬ್ಬ ಚಿಕ್ಕ ಕಲಾವಿದ. ಇಲ್ಲಿ ಚಿತ್ರರಂಗದ ಗಣ್ಯಾತಿಗಣ್ಯರು ಉಪಸ್ಥಿತರಿದ್ದಾರೆ,” ಎಂದು ತಮ್ಮ ಭಾಷಣ ಆರಂಭಿಸಿದ ರಿಷಬ್ ಶೆಟ್ಟಿ ಅವರು, “ಚಿತ್ರಗಳಿಗೆ ಪ್ರಶಸ್ತಿ ನೀಡಿ ಗೌರವಿಸುವುದರಿಂದ ಹೆಚ್ಚಿನ ಪ್ರೋತ್ಸಾಹ ನೀಡಿದಂತಾಗುತ್ತದೆ. ಕಲಾವಿದರು ಮತ್ತು ತಂತ್ರಜ್ಞರಿಗೆ ಇದು ತುಂಬಾ ಮುಖ್ಯ,” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ 160 ಎಕರೆ ಪ್ರದೇಶದಲ್ಲಿ ಚಿತ್ರ ನಗರಿ ನಿರ್ಮಾಣವಾಗುತ್ತಿರುವ ವಿಷಯದ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, ಈ ಯೋಜನೆಯಿಂದ ಚಿತ್ರರಂಗಕ್ಕೆ ಸಾಕಷ್ಟು ಅನುಕೂಲವಾಗಲಿದೆ ಎಂದರು. ಜಗತ್ತಿನಲ್ಲಿ ತಂತ್ರಜ್ಞಾನವು ಹೆಚ್ಚು ಹೆಚ್ಚು ಬೆಳವಣಿಗೆ ಆಗುತ್ತಿದೆ. ಚಿತ್ರರಂಗವೂ ಅದಕ್ಕೆ ಹೊಂದಿಕೊಂಡು ಹೋಗಬೇಕಿದೆ. ಹೊಸ ತಂತ್ರಜ್ಞಾನ ಅಳವಡಿಕೆಗೆ ಈ ಚಿತ್ರ ನಗರಿ ಪೂರಕವಾಗುತ್ತದೆ ಎಂದು ರಿಷಬ್ ಶೆಟ್ಟಿ ಹೇಳಿದರು.

- ಜಾಹೀರಾತು -

ಪ್ರಶಸ್ತಿಯನ್ನು ಸರ್ಕಾರಿ ಶಾಲೆ ಮಕ್ಕಳಿಗೆ ಅರ್ಪಣೆ:

ತಮಗೆ 2018ನೇ ಸಾಲಿನ ‘ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ’ ವಿಭಾಗದಲ್ಲಿ ‘ಸ.ಹಿ.ಪ್ರಾ.ಶಾಲೆ ಕಾಸರಗೋಡು’ ಚಿತ್ರಕ್ಕೆ ಪ್ರಶಸ್ತಿ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. “ನಾನು ಈ ಹಿಂದೆ ‘ಕಿರಿಕ್ ಪಾರ್ಟಿ’ ಚಿತ್ರಕ್ಕೂ ರಾಜ್ಯ ಪ್ರಶಸ್ತಿ ಪಡೆದಿದ್ದೆ,” ಎಂದು ನೆನಪಿಸಿಕೊಂಡರು. ಕೊನೆಯಲ್ಲಿ, “ನಾನು ಈ ಪ್ರಶಸ್ತಿಯನ್ನು ಎಲ್ಲಾ ಸರ್ಕಾರಿ ಶಾಲೆಯ ಮಕ್ಕಳಿಗೆ ಅರ್ಪಿಸುತ್ತೇನೆ,” ಎಂದು ಘೋಷಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಟಿ. ನರಸೀಪುರ: ಕಾಡಾನೆ ದಾಳಿಗೆ ರೈತ ಬಲಿ

February 18, 2026
ಮುಖಪುಟಮೈಸೂರು ನಗರರಾಜಕೀಯ

ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

January 8, 2026
ಮುಖಪುಟಮೈಸೂರು ನಗರ

ಮೈಸೂರು: ಸೆಸ್ಕ್ ವಾರ್ಷಿಕ ವರದಿ ಕುರಿತು ಸಾರ್ವಜನಿಕ ವಿಚಾರಣಾ ಸಭೆ

February 16, 2026
ಮುಖಪುಟರಾಜಕೀಯ

ಪಂಚಭೂತಗಳಲ್ಲಿ ಲೀನರಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

January 29, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?